karnataka Election 2023: ಜೆಡಿಎಸ್ ಜತೆ ಮೈತ್ರಿ ಬಗ್ಗೆ ಮೋದಿ ಸಾಹೇಬ್ರು, ದೇವೇಗೌಡ್ರು ಒಪ್ಪಂದ; ಪ್ರೀತಂ ಗೌಡ ಹೇಳಿದ್ದೇನು?
ಹಾಸನ,ಏಪ್ರಿಲ್28: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಶತಾಯುಗತಾಯ ಅಧಿಕಾರಕ್ಕೆ ಬರಲು ಪಣ ತೊಟ್ಟಿರುವ ರಾಜಕೀಯ ಪಕ್ಷಗಳಿಗೆ ಸಾಲು ಸಾಲು ಚುನಾವಣಾ ಸಮೀಕ್ಷೆಗಳಿಂದ ಅಘಾತ ಉಂಟಾಗಿದ್ದು, ಅತಂತ್ರ ಫಲಿತಾಂಶ ಬರಲಿದೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನನ್ನ ಜೊತೆಗೆ ಕಾಂಗ್ರೆಸ್ ಹಾಗೂ ಬಿಜೆಪಿಯ ದೆಹಲಿ ನಾಯಕರು ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಯನ್ನ ನೀಡುವ ಮೂಲಕ ಮೈತ್ರಿ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ರು, ಇನ್ನೂ ಈ ಚುನಾವಣೆಯನ್ನ ಗೆಲ್ಲಲ್ಲು ಹಲವು ತಂತ್ರಗಾರಿಕೆಯನ್ನ ನಡೆಸಿರುವ ರಾಜಕೀಯ ಪಕ್ಷಗಳಿಗೆ ಹಲವು ಸಮೀಕ್ಷೆಯಿಂದ ತಲೆಬಿಸಿಯಾಗಿದೆ.

ಇನ್ನೂ ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭರಾಟೆ ತೀವ್ರಗೊಂಡಿರುವ ನಡುವೆಯೇ ಜೆಡಿಎಸ್ ಹಾಗೂ ಬಿಜೆಪಿ ನಡುವೆ ವರಿಷ್ಠರ ಮಟ್ಟದಲ್ಲಿ ಹೊಂದಾಣಿಕೆ ನಡೆದಿದೆ ಎಂಬ ಅರ್ಥದ ಹಾಸನ ಶಾಸಕ ಪ್ರೀತಂಗೌಡ ಅವರು ಹೇಳಿಕೆ ಸಾಕಷ್ಟು ಅಚ್ಚರಿ ಮೂಡಿಸಿದ್ದಾರೆ.
ಹೌದು, ಆಡಳಿತರೂಢ ಬಿಜೆಪಿ ಈ ಹಿಂದೆ 2018 ರಲ್ಲಿ ಮೈತ್ರಿ ಸರ್ಕಾರದ ಪತನದ ನಂತರ ಬಿಜೆಪಿ ಸರ್ಕಾರ ರಚನೆಗೆ ಕನಡೆಸಿದ ಸರ್ಕಸ್ ಎಲ್ಲಾರಿಗೂ ಗೊತ್ತಿರುವ ವಿಚಾರವೇ ಈ ನಡುವೆ ಮತ್ತೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೆವೆ ಎಂಬ ವಿಶ್ವಾಸದಲ್ಲಿದೆ. ಜೊತೆಗೆ ಕೇಂದ್ರದ ನಾಯಕರು ಚುನಾವಣಾ ಪ್ರಚಾರ ನಡೆಸುತ್ತಿದ್ದು, ಈ ನಡುವೆ ಪ್ರೀತಂಗೌಡ ಈ ರೀತಿಯ ಹೇಳಿಕೆ ತೀವ್ರ ಕುತೂಹಲ ಮೂಡಿಸಿದ್ದು, ಚುನಾವಣಾ ಹೊತ್ತಲಿ ಬಿಜೆಪಿಗೆ ಮುಜುಗರವನ್ನ ಉಂಟು ಮಾಡಿದೆ.

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದ್ದೇನು?
ಹೈವೋಲ್ಟೆಜ್ ಕ್ಷೇತ್ರವಾಗಿರುವ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಯ ಬಾವುಟ ಹಾರಿಸಬೇಕು ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಪಣತೊಟ್ಟಿದ್ದಾರೆ. ಈಗಾಗಲೇ ರೇವಣ್ಣ ಕುಟುಂಬದ ವಿರುದ್ದ ಪಣತೊಟ್ಟಿರುವ ಪ್ರೀತಂ ಗೌಡ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಪ್ರಚಾರದ ವೇಳೆ ಜೆಡಿಎಸ್ ಜೊತೆಗಿನ ಮೈತ್ರಿ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಶಾಸಕ ಪ್ರೀತಂ ಗೌಡ, ಜೆಡಿಎಸ್ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಬಹುಮತ ಬರುವುದಿಲ್ಲ. ಈಗಾಗಲೇ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಹೇಬ್ರು ಹಾಗೂ ದೇವೇಗೌಡ್ರು ಇಬ್ಬರೂ ಒಪ್ಪಂದ ಮಾಡಿಕೊಂಡಿದ್ದಾರೆ. ಹಾಗಾಗಿ ನೀವು ಜೆಡಿಎಸ್‌ಗೆ ಮತ ಹಾಕಿದರೂ ಬಿಜೆಪಿಗೆ ಹಾಕಿದಂತೆ ಎಂದು ಜೆಡಿಎಸ್ ಜೊತೆಗಿನ ಸುಳಿವು ಬಿಟ್ಟುಕೊಟ್ಟಿದ್ದಾರೆ.
ನೀವು ಹಾಸನದಿಂದ ಬೆಂಗಳೂರಿಗೆ ಹೋಗುವುದಾದರೆ ಬೆಳ್ಳೂರು ಕ್ರಾಸ್ ಮೇಲೆಯೇ ಹೋಗಬೇಕು. ಅದನ್ನು ಬಿಟ್ಟು ಮೈಸೂರು ಸುತ್ತಿಕೊಂಡು ಹೋಗುತ್ತೇನೆ ಎಂದರೆ ನಾನೇನು ಮಾಡಲು ಆಗಲ್ಲ. ಎಲ್ಲಾ ಹಳ್ಳದ ನೀರು ಹರಿದು ಸಮುದ್ರಕ್ಕೇ ಬರೋದು. ಹಾಗಾಗಿ ನೀವು ಸುತ್ತಾಡಿಕೊಂಡು ನನ್ನ ಬಳಿ ಬರುವುದಕ್ಕಿಂತ ನೇರವಾಗಿ ಬನ್ನಿ. ಜೆಡಿಎಸ್ ಗೆ ಮತ ಹಾಕದಾರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಹೇಳುವ ಮೂಲಕ ಈ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮತ ಹಾಕುವ ಬದಲು ಬಿಜೆಪಿಗೇ ಮತ ಹಾಕಿ ಕ್ಷೇತ್ರ ಜನರಿಗೆ ಸಲಹೆ ನೀಡಿದರು.












Click it and Unblock the Notifications