Jan Ki Baat Suvarna News Survey: ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್, ಯಾರಿಗೆ ಎಷ್ಟು ಸ್ಥಾನ?
ಬೆಂಗಳೂರು,ಏಪ್ರಿಲ್15: ರಾಜ್ಯ ರಾಜಕೀಯದಲ್ಲಿ ಚುನಾವಣಾ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜಕೀಯ ಪಕ್ಷಗಳಿಗೆ ಹಲವು ಸಮೀಕ್ಷೆಗಳನ್ನ ನಡೆಸಿದ್ದು, ಚುನಾವಣಾ ತಂತ್ರಗಾರಿಕೆಯನ್ನ ಹೆಚ್ಚಿಸಿವೆ.
ಈಗಾಗಲೇ ಹಳೇ ಮೈಸೂರು ಭಾಗ, ಮಲೆನಾಡು, ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ ಸಮೀಕ್ಷೆ ಫಲಿತಾಂಶವನ್ನ ಪ್ರಕಟಿಸಿರುವ ಸುವರ್ಣ ಟಿವಿ, ಇದೀಗ ಕಲ್ಯಾಣ ಕರ್ನಾಟಕ ಸಮೀಕ್ಷೆಯನ್ನ ಪ್ರಕಟಿಸಿದೆ.

ಈ ಬಾರಿಯಾ ವಿಧಾನಸಭಾ ಚುನಾವಣೆಯಲ್ಲೂ ಕಲ್ಯಾಣ ಕರ್ನಾಟಕ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್ ನೀಡಿದ್ದು, ಒಟ್ಟು 40 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 23 ಸ್ಥಾನಗಳನ್ನು ಗೆಲ್ಲಲಿದೆ ಎಂದು ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆ ಹೇಳುತ್ತಿದೆ. ಆದರೆ ಬಿಜೆಪಿ 2018ರ ವಿಧಾಸಭಾ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದರೆ, ಪ್ರಗತಿ ಸಾಧಿಸಿದೆ. ಕಾರಣ ಕಳೆದ ಬಾರಿ 15 ಸ್ಥಾನ ಗೆದ್ದುಕೊಂಡಿತ್ತು. ಇದೀಗ ಸಮೀಕ್ಷೆಯಲ್ಲಿ ಬಿಜೆಪಿ 16 ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿದೆ. ಜೆಡಿಎಸ್ 4 ಕ್ಷೇತ್ರ ಗೆಲ್ಲಲಿದೆ ಎಂದು ಸುವರ್ಣ ನ್ಯೂಸ್ ಸಮೀಕ್ಷೆ ಅಂದಾಜಿಸಿದೆ.
ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ 2018ರಂತೆಯೇ ಈ ಬಾರಿ ಕಮಾಲ್ ಮಾಡುತ್ತದೆಯೇ ಅಥವಾ ಬಿಜೆಪಿಗಿಂತ ಕಾಂಗ್ರೆಸ್ ಮುನ್ನಡೆ ಸಾಧಿಸುವುದೇ ಎನ್ನುವುದನ್ನ ಸುವರ್ಣ ನ್ಯೂಸ್ ಸಮೀಕ್ಷೆಯಿಂದ ಸಂಗ್ರಹಿಸಲಾಗಿದೆ. ಮಧ್ಯ ಕರ್ನಾಟಕದ ಒಟ್ಟು 26 ಕ್ಷೇತ್ರಗಳ ಪೈಕಿ ಆಡಳಿತರೂಡ ಬಿಜೆಪಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಅಂದಾಜಿಸಿದ್ದು, ಕಾಂಗ್ರೆಸ್ 12 ಸ್ಥಾನಗಳಲ್ಲಿ ಜಯಗಳಿಸಲಿದ್ದೆ. ಇತ್ತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಇತ್ತ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ರಾಜಕೀಯ ಪಕ್ಷಗಳು ಈ ಬಾರಿ ಹಳೇ ಮೈಸೂರು ಭಾಗದ ಮೇಲೆ ಕಣ್ಣೀಟ್ಟಿದ್ದು, ಹಲವು ಕಾರ್ಯತಂತ್ರವನ್ನ ರೂಪಿಸಿದೆ. ಇನ್ನೂ ಹಳೇ ಮೈಸೂರು ಗೆಲ್ಲಲು ಬಿಜೆಪಿ ಭಾರಿ ಕಸರತ್ತು ನಡೆಸಿದೆ. ಆದರೆ ಇದು ಸ್ಥಾನವಾಗಿ ಪರಿವರ್ತನೆಯಾಗಿಲ್ಲ. ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಸಮೀಕ್ಷೆ ನಡೆಸಿದೆ.
ಹಳೇ ಮೈಸೂರು ಕಾಂಗ್ರೆಸ್ ಹಾಗೂ ಜೆಡಿಎಸ್ ಅತೀ ಹೆಚ್ಚು ಸ್ಥಾನ ಗೆಲ್ಲುವ ಕ್ಷೇತ್ರವಾಗಿದೆ. ಆದರೆ, ಈ ಬಾರಿ ಬಿಜೆಪಿ ಒಂದಷ್ಟು ಸ್ಥಾನ ಗೆಲ್ಲಲು ಪ್ಲಾನ ರೆಡಿ ಮಾಡಿದೆ. ಆದರೆ ಈ ಲೆಕ್ಕಾಚಾರ ಸಂಪೂರ್ಣ ಸಫಲವಾಗಿಲ್ಲ. ಹಳೇ ಮೈಸೂರಿನಲ್ಲಿ ಈ ಬಾರಿ ಬಿಜೆಪಿ 12 ಸ್ಥಾನ ಗೆಲ್ಲಲಿದೆ. ಕಾಂಗ್ರೆಸ್ 23 ಸ್ಥಾನ ಗೆದ್ದರೆ, ಜೆಡಿಎಸ್ 22 ಸ್ಥಾನ ಗೆಲ್ಲಲಿದೆ ಎಂದು ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆ ಹೇಳುತ್ತಿದೆ.
ಈ ಬಾರಿ ರಾಜ್ಯದ ಅಧಿಕಾರದ ಗದ್ದುಗೆ ಯಾರಿಗೆ ಎಂಬ ಕುರಿತು ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆ ನಡೆಸಿದ್ದು, ಈ ಸರ್ವೆಯಿಂದಲೂ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾಂಗ್ರೆಸ್ ಈ ಬಾರಿ ಉತ್ತಮ ಪರ್ಫಾಮೆನ್ಸ್ ನೀಡಿದರೂ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆ ಹೇಳುತ್ತಿದೆ. ಬಿಜೆಪಿ ಈ ಬಾರಿ 98 ರಿಂದ 109 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. ಇನ್ನೂ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ 89 ರಿಂದ 97 ಸ್ಥಾನಗಳಲ್ಲಿ ಗೆಲ್ಲಲಿದ್ದು, ಜೆಡಿಎಸ್ 25 ರಿಂದ 29 ಸ್ಥಾನಗಳನ್ನು ಗೆಲ್ಲಲಿದೆ. ಇತರರು ಒಂದು ಸ್ಥಾನ ಗೆಲ್ಲಲಿದೆ ಎಂದು ಸುವರ್ಣ ನ್ಯೂಸ್ ಸರ್ವೆ ವರದಿ ಮಾಡಿದೆ.












Click it and Unblock the Notifications