ಕಾರ್ಯಕರ್ತರ ಅಸಮಾಧಾನದ ನಡುವೆ ಶರತ್ ಬಚ್ಚೇಗೌಡಗೆ ಟಿಕೆಟ್: ಕಾಂಗ್ರೆಸ್ ಲೆಕ್ಕಚಾರವೇನು?
ಬೆಂಗಳೂರು, ಮಾರ್ಚ್ 25: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆಗೆ ಸಮೀಪಿಸುತ್ತಿದ್ದು, ಬಹು ನಿರೀಕ್ಷಿತ ಕಾಂಗ್ರೆಸ್ಸಿನ ಮೊದಲ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈ ಬಾರಿಯ ಗೆಲುವಿನ ಲೆಕ್ಕಾಚಾರ ಹಾಕಿರುವ ಕಾಂಗ್ರೆಸ್ ಈ ಬಾರಿ ಈ ಹಿಂದೆ ಸ್ಫರ್ಧಿಸಿದ್ದ ಅಭ್ಯರ್ಥಿಗಳಿಗೆ ಹಾಗೂ ಪಕ್ಷಾಂತರಗೊಂಡು ಬಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಪಿಸಿಸಿಯಿಂದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಶರತ್ ಬಚ್ಚೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಪಕ್ಷಾಂತರಗೊಂಡು ಕಾಂಗ್ರೆಸ್‌ನಲ್ಲಿರುವ ಶರತ್ ಬಚ್ಚೇಗೌಡಗೆ ಟಿಕೆಟ್ ನೀಡಿರುವುದರ ಹಿಂದೆ ಕಾಂಗ್ರೆಸ್ ಹೊಸಕೋಟೆ ಗೆಲ್ಲುವ ಲೆಕ್ಕಾಚಾರವಿದೆ.

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ಅವರ ಮಗನಾದ ಶರತ್ ಬಚ್ಚೇಗೌಡ ಹೊಸಕೋಟೆಯ ಶಾಸಕರಾಗಿದ್ದಾರೆ. ಕಳೆದ 2018ರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಅವರ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕಲು ಮಾಜಿ ಸಿ.ಎಂ ಯಡಿಯೂರಪ್ಪ , ಶರತ್ ಬಚ್ಚೇಗೌಡ ಅವರನ್ನು ರಾಜಕೀಯಕ್ಕೆ ಕರೆತಂದರು. ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಶರತ್ 7,597 ಮತಗಳ ಅಂತರದಿಂದ ಸೋಲು ಕಂಡರು. ಆದರೆ ಅದಾಗಲೇ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದು ಯುವಕರನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
ಬಳಿಕ ರಾಜ್ಯ ರಾಜಕೀಯದಲ್ಲಾದ ಬದಲಾವಣೆ ಶರತ್ ಬಚ್ಚೇಗೌಡ ಅವರ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿತ್ತು. ಕಾಂಗ್ರೆಸ್ ಬಳಿಕ ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಬಿಜೆಪಿ ಸೇರ್ಪಡೆಯಾದರು. ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಬಂಡಾಯವೆದ್ದ ಶರತ್ ಬಚ್ಚೆಗೌಡ ಬಿಜೆಪಿ ಪಕ್ಷದಿಂದ ಹೊರಗುಳಿದು ಸ್ವತಂತ್ರ ಅಭ್ಯರ್ಥಿಯಾದರು. ಹೀಗಾಗಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯಿಂದ ನಿಂತ ಎಂಟಿಬಿ ನಾಗರಾಜ್‌ರನ್ನು ಸೋಲಿಸಿದರು.

ಬಳಿಕ ಕಾಂಗ್ರೆಸ್‌ನತ್ತ ಒಲವು ತೋರಿದ ಶರತ್ ಬಚ್ಚೇಗೌಡ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದರು. ಸದ್ಯ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಆದರೆ ವಲಸೆ ಬಂದಿರುವ ಶರತ್ ಬಚ್ಚೇಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಹೊಸಕೋಟೆಯ ಮೂಲ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದರು.
ಶರತ್ ಬದಲಿಗೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಪ್ರಸಾದ್ ಅಥವಾ ಮುನಿಶಾಮಣ್ಣಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಈ ಹಿಂದೆ ಹೊಸಪೇಟೆ ಕ್ಷೇತ್ರದಲ್ಲಿ ಸಾಕಷ್ಟು ಗಲಾಟೆಗಳು ಸಹ ನಡೆದಿದ್ದು, ಬೆಂಬಲಿಗರು ಕೈ ಕೈ ಮಿಲಾಯಿಸುವ ಹಂತದಲ್ಲಿ ಗಲಾಟೆ ನಡೆಸಿದ್ದರು. ಆದರೆ ಕಾರ್ಯಕರ್ತರ ಅಸಮಾಧಾನದ ನಡುವೆಯೇ ಸದ್ಯ ಕಾಂಗ್ರೆಸ್ ಗೆಲ್ಲುವ ಕುದುರೆ ಎನ್ನುವ ಲೆಕ್ಕಾಚಾರದಲ್ಲಿ ಶರತ್ ಬಚ್ಚೇಗೌಡಗೆ ಟಿಕೆಟ್ ನೀಡಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರ ಮತ್ತೆ ಸದ್ದು ಮಾಡಲಿದ್ದು, ಶರತ್ ಬಚ್ಚೇಗೌಡ ವಿರುದ್ಧದ ಸೋಲಿನ ಪ್ರತಿಕಾರ ತೀರಿಸಿಕೊಳ್ಳಲು ಎಂಟಿಬಿ ನಾಗರಾಜ್ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದರೆ, ಹಾಲಿ ಸಚಿವರಾಗಿರುವ ಎಂಟಿಬಿ ನಾಗರಾಜ್ ಕ್ಷೇತ್ರವನ್ನು ಮತ್ತೆ ಪಡೆಯುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಮತ ಸೆಳೆಯಲು ಮುಂದಾಗಿದ್ದಾರೆ.
ಇನ್ನು ತಮ್ಮ ಕೈಯಲ್ಲಿರುವ ಹೊಸಕೋಟೆ ಕ್ಷೇತ್ರವನ್ನು ಭದ್ರಪಡಿಸಿಕೊಳ್ಳಲು ಶರತ್ ಬಚ್ಚೇಗೌಡ ಶತ ಪ್ರಯತ್ನ ನಡೆಸುತ್ತಿದ್ದಾರೆ. 2018ರ ಚುನಾವಣೆಗೂ ಹಾಗೂ 2023ರ ವಿಧಾನಸಭೆ ಚುನಾವಣೆಗೂ ಹೊಸಕೋಟೆಯಲ್ಲಿ ಅದೇ ಅಭ್ಯರ್ಥಿಗಳು ಮುಖಾಮುಖಿಯಾಗಲಿದ್ದು, ಅಭ್ಯರ್ಥಿಗಳ ಪಕ್ಷ ಮಾತ್ರ ಪರಸ್ಪರ ಬದಲಾವಣೆಯಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications