ಕರ್ನಾಟಕದಲ್ಲಿ ಕಾಂಗ್ರೆಸ್ಸೆ ಪರ್ಯಾಯ ಆಯ್ಕೆ: ಚುನಾವಣೆ ತಂತ್ರಗಾರಿಕೆ ಸಭೆ ಬಳಿಕ ಸುರ್ಜೆವಾಲ ಭವಿಷ್ಯ
ನವದೆಹಲಿ, ಏಪ್ರಿಲ್ 10: ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಈ ಸಂಬಂಧ ಪ್ರಕಟಗೊಂಡ ಚುನಾವಣಾ ಪೂರ್ವ ಕೆಲವು ಸಮೀಕ್ಷೆಗಳು ಸಹ ಕಾಂಗ್ರೆಸ್‌ಗೆ ಮುನ್ನಡೆ ಆಗಬಹುದು ಎಂದು ತಿಳಿಸಿವೆ. ಇದರ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ತಾವೇ ಅಧಿಕಾರ ಹಿಡಿಯುವುದಾಗಿ ಭವಿಷ್ಯ ನುಡಿಯುತ್ತಿದ್ದಾರೆ. ಜೊತೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಸದರಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ರಾಜ್ಯಕ್ಕೆ ಪರ್ಯಾಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭಾನುವಾರ ಹೇಳಿದರು.

ನವದೆಹಲಿಯಲ್ಲಿ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಕೆಲವು ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿವಾಸದಲ್ಲಿ ಭಾನುವಾರ ಸಭೆ ನಡೆಸಿದರು. ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸುರ್ಜೆವಾಲ ಅವರು, ಇಂದಿನ ಸಭೆಯಲ್ಲಿ ಕರ್ನಾಟಕ ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಭ್ಯರ್ಥಿಗಳು, ಸ್ಥಾನ ಗಳಿಕೆಗೆ ತಂತ್ರಗಳ ಕುರಿತು ಚರ್ಚೆ ನಡೆದಿದೆ ಎಂದರು.
ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕಾಂಗ್ರೆಸ್ ಮಾತ್ರವೇ ಕರ್ನಾಟಕಕ್ಕೆ ಪರ್ಯಾಯ ಪಕ್ಷವಾಗಿದ್ದು, ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದರು.
ಹಗರಣಗಳಿಂದ ಯುವ ಭವಿಷ್ಯಕ್ಕೆ ಅಪಾಯ
ಪ್ರಸ್ತುತ ಬಿಜೆಪಿ ಸರ್ಕಾರದ ಅಡಿಯಲ್ಲಿ ಕರ್ನಾಟಕದಲ್ಲಿ ನಡೆದ ಹಗರಣಗಳಿಂದ ಯುವಕರ ಭವಿಷ್ಯವು ಅಪಾಯದಲ್ಲಿದೆ. ಅವರೆಗಲ್ಲ ಕಾಂಗ್ರೆಸ್ ಪಕ್ಷವೇ ಭರವಸೆಯ ಆಶಾಕಿರಣವಾಗಿದೆ. ರಾಜ್ಯದಲ್ಲಿ ಇತ್ತೀಚಿನ ಹಗರಣಗಳಾದ ಪಿಎಸ್‌ಐ ನೇಮಕಾತಿ ಹಗರಣಗಳು, ಬ್ಯಾಂಕ್ ನೇಮಕಾತಿ ಹಗರಣಗಳು, ಜೂನಿಯರ್ ಇಂಜಿನಿಯರ್ ಹಗರಣಗಳು, ಸಹಾಯಕ ಪ್ರಾಧ್ಯಾಪಕ ಹಗರಣ ಸೇರಿದಂತೆ ಇನ್ನಿತರ ಪ್ರಕರಣಗಳು ರಾಜ್ಯದ ಯವಕರ ಭವಿಷ್ಯದ ಮೇಲೆ ದುಷ್ಪರಿಣಾಮ ಭೀರಿದೆ ಎಂದು ಬಿಜೆಪಿ ಆಡಳಿತ ವಿರುದ್ಧ ಕಿಡಿ ಕಾರಿದರು.
ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪುನಃ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ಈ ಸಲ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದೆ. ಬಿಜೆಪಿ ಸರ್ಕಾರ ನೀಡಿರುವ ಮೀಸಲಾತಿಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಹಿಂಪಡೆಯಲಿದೆ ಎಂದು ಪಕ್ಷ ಈಗಾಗಲೇ ತಿಳಿಸಿದೆ. ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.

ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಬಿಜೆಪಿ ಡಬಲ್ ಇಂಜಿನ್ ಸರ್ಕಾರವು ಕರ್ನಾಟಕದಲ್ಲಿ ಮೂಲಸೌಕರ್ಯ ಮತ್ತು ಇತರ ವಿಷಯಗಳಲ್ಲಿ ಉತ್ತಮ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರತಿ ವಿಭಾಗಗಳನ್ನು ಹೆಚ್ಚಿನ ಜನ ಬೆಂಬಲವನ್ನು ಪಡೆಯುವಲ್ಲಿ ಸಫಲವಾಗಿದೆ. ಹೀಗಾಗಿ ಮುಂದಿನ ತಿಂಗಳ ನಡೆಯುವ ಚುನಾವಣೆಯಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಮೇ 13 ರಂದು ಮತ ಎಣಿಕೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಧಕ್ಕಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 10 ರಂದು ಒಂದೇ ಹಂತದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆಯನ್ನು ನಡೆಯಲಿದೆ ಎಂದು ಭಾರತೀಯ ಚುನಾವಣೆ ಆಯೋಗ ತಿಳಿಸಿದೆ.












Click it and Unblock the Notifications