ಕರ್ನಾಟಕ ವಿಧಾನಸಭೆ ಚುನಾವಣೆ 2023: ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಕರ್ನಾಟಕ, ಮಾರ್ಚ್‌, 29: ಕರ್ನಾಟಕ ರಾಜ್ಯದ 16ನೇ ವಿಧಾನಸಭಾ ಚುನಾವಣೆಯ ಪ್ರಯುಕ್ತ ಬುಧಾವಾರ ಇಂದಿಂದ ರಾಜ್ಯದಲ್ಲಿ ನೀತಿಸಂಹಿತೆ ಜಾರಿ ಆಗಿದೆ.

ಕೇಂದ್ರ ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಎಎಪಿ ಪಕ್ಷಗಳು ಕರ್ನಾಟಕ ಚುನಾವಣಾ ಅಖಾಡಕ್ಕೆ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.

Karnataka Election 2023: Model code of conduct comes into force in state from March 29, 11.30 AM

ಚುನಾವಣಾ ಆಯೋಗವು ಸುದ್ದಿಗೋಷ್ಠಿ ನಡೆಸಿದ್ದು, ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ನೀತಿ ಸಂಹಿತೆಯು ಸಹ ಇಂದಿನಿಂದಲೇ ಜಾರಿ ಆಗಿದೆ. ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವ ಹಾಗಿಲ್ಲ. ಆದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರಿ ಕಾರ್ಯಕ್ರಮಗಳನ್ನೆಲ್ಲ ರದ್ದುಪಡಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 20
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಏಪ್ರಿಲ್ 24
ಮತದಾನ ದಿನಾಂಕ: ಮೇ 10
ಫಲಿತಾಂಶ ದಿನಾಂಕ: ಮೇ 13

ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ವಿಜ್ಞಾನಭವನದಲ್ಲಿ ಕರೆದಿದ್ದರು. ಈ ವೇಳೆ ಎಲ್ಲಾ ಕ್ಷೇತ್ರಗಳ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಘೋಷಣೆ ಮಾಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯು ಮೇ. 12, 2018 ರಂದು ನಡೆದಿತ್ತು. ಹಾಗೆಯೇ ಪ್ರಸ್ತುತ ವಿಧಾನಸಭೆಯ ಸಮಯವು ಮೇ. 24, 2023ರಂದು ಮುಕ್ತಾಯಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಲಿದೆ. ವೇಳಾಪಟ್ಟಿ ಪ್ರಕಟಿಸಿದ ಬಳಿಕ ರಾಜ್ಯದಲ್ಲಿ ನೀತಿಸಂಹಿತೆ ಜಾರಿ ಆಗಲಿದೆ.

ಇಂದಿನಿಂದಲೇ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು ಸಿಎಂ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ. ಹಾಗೂ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ. ಆದರೆ ಸಿಎಂ ಸೇರಿ ಸಚಿವರು, ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತದೆ. ಎಸ್ಕಾರ್ಟ್​​​ ಸೇರಿದಂತೆ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾರ್ಚ್ 9ರಂದು ಕೇಂದ್ರ ಚುನಾವಣಾ ಆಯೋಗವು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿತ್ತು. ಸಭೆಯಲ್ಲಿ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಬೇಕೆಂದು ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಆಗ್ರಹಿಸಿದ್ದವು. ಮತ್ತೊಂದೆ ಬಿಜೆಪಿ ಪಕ್ಷವು ಒಂದಕ್ಕಿಂತ ಹೆಚ್ಚು ಹಂತಗಳಲ್ಲಿ ಚುನಾವಣೆ ನಡೆಸುವಂತೆ ಬೇಡಿಕೆಯಿಟ್ಟಿತ್ತು ಎಂದು ಹೇಳಲಾಗುತ್ತಿದೆ.

ಈ ಕುರಿತು ರಾಜಕೀಯ ಪಕ್ಷಗಳ ಅಭಿಪ್ರಾಯ ಕೇಳುವುದು ಸಾಮಾನ್ಯ ಪ್ರಕ್ರಿಯೆ ಆಗಿದೆ. ಆದ್ದರಿಂದ ರಾಜ್ಯದ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಎಎಪಿ ಪಕ್ಷಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿತ್ತು. ಇದೀಗ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+