ಗ್ಯಾರಂಟಿಯಿಂದ ಗೆದ್ದ ಕಾಂಗ್ರೆಸ್!‌ ಕೈ ಹಿಡಿದ ಸಿದ್ದು-ಡಿಕೆಶಿ: ವರ್ಕೌಟ್‌ ಆಯ್ತಾ ಪಾದಯಾತ್ರೆ!

ಬೆಂಗಳೂರು, ಮೇ13: ಕರ್ನಾಟಕ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್‌ ಮುನ್ನುಗ್ಗುತ್ತಿದ್ದು, ಗೆಲುವಿನ ಸನಿಹದಲ್ಲಿದ್ದೆ. ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ರಾಜ್ಯದಾದ್ಯಂತ ಕಾಂಗ್ರೆಸ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು,ಆಡಳಿತರೂಢ ಬಿಜೆಪಿಗೆ ಬಾರೀ ಹಿನ್ನಡೆಯಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಆಡಳಿತ ರೂಢ ಬಿಜೆಪಿಪ ಪಕ್ಷದ ಭ್ರಷ್ಟಚಾರ ಹಾಗೂ ಆಡಳಿತ ವಿರೋಧಿ ಅಲೆಯಿಂದ ನಮಗೆ ಬಹುಮತ ಬರಲಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೆಯನ್ನ ನೀಡಿದ್ದು, ಅದರಂತೆ ಕಾಂಗ್ರೆಸ್‌ ಗೆಲುವಿನ ಸಹಿಹದಲ್ಲಿದ್ದಾರೆ.

Karnataka Election 2023

ಕಾಂಗ್ರೆಸ್‌ ಕೈ ಹಿಡಿದ ಜನರು ಇಲ್ಲಿವೆ ಪ್ರಮುಖ ಕಾರಣಗಳು?

ಬಿಜೆಪಿ ವಿರುದ್ದ 40% ಆರೋಪ: ಮೈತ್ರಿ ಸರ್ಕಾರದ ಪತನದ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ವಿರುದ್ದ ಸಾಲು ಸಾಲು ಭ್ರಷ್ಟಚಾರದ ಆರೋಪ, ಪೇ ಸಿಎಂ , 40 % ಕಮಿಷನ್‌ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆಯನ್ನ ನಡೆಸಿದ್ದು, ಈ ವಿಚಾರ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಸದ್ದು ಮಾಡಿದ್ದು, ಇದು ಕಾಂಗ್ರೆಸ್‌ ನ ಚುನಾವಣಾ ಅಸ್ತ್ರವಾಗಿ ಮಾಡಿಕೊಂ

ಗ್ಯಾರೆಂಟಿ ಘೋಷಣೆಗಳ ಮೂಲಕ ಬಿಜೆಪಿ ಠಕ್ಕರ್: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸುದ್ದಿಯಾಗಿದ್ದು, ಕಾಂಗ್ರೆಸ್‌ ಗ್ಯಾರಂಟಿ ಘೋಷಣೆಗಳು. ಈಗಾಗಲೇ ಸಾಲು ಸಾಲು ಘೋಷಣೆಗಳನ್ನ ಮಾಡಿರುವ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ ಮೂಲಕ ಬಿಜೆಪಿಗೆ ಠಕ್ಕರ್‌ ನೀಡಿದೆ.

Karnataka Election 2023

ಕಾಂಗ್ರೆಸ್ ಪಕ್ಷ ತಾನು ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡೋದಾಗಿ ಹೇಳಿದೆ. ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ, ಗೃಹಿಣಿಯರಿಗೆ ತಿಂಗಳಿಗೆ 2 ಸಾವಿರ ರೂ. ಸಹಾಯ ಧನ ನೀಡೋದಾಗಿ ಹೇಳಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ನೀಡೋದಾಗಿ ಕಾಂಗ್ರೆಸ್ ಹೇಳಿದೆ. ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡೋದಾಗಿಯೂ ಕಾಂಗ್ರೆಸ್ ಭರವಸೆ ನೀಡಿದ್ದು, ಈ ಬಾರೀ ಗೆಲುವಿನ ಸನಿಹದಲ್ಲಿದ್ದ ಕಾಂಗ್ರೆಸ್‌ ಗೆ ಗ್ಯಾರಂಟಿ ಘೋಷಣೆಗಳು ಕೈ ಹಿಡಿದಿದೆ.

ಖರ್ಗೆ ಹತ್ತೆ ಆಡಿಯೋ ವೈರಲ್ : ಚುನಾವಣಾ ಪ್ರಚಾರದ ನಡುವೆ ಕಾಂಗ್ರೆಸ್‌ ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಪತ್ನಿ ಹಾಗೂ ಮಕ್ಕಳ ಹತ್ಯೆಗೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಚು ರೂಪಿಸಿದ್ದಾರೆ ಎಂಬ ಸುದ್ದಿ ಸಾಕಷ್ಟು ಸದ್ದು ಮಾಡಿದ್ದು, ಈ ವಿಚಾರವನ್ನ ಸಹ ಕಾಂಗ್ರೆಸ್‌ ಪ್ರಚಾರದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದು, ಪ್ರಧಾನಿ ಮೋದಿ ಹಾಗೂ ಬೊಮ್ಮಾಯಿ ಅವರು ಮೌನಕ್ಕೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಕೈ ಪಾದಯಾತ್ರೆ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿಲುವಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,‌ ರಾಜ್ಯದ ಜನರ ಹಿತಕ್ಕಿಂತ ತಮಿಳುನಾಡಿನ ಹಿತವೇ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕರು ಸಂಗಮದಿಂದ ಬೆಂಗಳೂರಿನವರೆಗೆ ಪಾದಯತ್ರೆ ನಡೆಸಿದ್ದು, ಇದು ಜನರನ್ನ ಸೆಳೆಯಲು ಪ್ರಮುಖ ಕಾರಣವಾಗಿದೆ. ಅದು ಅಲ್ಲದೇ ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ನಡೆಸಿದ ಭಾರತ್‌ ಜೋಡೋ ಯಾತ್ರೆಯೂ ಕರ್ನಾಟದಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್‌ ನಾಯಕರು ನಡೆಸಿದ ಪಾದಯಾತ್ರೆಗಳು ಕಾಂಗ್ರೆಸ್‌ ಗೆಲುವಿಗೆ ಸಹಕಾರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+