Mallikarjun Kharge:ಒಂದು ಇಂಜಿನಿಗೆ 40 ಪರ್ಸೆಂಟ್ ಆದರೆ,ಡಬಲ್ ಇಂಜಿನ್‌ಗೆ 80 ಪರ್ಸೆಂಟ್ ಕಮಿಷನ್ನಾ: ಮಲ್ಲಿಕಾರ್ಜುನ್ ಖರ್ಗೆ
ಮಂಗಳೂರು,ಏಪ್ರಿಲ್26: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ಸಜ್ಜಾಗಿದೆ. ಇತ್ತ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ಸಜ್ಜಾಗಿದು, ಬಿಜೆಪಿ ಹೈಕಮಾಂಡ್ ನಾಯಕರ ರಾಜ್ಯ ಪ್ರವಾಸಕ್ಕೆ ಠಕ್ಕರ್ ಕೊಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಖಾಡಕ್ಕಿಳಿದಿದ್ದು, ಡಬಲ್ ಇಂಜಿನ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಕುರಿತು ಬುಧವಾರ ಎಐಸಿಸಿ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪದೇ ಪದೇ ಬಿಜೆಪಿಯವರು ತಮ್ಮದು ಡಬಲ್ ಎಂಜಿನ್ ಸರ್ಕಾರ ಅಂತಾರೆ. ಒಂದು ಇಂಜಿನಿಗೆ 40 ಪರ್ಸೆಂಟ್ ಆದರೆ, ಡಬಲ್ ಇಂಜಿನ್‌ಗೆ 80 ಪರ್ಸೆಂಟ್ ಕಮಿಷನ್ನಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷದಲ್ಲಿ ಯಾವ ಸಾಧನೆ ಮಾಡಿದೆ? ಎಂದು ಪ್ರಶ್ನಿಸಿದ ಅವರು, ಈ ಡಬಲ್ ಇಂಜಿನ್‌ನಲ್ಲಿ 40 ಪಸೆಂಟಿನ ಒಂದು ಇಂಜಿನ್ ಕೆಟ್ಟು ಹೋಗಿದೆ. ಅದರ ಬೆನ್ನಲ್ಲೇ ಇನ್ನೊಂದು ಇಂಜಿನ್ ಕೂಡ ಹಾಳಾಗಲಿದೆ ಎಂದು ಬಿಜೆಪಿ ಸರ್ಕಾರದ ವಿರುದ್ದ ವ್ಯಂಗ್ಯವಾಡಿದರು.
ಇನ್ನೂ ಈ ಬಾರಿ ರಾಜ್ಯ ಚುನಾವಣೆಯಲ್ಲಿ ಕನಿಷ್ಠ 150 ಸೀಟ್‌ನ್ನು ಕಾಂಗ್ರೆಸ್‌ಗೆ ಕೊಟ್ಟು ಸ್ಥಿರ ಸರ್ಕಾರ ನೀಡಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿದ ಅವರು, ಅಲ್ಪ ಅಂತರ ಬಂದರೆ ಶಾಸಕರನ್ನು ಕಳ್ಳತನ ಮಾಡುವ ಬಿಜೆಪಿಯ ಹಾವಳಿ ಜಾಸ್ತಿಯಾಗುತ್ತದೆ. ಈಗಾಗಲೇ ಅವರು ಕರ್ನಾಟಕ, ಗೋವಾ, ಮಧ್ಯಪ್ರದೇಶ, ಮಣಿಪುರ ಮತ್ತಿತರ ಕಡೆ ಕಳ್ಳತನ ಮಾಡಿದ್ದಾರೆ. ಐಟಿ, ಇಡಿ, ಸಿಬಿಐಗಳನ್ನು ಇಟ್ಟುಕೊಂಡು ಬೆದರಿಕೆಯೊಡ್ಡಿ ಶಾಸಕರನ್ನು ತಮ್ಮ ಪಕ್ಷಕ್ಕೆ ಕರೆಸಿಕೊಳ್ತಾರೆ ಎಂದು ಆರೋಪಿಸಿದರು.

ಇನ್ನೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಖರ್ಗೆ, ಬಿಜೆಪಿಯ ಶಾಸಕರು ಅವರ ಸಂಬಂಧಿಕರು ಲಂಚ ತೆಗೆದುಕೊಳ್ಳುವುದನ್ನು ಎಲ್ಲರೂ ನೋಡಿದ್ದಾರೆ. ಇಷ್ಟೆಲ್ಲ ಆದರೂ ಪ್ರಧಾನಿ ಮೋದಿ ಮಾತ್ರ ಸುಮ್ಮನಿದ್ದಾರೆ. ಬೇರೆ ಪಕ್ಷದಲ್ಲಿ ಇಂಥದ್ದೇನಾದರೂ ನಡೆದರೆ ತಕ್ಷಣ ಪ್ರತಿಕ್ರಿಯಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಈ ಸರ್ಕಾರದ ಮೇಲೆ ಸಾಕಷ್ಟು ಭ್ರಷ್ಟಚಾರದ ಆರೋಪಗಳಿಗೆ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ದಂಧೆಗೆ ನಾವು ಸಾಕ್ಷಿ ಕೊಡಬೇಕಿಲ್ಲ. ರಾಜ್ಯದ ಗುತ್ತಿಗೆದಾರರು, ಅನುದಾನಿತ ಶಾಲೆ, ಕಾಲೇಜುಗಳು ಲಿಖಿತವಾಗಿ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ, ರಾಷ್ಟ್ರಪತಿ, ರಾಜ್ಯಪಾಲರು, ಲೋಕಾಯುಕ್ತಕ್ಕೆ ತಿಳಿಸಿದ್ದಾರೆ. ಇದಕ್ಕಿಂತ ದೊಡ್ಡ ಸಾಕ್ಷಿ ಏನು ಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಳುತ್ತಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷಗಳಲ್ಲಿ ನೀವೇನು ಮಾಡಿದ್ದೀರಿ ಹೇಳಿ ಎಂದು ಸವಾಲು ಹಾಕಿದರು.












Click it and Unblock the Notifications