Get Updates
Get notified of breaking news, exclusive insights, and must-see stories!

Lok Sabha Election 2024: ಕರ್ನಾಟಕ ಚುನಾವಣಾ ಆಯೋಗದ ಕಣ್ಣು ನೀರಿನ ಟ್ಯಾಂಕರ್‌ಗಳ ಮೇಲೆ-ಕಾರಣ ಏನು?

ಬೆಂಗಳೂರು, ಮಾರ್ಚ್‌, 17: ಮಳೆ ಕೊರತೆ ಹಿನ್ನೆಲೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೀರಿ ಅಭಾವ ಎದ್ದು ಕಾಣುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಟ್ಯಾಂಕರ್‌ಗಳಲ್ಲಿ ನೀರು ಹೊಡೆಸಿಕೊಳ್ಳುತ್ತಿರುವ ಪರಿಸ್ಥಿತಿ ಎದುರಾಗಿದೆ. ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆ ಜನರನ್ನು ಸೆಳೆಯಲು ನೀರು ಹೊಡೆಸುವ ನೆಪದಲ್ಲಿ ರಾಜರಾಣಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಪ್ರಚಾರಕ್ಕಿಳಿದಿರುವುದು ಕಂಡುಬಂದಿದೆ. ಆದ್ದರಿಂದ ಕರ್ನಾಟಕ ಚುನಾವಣಾ ಆಯೋಗವು ನೀರಿನ ಟ್ಯಾಂಕರ್‌ಗಳ ಮೇಲೆ ಹೆಚ್ಚಿನ ನಿಗಾ ವಹಿಸಿದೆ.

ರಾಜ್ಯದ 28 ಲೋಕಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಮೊದಲ ಹಂತ ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ಬೆಂಗಳೂರು ಉತ್ತರ ಸೇರಿದಂತೆ ದಕ್ಷಿಣ ಕರ್ನಾಟಕದ ಹದಿನಾಲ್ಕು ಸ್ಥಾನಗಳು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ ಮತ್ತು ಕರಾವಳಿ ಪ್ರದೇಶಗಳಿಗೆ ಮತದಾನ ನಡೆಯಲಿದೆ.

Karnataka Election Commission monitor to water tankers know details

ಉಳಿದ ಹದಿನಾಲ್ಕು ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ನಡುವೆ ರಾಜ್ಯದ ಚುನಾವಣಾ ಆಯೋಗವು ನೀರಿನ ಟ್ಯಾಂಕರ್‌ಗಳ ಮೇಲೆ ಕಣ್ಣಿಟ್ಟಿದೆ. ಆಯೋಗವು ನೀರಿನ ಟ್ಯಾಂಕರ್‌ಗಳ ಮೇಲೆ ಕಣ್ಣಿಡುತ್ತದೆ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ಅಥವಾ ವ್ಯಕ್ತಿಗಳು ಮತದಾರರನ್ನು ದುರ್ಬಳಕೆ ಮಾಡಲು ನೀರು ಸರಬರಾಜು ಮಾಡುವುದನ್ನು ಗಮನಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಂದು ರಾಜಕೀಯ ಪಕ್ಷದಿಂದ ಸೌಲಭ್ಯಗಳನ್ನು ಒದಗಿಸುವುದು ಮತದಾರರ ಮೇಲೆ ಪ್ರಭಾವ ಬೀರುವ ಕಾರಣ ಅದನ್ನು ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಅಕ್ರಮಗಳನ್ನು ಯಾರಾದರೂ ಗುರುತಿಸಿದರೆ 1950ಗೆ ಡಯಲ್ ಮಾಡುವ ಸಮಸ್ಯೆಯನ್ನು ವರದಿ ಮಾಡುವ ಮೂಲಕ ಚುನಾವಣಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬಹುದು ಎಂದು ತಿಳಿಸಿದ್ದಾರೆ.

ಮಾದರಿ ನೀತಿಸಂಹಿತೆ ಜಾರಿಗೆ ಆದೇಶ: ಶನಿವಾರ (ಮಾರ್ಚ್‌ 16) ಎಲೆಕ್ಷನ್‌ ಕಮಿಷನ್‌ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಈ ಹಿನ್ನೆಲೆ ಜಿಲ್ಲಾ ಚುನಾವಣಾಧಿಕಾರಿ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ತುಷಾರ್ ಗಿರಿನಾಥ್ ಅವರು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ಸೂಚನೆ ನೀಡಿದ್ದಾರೆ, ಕಚೇರಿ, ಸರ್ಕಾರಿ ಜಾಗ ಸೇರಿ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಸೂಚನೆ ನೀಡಿದ್ದಾರೆ.

ಯಾವುದೇ ಫ್ಲೆಕ್ಸ್, ಪೋಸ್ಟರ್, ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ , ಎಲ್ಲಾ ಬ್ಯಾನರ್, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಸೂಚಿಸಿದ್ದಾರೆ.

2 ಹಂತದಲ್ಲಿ ಮತದಾನ: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಆಗಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ..

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+