Karnataka Election 2023: ಶಿಗ್ಗಾಂವಿ or ಹುಬ್ಬಳ್ಳಿ; ಸಿಎಂ ಬಸವರಾಜ ಬೊಮ್ಮಾಯಿ ಮತ ಚಲಾಯಿಸುವುದೆಲ್ಲಿ?

ಇಂದು (ಬುಧವಾರ, ಮೇ 10) ಕರ್ನಾಟಕದ ಎಲ್ಲ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ ದೇವಸ್ಥಾನಕ್ಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಅವರ ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು.

Basvaaraj Bommai

ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಟುಂಬ ಸಮೇತ ಬಂದು ಕೆಲವೇ ಕ್ಷಣಗಳಲ್ಲಿ ಶಿಗ್ಗಾಂವಿ ಪಟ್ಟಣಕ್ಕೆ ತೆರಳಿ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ ‌102ರಲ್ಲಿ ಮತ ಚಲಾಯಿಸಲಿದ್ದಾರೆ.

"ನಮ್ಮ ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿಯಿಂದ ನನಗೆ ತುಂಬಾ ಸಂತೋಷವಾಗಿದೆ, ಕರ್ನಾಟಕದ ಅಭಿವೃದ್ಧಿಗೆ ಬಂದು ಮತ ಚಲಾಯಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ,"ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 224 ಕ್ಷೇತ್ರ, 2,615 ಅಭ್ಯರ್ಥಿಗಳ ಹಣೆ ಬರಹವನ್ನು ರಾಜ್ಯದ 5,31,33,054 ಮತದಾರರು ನಿರ್ಧರಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+