ಕರ್ನಾಟಕ ಚುನಾವಣೆ ಫಲಿತಾಂಶ 2023: ಬಹುಮತದತ್ತ ಕಾಂಗ್ರೆಸ್; ಬಿಜೆಪಿಗೆ ಹಿನ್ನಡೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗುತ್ತಿದ್ದು, ಯಾವ ಪಕ್ಷಕ್ಕೆ ಪೂರ್ಣ ಬಹುಮತ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮೊದಲು ಅಂಚೆ ಮತಗಳನ್ನು ಎಣಿಸಲಾಯಿತು. ನಂತರ 9 ಗಂಟೆಯವರೆಗೆ ಮೊದಲ ಸುತ್ತಿನ ಮುಕ್ತಾಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಭಾರೀ ಮುನ್ನಡೆ ಪಡೆದುಕೊಂಡಿದ್ದಾರೆ.

ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 88 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಜೆಡಿಎಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. 3 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿಯ ಘಟಾನುಘಟಿ ನಾಯಕರು ಮತ್ತು ಹಾಲಿ ಸಚಿವರೇ ಆರಂಭಿಕ ಹಿನ್ನಡೆ ಅನುಭವಿಸಿದ್ದು, ಬಿಜೆಪಿಗೆ ಅತಂಕಕಾರಿಯಾಗಿದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿಗಳು ಹಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಕಾಂಗ್ರೆಸ್ ಮುನ್ನಡೆಯತ್ತ ಸಾಗುತ್ತಿದ್ದು, ಇದೇ ಟ್ರೆಂಡ್ ಮುಂದುವರೆದರೆ ಕಾಂಗ್ರೆಸ್ ಸರಳ ಬಹುಮತದತ್ತ ಸಾಗಲಿದೆ.












Click it and Unblock the Notifications