CM Bommai Road Show: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ: ಕಣ್ಣಾಯಿಸಿದಲೆಲ್ಲಾ ಜನಸಾಗರ
ಬೆಂಗಳೂರು, ಏಪ್ರಿಲ್ 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು ಇವರೊಂದಿಗೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ಸುದೀಪ್ ನೋಡಲು ಸಾಗರೋಪಾದಿಯಲ್ಲಿ ಜನ ಸೇರಿರುವುದು ಕಂಡು ಬಂದಿದೆ. ಕಣ್ಣಾಯಿಸಿದಲೆಲ್ಲ ಜನ ನೂರಾರು ಸಂಖ್ಯೆಯಲ್ಲಿ ತಂಡೋಪತಂಡವಾಗಿ ಕಂಡುಬಂದಿದ್ದಾರೆ. ರೋಶ್ ಶೋನಲ್ಲಿ ಹೂವಿನ ಸುರಿ ಮಳೆ ಗೈದು, ಜೈಕಾರ ಹಾಕುತ್ತಾ ಬಸವರಾಜ ಬೊಮ್ಮಾಯಿ ಮತ್ತು ಸುದೀಪ್ ಅವರನ್ನು ಜನ ಸ್ವಾಗತಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಶಿಗ್ಗಾಂವಿ ನಗರದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಸಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬೃಹತ್ ಮೆರವಣಿಯಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಿಎಂಗೆ ಸಾಥ್ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಶಿಗ್ಗಾಂವಿಗೆ ಆಗಮಿಸಿದ ನಟ ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿ ಮನೆಗೆ ಆಗಮಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಸಿಎಂಗೆ ನಟ ಸುದೀಪ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಾಥ್ ನೀಡಲಿದ್ದಾರೆ. ಈಗಾಗಲೇ ಹುಬ್ಬಳ್ಳಿಯಿಂದ ಒಂದೇ ಹೆಲಿಕಾಪ್ಟರ್‌ನಲ್ಲಿ ಸುದೀಪ್ ಹಾಗೂ ಜೆ.ಪಿ ನಡ್ಡಾ ಶಿಗ್ಗಾಂವಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಏಪ್ರಿಲ್ 19)ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ಗುರುವಾರ (ಏಪ್ರಿಲ್ 20) ಕೊನೆಯ ದಿನಾಂಕವಾಗಿದೆ. ಆದರೆ ನಾಳೆ ಅಮಾವಾಸ್ಯೆ ಇರುವ ಕಾರಣ ಬಹುತೇಕ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮೊದಲು ಶಕ್ತಿ ಪ್ರದರ್ಶನ ಮಾಡಲಿರುವ ಸಿಎಂ ಬೊಮ್ಮಾಯಿ ಶಿಗ್ಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಈ ರೋಡ್ ಶೋನಲ್ಲಿ ಭಾಗಿಯಾಗಲಿದ್ದು, ವಿಶೇಷ ವ್ಯಕ್ತಿ ಈ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿರುವ ನಟ ಕಿಚ್ಚ ಸುದೀಪ್, ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಲಿದ್ದಾರೆ. ಶಿಗ್ಗಾವಿ ನಗರದಲ್ಲಿ ನಡೆಯಲಿರುವ ಬೊಮ್ಮಾಯಿ ಶಕ್ತಿ ಪ್ರದರ್ಶನ ಮೆರವಣಿಗೆಯಲ್ಲಿ ನಟ ಕಿಚ್ಚ ಸುದೀಪ್ ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಶಿಗ್ಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಿಂದ, ಹಳೇಪೇಟೆ ಮಾರ್ಗವಾಗಿ ಶಿಗ್ಗಾವಿ ತಾಲೂಕು ಕ್ರೀಡಾಂಗಣದ ವರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಲಿದ್ದು, ಬಳಿಕ ಬಿಜೆಪಿ ಕಾರ್ಯಕರ್ತರೊಂದಿಗೆ ಬಹಿರಂಗ ಸಭೆ ನಡೆಸಲಿದ್ದಾರೆ. ನಂತರ ಮೆರವಣಿಗೆಯಲ್ಲಿ ಸಾಗಿ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ರಾಜ್ಯದಲ್ಲಿ ಬಿಜೆಪಿ ಪಕ್ಷದ ಪರ ಮತಯಾಚನೆ ಮಾಡಲಿದ್ದಾರೆ.












Click it and Unblock the Notifications