ಕಾಂಗ್ರೆಸ್ ಗೆ ಅತಂತ್ರ ಫಲಿತಾಂಶದ ಭಯ; ಗೆಲ್ಲುವ ಶಾಸಕರನ್ನ ಹಿಡಿದಿಟ್ಟುಕೊಳ್ಳುಲು ಕೈ ಕಲಿಗಳಿಂದ ತಡರಾತ್ರಿ ಪ್ಲಾನ್‌!?

ಬೆಂಗಳೂರು, ಮೇ 12: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ತೆರೆ ಬೀಳುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿವೆ. ಅಬ್ಬರದ ಪ್ರಚಾರ, ತಯಾರಿ ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಹಾಗೂ ಬಿಜೆಪಿ[ ಪ್ರಯತ್ನ ನಡೆಸಿದ್ರೆ, ಇತ್ತ ಜೆಡಿಎಸ್‌ ನಾಯಕ ಕುಮಾರಸ್ವಾಮಿ ಸಿಂಗಾಪುರದಲ್ಲಿದ್ದಲೇ ಮೈತ್ರಿ ಲೆಕ್ಕಾಚಾರದ ಚಿಂತನೆಯಲ್ಲಿದ್ದಾರೆ.

ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಗೆ ಹೆಚ್ಚಿನ ಸ್ಥಾನಗಳನ್ನ ಪಡೆದುಕೊಂಡಿದೆ. ಇತ್ತ ಆಡಳಿತರೂಢ ಬಿಜೆಪಿ ಈ ಎಕ್ಸಿಟ್‌ ಪೋಲ್‌ ಗಳು ಸುಳ್ಳು, ಸರ್ಕಾರ ರಚನೆಗೆ ನಮ್ಮ ಬಳಿ ಪ್ಲಾನ್‌ ಬಿ ರೆಡಿ ಇದೆ ಎಂದು ಹೇಳಿದ್ದು, ಇದು ಕಾಂಗ್ರೆಸ್‌ ನಾಯಕರಿಗೆ ತಳಮಳ ಶುರುವಾಗುವಂತೆ ಮಾಡಿದೆ.

congress

ಹೌದು, ಈ ಬಾರೀ ರಾಜ್ಯದ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಹೀಗಾಗಿಯೇ ಎಕ್ಸಿಟ್‌ ಪೋಲ್‌ ನಲ್ಲಿ ನಮಗೆ ಹೆಚ್ಚಿನ ಸ್ಥಾನ ಬಂದಿವೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ದರಾಗಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದು, ಬಿಜೆಪಿ ಹೈಕಮಾಂಡ್‌ ನಾಯಕರಿಂದ ಬಂದ ಸಂದೇಶದಿಂದ ಕಾಂಗ್ರೆಸ್‌ ನಾಯಕರಿಗೆ ಚಿಂತೆಗೊಳಲಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರ ಹಿಡಿಯಲಿದೆ. ಇನ್ನು ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಕಾಂಗ್ರೆಸ್‌ ನಾಯಕರ ನಿರೀಕ್ಷೆ ಸುಳ್ಳಾಗಿ ಅತಂತರ ಫಲಿತಾಂಶ ಬಂದು ಹಿಂದೆನಂತೆ ನಮ್ಮ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾದರೇ ಏನು ಎನ್ನುವ ಪ್ರಶ್ನೆ ಕಾಂಗ್ರೆಸ್‌ ನಾಯಕರನ್ನ ನಿದ್ದೆಗೆಡಿಸುವಂತೆ ಮಾಡಿದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪ್ಲಾನ್ ಮಾಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

bjp and congress

ಬಿಜೆಪಿ ನಾಯಕರು ಕಾಂಗ್ರೆಸ್‌ ಏನೇ ಮಾಡಿದರೂ ಸರ್ಕಾರ ಮಾಡಲು ಪ್ಲಾನ್‌ ಬಿ ರೆಡಿ ಇದೆ ಎಂದು ಹೇಳಿದ್ದಾರೆ. ಅಲ್ಲದೇ ಅತಂತ್ರ ಫಲಿತಾಂಶದ ಸಾಧ್ಯತೆ ಹಿನ್ನೆಲೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಗುರುವಾರ ತಡರಾತ್ರಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಈ ಆನ್​ಲೈನ್ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಿದ್ದು, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಆಪರೇಷನ್‌ ಕಮಲ ಹಾಗೂ ಆಮಿಷದಿಂದಾಗಿ 17 ಜನ ನಾಯಕರು ಬಿಜೆಪಿ ಸರ್ಕಾರ ರಚನೆಗೆ ಕಾರಣಿಕರ್ತರಾದರು. ಈ ಬಾರಿಯೂ ಕಾಂಗ್ರೆಸ್ ಪಕ್ಷಗೆ ಸ್ಪಷ್ಟ ಬಹುಮತ ಬಾರದಿದ್ದರೆ ಗೆದ್ದವರು ಯಾವುದೇ ಬೇರೆ ಪಕ್ಷದ ಆಮಿಷಗಳಿಗೆ ಒಳಗಾಗದಂತೆ ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಈ ಸಭೆ ನಡೆಸಲಾಗಿದೆ. ಈ ವೇಳೆ ಮುಂದಿನ ತಂತ್ರಗಾರಿಕೆ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೂಚ್ಯವಾಗಿ ಸೂಚನೆ ನೀಡಲಿದ್ದಾರೆ. ಒಂದೊಮ್ಮೆ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಕೈಗೊಳ್ಳಬೇಕಾದ ನಿರ್ಧಾರ ಬಗ್ಗೆಯೂ ಕೆಲವು ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಈ ಬಾರಿಯ ಚುನಾವಣೆಯಲ್ಲಿ ಕೆಲವು ಪಕ್ಷೇತರ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಇದ್ದು, ಅನಿವಾರ್ಯ ಪರಿಸ್ಥಿತಿ ಬಂದಾಗ ಅವರನ್ನು ಸೆಳೆಯುವ ನಿಟ್ಟಿನಲ್ಲೂ ಕಾರ್ಯತಂತ್ರವನ್ನು ಕಾಂಗ್ರೆಸ್ ರೂಪಿಸುತ್ತಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಕಾಂಗ್ರೆಸ್‌ ನಾಯಕರು ಮಹತ್ವದ ವಿಚಾರಗಳನ್ನ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಚುನಾವಣೋತ್ತರ ಸಮೀಕ್ಷೆ ಬಹಿರಂಗದ ನಂತರ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಇತ್ತ ಬಿಜೆಪಿ ನಾಯಕರೂ ಸಮೀಕ್ಷೆ ಏನೇ ಇರಲಿ, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಕಾದು ನೋಡಿರಿ, ಕಾಂಗ್ರೆಸ್‌ ಏನೇ ಮಾಡಿದರೂ ಸರ್ಕಾರ ರಚಿಸುವುದು ನಾವೇ ನಮ್ಮ ಬಳಿ ಬಿ ಪ್ಲಾನ್‌ ರೆಡಿ ಇದೆ ಎಂದು ಹೇಳುತ್ತಿದ್ದಾರೆ. ಇತ್ತ, ಜೆಡಿಎಸ್ ಸರ್ಕಾರ ರಚಿಸುವ ಬಗ್ಗೆ ಯಾವುದೇ ಮಾತನಾಡದಿದ್ದರೂ, ಅತಂತ್ರ ಫಲಿತಾಂಶ ಬಂದರೆ ಜೆಡಿಎಸ್ ಕಿಂಗ್ ಮೇಕರ್ ಆಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+