Get Updates
Get notified of breaking news, exclusive insights, and must-see stories!

26 ವರ್ಷದ ಯುವಕ ಕುಟುಂಬ ರಾಜಕಾರಣ ವಿರುದ್ಧ ಸೆಡ್ಡು ಹೊಡೆದಿದ್ದಕ್ಕೆ ಕಾಂಗ್ರೆಸ್‌ಗೆ ಸಹಿಸಲಾಗುತ್ತಿಲ್ಲ; ಅಣ್ಣಾಮಲೈ

ಬೆಂಗಳೂರು, ಮೇ 7: ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಇಡೀ ಕಾಂಗ್ರೆಸ್ ಪಕ್ಷವೇ ತಿರುಗಿ ಬಿದ್ದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದೆ.

ಈ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಕುಟುಂಬದ ಕೊಲೆಗೆ ಸಂಚು ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಆಡಿಯೋ ತುಣುಕನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.

 Karnataka Election 2023: K Annamalai Hits Back On Congress Allegation Against Manikantha Rathod

ಕಾಂಗ್ರೆಸ್‌ ಪಕ್ಷ ಚಿತ್ತಾಪುರದಲ್ಲಿ ಸೋಲುವ ಭೀತಿಯಲ್ಲಿ ಎಲ್‌ಕೆಜಿ ಮಕ್ಕಳ ರೀತಿ ಈ ಆರೋಪ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ. ಅಣ್ಣಾಮಲೈ ಲೇವಡಿ ಮಾಡಿದ್ದಾರೆ.

"ಮಣಿಕಂಠ ರಾಠೋಡ್ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಈ ಆಡಿಯೋ ಕಟ್‌ ಆ್ಯಂಡ್ ಪೇಸ್ಟ್‌ ಆಡಿಯೋ ಆಗಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ಪ್ರಧಾನಿ ನರೇಂದ್ರ ಮೋದಿಗೆ ವ್ಯಕ್ತವಾಗುತ್ತಿರುವ ಜನ ಬೆಂಬಲ ಕಂಡು ಕಾಂಗ್ರೆಸ್‌ಗೆ ಸೋಲುವ ಭಯ ಶುರುವಾಗಿದ್ದು, ಹೀಗಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ," ಎಂದು ಅಣ್ಣಾಮಲೈ ವಾಗ್ದಾಳಿ ನಡೆಸಿದರು.

"ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಕೇವಲ 26 ವರ್ಷದ ಯುವಕ, ಆತನಿಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಕುಟುಂಬ ರಾಜಕಾರಣದ ವಿರುದ್ಧ ಸೆಡ್ಡು ಹೊಡೆದಿದ್ದಕ್ಕೆ ಸೋಲುವ ಭಯದಲ್ಲಿ ಪ್ರಿಯಾಂಕ್ ಖರ್ಗೆ ಕಳೆದ ಎರಡು ವರ್ಷಗಳಿಂದ ಮಣಿಕಂಠ ರಾಠೋಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಹಲವು ದೂರು ನೀಡಿದ್ದಾರೆ," ಎಂದು ಆರೋಪಿಸಿದರು.

 Karnataka Election 2023: K Annamalai Hits Back On Congress Allegation Against Manikantha Rathod

"ಅಷ್ಟೇ ಅಲ್ಲದೆ, ಬೇರೆ ಬೇರೆ ಕಡೆ ಮೂರನೇ ವ್ಯಕ್ತಿಗಳಿಂದಲೂ ದೂರು ಕೊಡಿಸಿದ್ದಾರೆ. ಈಗ ಕಾಂಗ್ರೆಸ್‌ ನಾಯಕರು ಕಟ್‌-ಪೇಸ್ಟ್‌ ಆಡಿಯೋ ಬಿಡುಗಡೆಗೊಳಿಸಿ ಮಣಿಕಂಠ ರಾಠೋಡ್ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ," ಎಂದು ಗುಡುಗಿದರು.

2019ರ ಲೋಕಸಭೆ ಚುನಾವಣೆ ವೇಳೆ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಅಲ್ಲಿನ ಜನ ಸೋಲಿಸಿದರು. ಈಗ 2023ರಲ್ಲಿ ಮಗನೂ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಕೆ. ಅಣ್ಣಾಮಲೈ ಕಿಡಿಕಾರಿದರು.

ಕೊಲೆ ಪ್ರಕರಣ ಆರೋಪಿ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್

ಕರ್ನಾಟಕದಲ್ಲಿ ಚುನಾವಣಾ ಕಾವು ಹೆಚ್ಚಾಗಿದೆ. ಉತ್ತರ ಭಾರತದ ರಣದೀಪ್ ಸುರ್ಜೇವಾಲಾಗೆ ಇಲ್ಲಿನ ಹೀಟ್‌ ತಡೆಯಲು ಆಗುತ್ತಿಲ್ಲ. ಹೀಗಾಗಿ ನಂದಿನಿ ಮಜ್ಜಿಗೆ ಕುಡಿದು ತಂಪಾಗಬೇಕು ಎಂದು ಅಣ್ಣಾಮಲೈ ವ್ಯಂಗ್ಯವಾಡಿದರು.

"ಮಣಿಕಂಠ ರಾಠೋಡ್‌ರನ್ನು ರೌಡಿ ಶೀಟರ್ ಎನ್ನುವ ಮುನ್ನ ಕಾಂಗ್ರೆಸ್‌ ನಾಯಕರು ತಮ್ಮದೇ ಪಕ್ಷದಲ್ಲಿ ಕ್ರಿಮಿನಲ್‌ ಹಿನ್ನೆಲೆಯ ಎಷ್ಟು ಜನಕ್ಕೆ ಟಿಕೆಟ್ ನೀಡಲಾಗಿದೆ ಎನ್ನುವುದನ್ನು ಮನವರಿಕೆ ಮಾಡಿಕೊಳ್ಳಬೇಕು".

 Karnataka Election 2023: K Annamalai Hits Back On Congress Allegation Against Manikantha Rathod

"ಧಾರವಾಡದಲ್ಲಿ ಕೊಲೆ ಪ್ರಕರಣ ಆರೋಪಿ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದರೂ, ಅವರಿಗೆ ಟಿಕೆಟ್ ನೀಡಲಾಗಿದೆ. ಹಿಂದಿನ ಉತ್ತರ ಪ್ರದೇಶ, ಬಿಹಾರದಲ್ಲಿ ಈ ರೀತಿಯ ರಾಜಕಾರಣ ಇತ್ತು," ಎಂದು ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.

35 ಕ್ರಿಮಿನಲ್ ಆರೋಪಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ

"ಈ ಬಾರಿ ಕಾಂಗ್ರೆಸ್‌ ಪಕ್ಷದಲ್ಲಿ ಕೊಲೆ, ಸುಲಿಗೆ, ಭೂ ಕಬಳಿಗೆ, ಉಗ್ರ ಸಂಘಟನೆಗೆ ಫಂಡಿಂಗ್ ಮಾಡಿದ ಆರೋಪ ಸೇರಿದಂತೆ ವಿವಿಧ ಆರೋಪಗಳ ಕ್ರಿಮಿನಲ್ ಪ್ರಕರಣ ಇರುವ 35 ಮಂದಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹಲವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ," ಎಂದು ಅಣ್ಣಾಮಲೈ ಆರೋಪಿಸಿದರು.

"ಇದರಲ್ಲಿ ಕೊತ್ವಾಲ್ ರಾಮಚಂದ್ರನ ಶಿಷ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕೂಡ ಒಬ್ಬರು. ಒಬ್ಬರನ್ನು ರೌಡಿ ಎಂದು ಬಿಂಬಿಸುವ ಮುನ್ನ ತಮ್ಮ ಪಕ್ಷದ ಸಂಸ್ಕೃತಿಯ ಬಗ್ಗೆ ಕಾಂಗ್ರೆಸ್‌ ನಾಯಕರು ಒಮ್ಮೆ ನೋಡಿಕೊಳ್ಳುವುದು ಉತ್ತಮ," ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಲೇವಡಿ ಮಾಡಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಯಾವ ಪಕ್ಷ ನೂತನ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+