Kichcha Sudeep: ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಪುತ್ರನಿಗೆ ಕಿಚ್ಚ ಸುದೀಪ್ ತಿರುಗೇಟು
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ವೇಳೆ ಈ ಚುನಾವಣೆ ಹಿಂದೆಂದೂ ಕಂಡಿರದ ಘಟನೆಗಳಿಗೆ ಸಾಕ್ಷಿಯಾಗಿದೆ.
ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ರಾಜಕೀಯ ಪಕ್ಷಗಳು ರಾಷ್ಟ್ರೀಯ ನಾಯಕರು ಕೂಡ ರಾಜ್ಯದಲ್ಲಿ ಮತಬೇಟೆ ಧುಮುಕಿದ್ದರೆ, ಮತ್ತೊಂದೆಡೆ ಸಿನಿ ತಾರೆಯರು ಅವರ ಇಷ್ಟದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಅಂತವರಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಸಹ ಒಬ್ಬರು.

ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಪರ ಹಲವು ಜಿಲ್ಲೆಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚಿಗೆ ಸುದೀಪ್ ಅವರ ಕುರಿತು ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿ.ಎನ್. ನಂಜುಂಡಸ್ವಾಮಿ ಅವರ ಪುತ್ರ ಲೋಕೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಲೋಕೇಶ್ ಅವರು ಹಗುರವಾಗಿ ಮಾತನಾಡಿದ್ದಕ್ಕಾಗಿ ಕಿಚ್ಚ ಸುದೀಪ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತಮ್ಮ ನೆಚ್ಚಿನ ನಟನ ಕುರಿತು ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದರು.
ಈ ಎಚ್ಚರಿಕೆ ಬೆನ್ನಲ್ಲೇ ಕೊಳ್ಳೇಗಾಲ ಕಾಂಗ್ರೆಸ್ ಅಭ್ಯರ್ಥಿ ಪುತ್ರ ಲೋಕೇಶ್ ಮತ್ತೊಂದು ವಿಡಿಯೋ ಮಾಡಿ, "ಸುದೀಪ್ ಅವರು ನನಗೆ ಕರೆ ಮಾಡಿದ್ದರು. ಅಭಿಮಾನಿಗಳಿಗೆ ಕ್ಷಮೆ ಕೇಳಿ ಎಂದು ಹೇಳಿದ್ದರು. ಹೀಗಾಗಿ ಕ್ಷಮೆ ಕೇಳುತ್ತಿದ್ದೇನೆ," ಎಂದು ತಿಳಿಸಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿತ್ತು.
Extremely sorry to say j haven't made any cals to to anyone asking them to apologize. Neither do I take pride in making someone apologize. Every action has an equivalent reaction is an old theory ,,,,and not something i design.
— Kichcha Sudeepa (@KicchaSudeep) April 29, 2023
🙏🏼🤗 https://t.co/FHNDmJHCq8
ಕೂಡಲೇ ಈ ವಿಡಿಯೋ ಕುರಿತು ಕಿಚ್ಚ ಸುದೀಪ್ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. "ನಾನು ಯಾರಿಗೂ ಕರೆ ಮಾಡಿಲ್ಲ. ಕ್ಷಮೆ ಕೇಳಿ ಎಂದು ಹೇಳಿಲ್ಲ. ಕ್ಷಮೆ ಕೇಳುವುದನ್ನು ನಾನು ಹೆಮ್ಮೆ ಪಡುವುದಿಲ್ಲ. ಪ್ರತಿಯೊಂದು ಕ್ರಿಯೆಗೂ ಪ್ರತಿಕ್ರಿಯೆ ಇರುತ್ತದೆ ಎನ್ನುವುದು ಹಳೆಯ ಸಿದ್ಧಾಂತ," ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಕೊಳ್ಳೇಗಾಲ ಕಾಂಗ್ರೆಸ್ ಅಭ್ಯರ್ಥಿ ಜಿ.ಎನ್. ನಂಜುಂಡಸ್ವಾಮಿ ಪುತ್ರ ಲೋಕೇಶ್ ತಮ್ಮ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಪರೋಕ್ಷವಾಗಿ ಅಭಿಮಾನಿಗಳಿಗೆ ಸ್ಪಷ್ಟಪಡಿಸಿದ್ದಾರೆ.
ವಿವಾದ ಹುಟ್ಟಿಕೊಂಡಿದ್ದೇಗೆ?
ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಕಿಚ್ಚ ಸುದೀಪ್ ಕೊಳ್ಳೇಗಾಲಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಮಾತನ್ನು ಶಾಸಕ ಎನ್. ಮಹೇಶ್ ಪದೇ ಪದೇ ಹೇಳುತ್ತಿದ್ದಾರೆ ಅಂತಾ ಲೋಕೇಶ್ ನಾಲಿಗೆ ಹರಿಬಿಟ್ಟಿದ್ದರು.
ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾತನಾಡಿರುವ ಲೋಕೇಶ್, "ಬಿಜೆಪಿ ಪಕ್ಷದ ಅಭ್ಯರ್ಥಿ ಎನ್.ಮಹೇಶ್ ಅವರು ಪದೇ ಪದೇ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೊಂಡು, ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ,'' ಎಂದು ಮಾತನಾಡಿದ್ದು.
ಈ ಮಾತುಗಳು ಕಿಚ್ಚ ಸುದೀಪ್ ಅವರ ಅಭಿಮಾನಿಗಳನ್ನು ಕೆರಳಿಸಿದ್ದವು. ಹೀಗಾಗಿ ಲೋಕೇಶ್ ಕೂಡಲೇ ಕ್ಷಮೆ ಕೇಳಬೇಕು ಎಂದು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು.
ಈ ಕುರಿತು ಮಾತನಾಡಿರುವ ವಾಲ್ಮೀಕಿ ನಾಯಕ ಮಹಾಸಭಾ ಚಾಮರಾಜನಗರ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸರಗೂರು ಶಿವು, "ಲೋಕೇಶ್ ಕೂಡಲೇ ಸುದೀಪ್ ಅವರ ಕ್ಷಮೆ ಕೇಳಬೇಕು. ಕೇಳದೇ ಇದ್ದರೆ, ಪ್ರತಿಭಟನೆ ಮಾಡಲಾಗುವುದು. ಇದು ಕೇವಲ ಸುದೀಪ್ ಅವರಿಗೆ ಮಾಡಿರುವ ಅವಮಾನವಲ್ಲ, ಅಭಿಮಾನಿಗಳಿಗೂ ಮಾಡಿರುವ ಅಪಮಾನ,'' ಎಂದು ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications