Karnataka elections 2023: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?, ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ, ಮೇ, 09: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಸೋಮವಾರ (ಮೇ 08) ಸಂಜೆಯೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಮತ್ತೊಂದೆಡೆ ಅಭ್ಯರ್ಥಿಗಳು ಮತದಾರರನ್ನು ಮತಗಟ್ಟೆ ಬಳಿ ಕರೆತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮೇ 10 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

ಚುನಾವಣೆಯ ಮೊದಲು, ಅವರು ಮತ ಚಲಾಯಿಸಲು ಅರ್ಹರೇ ಅಥವಾ ಇಲ್ಲವೇ ಎಂಬುದನ್ನು ನೋಡಲು ಮತದಾರರ ಪಟ್ಟಿಯಲ್ಲಿ ಅವರ ಹೆಸರು, ಮತ್ತು ಮತದಾನದ ಕೇಂದ್ರವನ್ನು ವೈಯಕ್ತಿಕ EPIC ಸಂಖ್ಯೆಯ ಮೂಲಕ ಪರಿಶೀಲಿಸಬೇಕಾಗುತ್ತದೆ.

voter id verification

ಭಾರತೀಯ ಚುನಾವಣಾ ಆಯೋಗವು ಎಲ್ಲಾ ಮತದಾರರಿಗೆ ಮತದಾರರ ಫೋಟೋ ಗುರುತಿನ ಚೀಟಿ ಅಥವಾ EPIC ಸಂಖ್ಯೆಯನ್ನು ನೀಡುತ್ತದೆ. EPIC ಸಂಖ್ಯೆಯ ಮೂಲಕ ಮತದಾರರ ಪಟ್ಟಿಯಲ್ಲಿನ ತಮ್ಮ ಹೆಸರುಗಳನ್ನು ಪರಿಶೀಲಿಸಬಹುದು.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?

1. ಮೊದಲು ECI ವೆಬ್‌ಸೈಟ್‌ electoralsearch.inಗೆ ಭೇಟಿ ನೀಡಬೇಕಾಗುತ್ತದೆ.

2. ವೆಬ್‌ಸೈಟ್‌ನಲ್ಲಿ EPIC ಸಂಖ್ಯೆಯ ಮೂಲಕ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಇದೆಯೋ ಇಲ್ಲವೂ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು.

3. ನಂತರ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ, ರಾಜ್ಯವನ್ನು ಆಯ್ಕೆಮಾಡಿ.

4. ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ನಂತರ ಸರ್ಚ್‌ ಬಟನ್‌ ಮೇಲೆ ಕ್ಲಿಕ್ ಮಾಡಿ.

5. ಕ್ಯಾಪ್ಚಾ ಕೋಡ್‌ವರೆಗಿನ ವಿಧಾನಗಳು ಮುಗಿದ ಮೇಲೆ ಕರ್ನಾಟಕದ ಮತದಾರರ ಪಟ್ಟಿಯಲ್ಲಿ ನಿಮ್ಮ ವಿವರಗಳು ಮತ್ತು ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ತಿಳಿಯುತ್ತಿದೆ.

ಯಾರಿಗಾದರೂ EPIC ಸಂಖ್ಯೆ ತಿಳಿದಿಲ್ಲದಿದ್ದರೆ, ಅವರು ತಮ್ಮ ಹೆಸರು, ಹುಟ್ಟಿದ ದಿನಾಂಕ ಮತ್ತು ತಮ್ಮ ವಿಧಾನಸಭಾ ಕ್ಷೇತ್ರದ ವಿವರಗಳ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹುಡುಕಬಹುದು. ನಂತರ ಅವರ EPIC ಸಂಖ್ಯೆ ಮತ್ತು ಮತಗಟ್ಟೆಯ ವಿವರ ಲಭ್ಯವಾಗಲಿದೆ.

ಮತದಾನಕ್ಕೆ ಕಡ್ಡಾಯವಾಗಿ ಬೇಕಾಗುವ ದಾಖಲೆಗಳು

1 ಆಧಾರ್ ಕಾರ್ಡ್ ಮತ್ತು ಗುರುತಿನ ಚೀಟಿ ಹೊಂದಿರಬೇಕಾಗುತ್ತದೆ.

2. ಆಧಾರ್ ಕಾರ್ಡ್ ಹೊಂದಿಲ್ಲದಿದ್ದರೆ, ಅಂತಹವರು ಪಾಸ್‌ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್‌ನಂತಹ ಯಾವುದೇ ಫೋಟೋ ಐಡಿಯನ್ನು ಹೊಂದಿರಬೇಕಾಗುತ್ತದೆ.

ಮತ ಚಲಾಯಿಸಲು ಮತಗಟ್ಟೆಗೆ ಹೋಗುವಾಗ, ಎರಡು ದಾಖಲೆಗಳನ್ನು ಮಾತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕಾಗಿದೆ. ಒಂದು ವೇಳೆ ಯಾರಾದರೂ ತಮ್ಮ ಆಧಾರ್ ಕಾರ್ಡ್ ಹೊಂದಿಲ್ಲದಿದ್ದರೆ, ಅವರು ಪಾಸ್‌ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್‌ನಂತಹ ಯಾವುದೇ ಫೋಟೋ ಐಡಿಯನ್ನು ಹೊಂದಿರಬೇಕಾಗುತ್ತದೆ.

ಕರ್ನಾಟಕ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಮತದಾರರಿಗೆ ತಮ್ಮ ವಿವರವನ್ನು ತಿಳಿಯಲು ಹೀಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+