'40% ಕಮಿಷನ್ ಸರ್ಕಾರ' ಸಮಸ್ಯೆಯಿಂದ ಕಾಂಗ್ರೆಸ್‌ಗೆ ಭರ್ಜರಿ ಗೆಲುವು: ಸಚಿನ್ ಪೈಲಟ್
ಜೈಪುರ, ಮೇ. 13: ದೇಶದ ಗಮನ ಸೆಳೆದಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ಮತ ಏಣಿಕೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಬಹುಮತದತ್ತ ಮುನ್ನಡೆ ಸಾಧಿಸಿದ್ದು, ಇದಕ್ಕೆ ಆಡಳಿತರೂಢ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ ಕಾರಣ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.
ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ಮಾರ್ಕ್ 113 ದಾಟಿದೆ. ಬಿಜೆಪಿ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಬಿಜೆಪಿಯ ಹಲವು ಸಚಿವರು ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿಗೆ ಮುಖಭಂಗ ಖಚಿತವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸುಲಭ ಗೆಲುವು ದಾಖಲಿಸುತ್ತಿರುವುದಕ್ಕೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಪಕ್ಷದ ಯಶಸ್ಸಿಗೆ ಪ್ರಮುಖ ಕಾರಣವನ್ನು ಪಟ್ಟಿ ಮಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಅಶೀಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿನ್ ಪೈಲಟ್, '40% ಕಮಿಷನ್ ಸರ್ಕಾರ' ಸಮಸ್ಯೆಯಿಂದ ಜನ ಬೇಸತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಜನರೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡಿದೆ ಎಂದು ಹೇಳಿದ್ದಾರೆ.
"ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದೆ. ನಾವು ಭರ್ಜರಿ ಗೆಲುವು ಸಾಧಿಸುತ್ತೇವೆ. ನಾವು ನೀಡಿದ "40% ಕಮಿಷನ್ ಸರ್ಕಾರ" ಎಂಬ ಘೋಷಣೆಯನ್ನು ನಾಡಿನ ಜನ ಸಾಮಾನ್ಯರು ಒಪ್ಪಿಕೊಂಡಿದ್ದಾರೆ. ಇದು ಬಿಜೆಪಿಯನ್ನು ಸೋಲಿಸಲು ನಾವು ಎತ್ತಿದ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ಜನರು ಅದನ್ನು ಸ್ವೀಕರಿಸಿ ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ" ಎಂದು ಸಚಿನ್ ಪೈಲಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications