ರಾಜ್ಯದಲ್ಲಿ ನೆತ್ತರ ಬರಹದ್ದೇ ಹವಾ: ಶೆಟ್ಟರ್ ನೂರಕ್ಕೆ ನೂರರಷ್ಟು ಗೆದ್ದೆ ಗೆಲ್ಲುತ್ತಾರೆ ಎಂದು ರಕ್ತದಲ್ಲಿಯೇ ಬರೆದ ಕಾರ್ಯಕರ್ತ
ಹುಬ್ಬಳ್ಳಿ,ಏಪ್ರಿಲ್27: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಸದ್ಯದ ರಾಜ್ಯ ರಾಜಕೀಯದಲ್ಲಿ ರಕ್ತದಲ್ಲಿ ಬರೆದುಕೊಡುವೆ ಎಂಬ ಹೇಳಿಕೆ ಸಾಕಷ್ಟು ಸೆಳೆದಿದೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪಣತೊಟ್ಟಿದ್ದು, ಜಗದೀಶ್ ಶೆಟ್ಟರ್ ಸೋಲಿಸಲು ಲಿಂಗಾಯತ ಸಮುದಾಯದವರನ್ನೇ ಕಣಕ್ಕಿಳಿಸಿದ್ದು, ಶೆಟ್ಟರ್ ಸೋಲಿಸಲು ತಂತ್ರಗಾರಿಕೆಯನ್ನ ನಡೆಸಿವೆ.

ಕಾಂಗ್ರೆಸ್ ನಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣೆ ಎದುರಿಸುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ ಸೋಲುತ್ತಾರೆ ಎಂಬುದನ್ನು ರಕ್ತದಲ್ಲ ಬರೆದು ಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘರ್ಜಿಸಿದ ಬೆನ್ನಲ್ಲೆ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎಂಬಾತ ಜಗದೀಶ ಶೆಟ್ಟರ್ ನೂರಕ್ಕೆ ನೂರರಷ್ಟು ಗೆದ್ದೆ ಗೆಲ್ಲುತ್ತಾರೆ ಎಂದು ರಕ್ತದಲ್ಲಿಯೇ ಬರೆದು ಅಭಿಮಾನ ಮೆರೆದಿದ್ದಾನೆ.
ಜಗದೀಶ್ ಶೆಟ್ಟರ್ ಸೋಲಿನ ಬಗ್ಗೆ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು?
ಲಿಂಗಾಯತ ಸಮುದಾಯಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ಮೋಸ ಮಾಡಿದ್ದಾರೆ. ರಕ್ತದಲ್ಲಿ ಬರೆದುಕೊಡುತ್ತೇವೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಯಾವುದೇ ಕಾರಣಕ್ಕೂ ಈ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಪಕ್ಷ ಎಲ್ಲಾ ಸ್ಥಾನಮಾನ ಹಾಗೂ ಅಧಿಕಾರವನ್ನು ನೀಡಿದಾಗಲೂ ಪಕ್ಷದ್ರೋಹ ಮಾಡಿದ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಶಟ್ಟರ್ ಅವರಿಗೆ ತಕ್ಕ ಪಾಠ ಕಲಿಸಿ ಎಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲು ಸಾಧ್ಯವೇ ಇಲ್ಲ. ಶೆಟ್ಟರ್ ಅವರ ಗೆಲುವು ಅಸಾಧ್ಯ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬುದಾಗಿ ತಿಳಿಸಿದರು.












Click it and Unblock the Notifications