ಇಂದು ಚಿತ್ರದುರ್ಗ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮೇನಿಯಾ; 30 ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಭಾಕಿ ಉಳಿದಿದ್ದು, ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ರಾಜಕೀಯ ಪಕ್ಷಗಳು ಮತ್ತು ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮತದಾರನ ಮನಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಲಾಗುತ್ತಿದೆ.

ಕರುನಾಡ ಕುರುಕ್ಷೇತ್ರ ಅಖಾಡದಲ್ಲಿ ರಾಜ್ಯ ನಾಯಕರಲ್ಲದೆ, ರಾಷ್ಟ್ರೀಯ ನಾಯಕರು ಕರ್ನಾಟಕದಲ್ಲೇ ಠಿಕಾಣಿ ಹೂಡಿ ಪ್ರತಿ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮತ್ತು ಭಾನುವಾರ 8 ಕ್ಷೇತ್ರಗಳಲ್ಲಿ ಬಿಜೆಪಿ ಪರ ಸಮಾವೇಶ ಮತ್ತು ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ಮಾಡಿದ್ದಾರೆ.

Karnataka Election 2023: PM Narendra Modi To Campaign In Chitradurga And Kalyana Karnataka Region

ಇದೀಗ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದು, ಇಂದಿನಿಂದ (ಮೇ 2 ಮತ್ತು ಮೇ 3) ಎರಡು ದಿನಗಳ ಕಾಲ ಕರ್ನಾಟಕದಲ್ಲಿ ಮತಬೇಟೆಯಾಡಲಿದ್ದಾರೆ. ಈ ಬಾರಿ ಮಧ್ಯ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ದಂಡಯಾತ್ರೆ ಮಾಡಲಿದ್ದಾರೆ.

ಮೇ 3ರಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಮೋದಿ ಮೇನಿಯಾ ಸೃಷ್ಟಿಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆ, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಮಾವೇಶ ನಡೆಯಲಿದ್ದರೆ, ಸಂಜೆ 6:30ಕ್ಕೆ ಕಲಬುರಗಿಯಲ್ಲಿ ಭಾರೀ ರೋಡ್‌ ಶೋ ನಡೆಯಲಿದೆ.

Karnataka Election 2023: PM Narendra Modi To Campaign In Chitradurga And Kalyana Karnataka Region

ಮಧ್ಯ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಈ ಭಾಗದಲ್ಲಿ ಈ ಬಾರಿ 30ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಭಾವವಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ನರೇಂದ್ರ ಮೋದಿ ಅಲೆ ಸೃಷ್ಟಿಸಲು ಬಿಜೆಪಿ ತಂತ್ರ ರೂಪಿಸಿದೆ.

ಮಂಗಳವಾರ ಸಂಜೆ ಕಲಬುರಗಿ ರೋಡ್ ಶೋ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಠಕ್ಕರ್ ಕೊಡಲು ನರೇಂದ್ರ ಮೋದಿ ಪ್ಲಾನ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರ ವಿಷದ ಹಾವು ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ನಾಲಾಯಕ್ ಮಗ ಹೇಳಿಕೆಗೆ ತಿರುಗೇಟು ನೀಡುವ ಸಾಧ್ಯತೆ ಇದೆ.

ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಯೋಜಿಸಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜೊತೆಗೆ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಅಹಿಂದ ಮತಗಳು ಪರಿಣಾಮಕಾರಿ ಪಾತ್ರ ವಹಿಸಲಿವೆ.

Karnataka Election 2023: PM Narendra Modi To Campaign In Chitradurga And Kalyana Karnataka Region

ಆ ಬಳಿಕ ಮೇ 6ರಂದು ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ನರೇಂದ್ರ ಮೋದಿ ದಂಡಯಾತ್ರ ನಡೆಯಲಿದೆ. ಕಲ್ಯಾಣ ಕರ್ನಾಟಕದ 40 ಕ್ಷೇತ್ರಗಳ ಪೈಕಿ 30 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಗುರಿ ಹೊಂದಿದೆ. ಹಳೇ ಮೈಸೂರು ಭಾಗದ ನಂತರ ಕಲ್ಯಾಣ ಕರ್ನಾಟಕವೇ ನರೇಂದ್ರ ಮೋದಿ ಅವರ ದೊಡ್ಡ ಟಾರ್ಗೆಟ್ ಆಗಿದ್ದು, ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳಿಗೆ ಕೈ ಹಾಕಲಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+