Modi to visit Udupi: ಉಡುಪಿಯಲ್ಲಿ ಮತಬೇಟೆಗೆ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಎಂಟ್ರಿ!

ಉಡುಪಿ, ಏಪ್ರಿಲ್. 17: ರಾಜ್ಯದಲ್ಲಿ ತನ್ನ ಪ್ರಬಲ ನಾಯಕರನ್ನು ಕಳೆದುಕೊಳ್ಳುತ್ತಿರುವ ಬಿಜೆಪಿ ಈಗ ಸಂಪೂರ್ಣವಾಗಿ ರಾಷ್ಟ್ರೀಯ ನಾಯಕರ ಮೇಲೆ ಅವಲಂಭಿಸಿರುವಂತೆ ಕಾಣಿಸುತ್ತಿದೆ. ನಾಲ್ಕಾರು ತಿಂಗಳಿನಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಈಗಾಗಲೇ ಹಲವು ಸಮಾವೇಶಗಳಲ್ಲಿ ಭಾಗಿಯಾಗಿದ್ದು, ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಈಗ ಮುಂದುವರಿದು, ಬಿಜೆಪಿ ತನ್ನ ಫೈಯರ್ ಬ್ರಾಂಡ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯದಲ್ಲಿ ಮತಬೇಟೆಗೆ ಇಳಿಯುವ ಪ್ರಯತ್ನದಲ್ಲಿದೆ. ಮುಂದಿನ ತಿಂಗಳು ಉಡುಪಿಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಆದಿತ್ಯನಾಥ್ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Karnataka Election 2023: PM Modi, Yogi Adityanath to visit Udupi on May 4

ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರಧಾನಿ ಜೊತೆ ಬರುವ ನಿರೀಕ್ಷೆಯಿದೆ. ಪಿಟಿಐ ವರದಿ ಪ್ರಕಾರ, ಪ್ರಧಾನಿ ಮೋದಿ ಭೇಟಿಗಾಗಿ ನಗರದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ.

ಕರಾವಳಿ ಕರ್ನಾಟಕದ ಜಿಲ್ಲೆ ಉಡುಪಿಗೆ ಪ್ರಧಾನಿಯವರ ಭೇಟಿ ಮತದಾನಕ್ಕೆ ಕೆಲವೇ ದಿನಗಳೀರುವ ಆಯೋಜಿಸಲಾಗಿದೆ. ಇದೇ ಕಾರಣಕ್ಕೆ ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಉಡುಪಿಯಲ್ಲಿ ನಾಲ್ಕು ಮತ್ತು ಚಿಕ್ಕಮಗಳೂರಿನಲ್ಲಿ ಐದು ಕ್ಷೇತ್ರಗಳನ್ನು ಹೊಂದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ಕನಿಷ್ಠ 15 ರಿಂದ 20 ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. "ಮೇ 10 ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ 15-20 ರ್‍ಯಾಲಿಗಳನ್ನು ನಡೆಸಬಹುದು ಎಂದು ನಾವು ಅಂದಾಜಿಸಿದ್ದೇವೆ" ಎಂದು ಬಿಜೆಪಿ ನಾಯಕರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

Karnataka Election 2023: PM Modi, Yogi Adityanath to visit Udupi on May 4

ಹಲವು ಕೋಮು ಪ್ರಕರಣಗಳಿಗೆ ಸಾಅಕ್ಷಿಯಾಗಿರುವ ಕರಾವಳಿ ಜಿಲ್ಲೆಯಲ್ಲಿ ಹಿಂದೂ ಮತಬ್ಯಾಂಕ್ ಒಗ್ಗೂಡಿಸುವ ನಿಟ್ಟಿನಲ್ಲಿ ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸುತ್ತಿದೆ. ತಮ್ಮ ಪ್ರಖರ ಭಾಷಗಳಿಗಿಂದ ಜನರನ್ನು ಸೆಳೆಯುವ ಯೋಗಿ ಆದಿತ್ಯನಾಥ್ ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಡುಪಿಯಲ್ಲಿ ಪ್ರಚಾರ ಮಾಡಿದ್ದರು.

ಇನ್ನು, ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿಯೂ ಭರ್ಜರಿ ಗೆಲುವು ದಾಖಲಿಸಿದೆ. ಹೀಗಾಗಿ ಈ ಬಾರಿಯೂ ರಾಜ್ಯ ಚುನಾವಣೆಗಳಲ್ಲಿ ಕೇಸರಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಯೋಗಿ ಆದಿತ್ಯನಾಥ್ ಒಬ್ಬರಾಗಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+