Dk Shivakumar: ಹೆಲಿಕಾಪ್ಟರ್ ತಪಾಸಣೆಗೈದ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಮಾಡಿದ ಮನವಿ ಏನು?

ಬೆಂಗಳೂರು, ಏಪ್ರಿಲ್ 23: ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸಕ್ರಿಯವಾಗಿರುವ ಚುನಾವಣಾ ಆಯೋಗದ ಅಧಿಕಾರಿಗಳು ವಾಹನಗಳಂತೆ ಹೆಲಿಕಾಪ್ಟರ್‌ಗಳನ್ನು ತಪಾಸಣೆ ಮಾಡಿದ್ದಾರೆ. ಈ ಕುರಿತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚುನಾವಣಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯ ಚುನವಣಾಧಿಕಾರಿಗಳು, ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಕರ್ನಾಟಕದಾದ್ಯಂತ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕಾರು, ಬಸ್‌, ಬೈಕು ಸೇರಿದಂತೆ ಎಲ್ಲ ಬಗೆಯ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಅಕ್ರಮ ಹಣ, ಮದ್ಯೆ, ಬಂಗಾರ, ಉಡುಗೊರೆ ವಸ್ತುಗಳು ಕಂಡು ಬಂದರೆ ಅವುಗಳನ್ನು ಕೂಡಲೇ ಜಪ್ತಿ ಮಾಡುತ್ತಿದ್ದಾರೆ.

karnataka Election 2023; Election officials and police was Checked helicopters

ಈ ವಿಷಯವಾಗಿ ಚುನಾವಣಾಧಿಕಾರಿಗಳು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಶನಿವಾರ ಹಾಗೂ ಭಾನುವಾರ ಅಧಿಕಾರಿಗಳು ಹೆಲಿಕಾಪ್ಟರ್‌ ಅನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಲಗೇಜು ಪರಿಶೀಲಿಸಿದ್ದಾರೆ.

ಹೆಲಿಕಾಪ್ಟರ್ ತಪಾಸಣೆ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, 'ಚನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು'' ಮನವಿ ಮಾಡಿಕೊಂಡಿದ್ದಾರೆ.

ರಾಹುಲ್ ಗಾಂಧಿ ಬಂದಿದ್ದ ಹೆಲಿಕಾಪ್ಟರ್ ತಪಾಸಣೆ
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವ ಭವನದ ಬಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅವರನ್ನು ಕರೆದುಕೊಂಡು ಬಂದಿದ್ದ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದರು. ರಾಹುಲ್ ಗಾಂಧಿಯವರು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ತೆರಳಿದ್ದರು. ಈ ವೇಳೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಹೆಲಿಪ್ಯಾಡ್‌ನಲ್ಲಿ ತಪಾಸಣೆ ಮಾಡಿದ ಅಧಿಕಾರಿಗಳು ಪರಿಶೀಲನೆಯ ಫೋಟೊ ತೆಗೆಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

karnataka Election 2023; Election officials and police was Checked helicopters

26 ದಿನಗಳಿಂದ ಚುನಾವಣಾಧಿಕಾರಿಗಳ ತಪಾಸಣೆ
ಮಾರ್ಚ್ 29 ರಂದು ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಅಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಅಂದಿನಿಂದ ಚುನಾವಣಾಧಿಕಾರಿಗಳು ಸೇರಿದಂತೆ ವಿಶೇಷ ತಂಡಗಳು ಚೆಕ್‌ ಪೋಸ್ಟ್‌ನಿರ್ಮಿಸಿಕೊಂಡು ವಾಹನವಗಳ ತಪಾಸಣೆ ನಡೆಸಿತ್ತಿದ್ದಾರೆ.

ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಯೇ ಇಲ್ಲದ ನಗದು ಹಣ, ಸಾವಿರಾರು ಲೀಟರ್ ಅಕ್ರಮ ಮದ್ಯೆ, ಬಂಗಾರ, ಮತದಾರರ ಓಲೈಕೆಗಾಗಿ ಸಾಗಿಸುತ್ತಿದ್ದ ಉಡುಗೊರೆಗಳು ಹಾಗೂ ಇನ್ನಿತರ ವಸ್ತುಗಳು ಮತ್ತು ವಾಹನಗಳನ್ನು ಜಪ್ತಿ ಆಗಿವೆ. ಈ ಸಂಬಂಧ ಸಾಕಷ್ಟು ಪ್ರಕರಣಗಳನ್ನು ಆಯಾ ವ್ಯಾಪ್ತಿಯ ಪೊಲೀಸರು ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+