ಸಿದ್ದರಾಮಯ್ಯ ಸಹಕಾರ ಕೊಡುವ ವಿಶ್ವಾಸವಿದೆ: ಸಿಎಂ ಸ್ಥಾನವನ್ನ ತ್ಯಾಗ ಮಾಡ್ತಾರಾ ಟಗರು : ಡಿ ಕೆ ಶಿವಕುಮಾರ್ ಹೇಳಿದ್ದೇನು?
ತುಮಕೂರು, ಮೇ 14: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಇಂದು(ಶಾಸಕಾಂಗ) ಕಾಂಗ್ರೆಸ್ ಶಾಸಕಾಂಗ ಸಭೆಯನ್ನ ಕರೆದಿದ್ದು, ಮುಖ್ಯಮಂತ್ರಿ ವಿಚಾರವಾಗಿ ಚರ್ಚೆಯಾಗಲಿದೆ.
ಈಗಾಗಲೇ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದ್ದು, ನಾನು ಸೋತು ಹಲವು ಬಾರೀ ಸಿದ್ದರಾಮಯ್ಯ ಅವರಿಗೆ ಸಹಕಾರ ಕೊಟ್ಟಿದ್ದೇನೆ. ಈ ಬಾರೀ ಅವರು ನನಗೆ ಸಹಕಾರ ಕೊಡುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಆಸೆಯನ್ನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತುಮಕೂರಿನ ಅಜ್ಜಯ್ಯನ ದರ್ಶನದ ಬಳಿಕ ಮಾಧ್ಯಮಗಳ ಮಾತನಾಡಿದ ಅವರು, ಈ ಹಿಂದೆ ಹಲವು ಬಾರಿ ಪಕ್ಷದ ವಿಚಾರದಲ್ಲಿ ನಾನು ಸೋತಿದ್ದೇನೆ. ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡದೇ ಇದ್ದಾಗ ನಾನು ತಾಳ್ಮೆಯಿಂದ ಇರಲಿಲ್ಲಾ? ಈ ಹಿಂದೆ ನಾನು ಸಿದ್ದರಾಮಯ್ಯ ಅವರಿಗೆ ಸಹಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಈ ಬಾರೀ ನನಗೆ ಅವಕಾಶ ಮಾಡಿಕೊಂಡಿ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ.
ಇನ್ನೂ ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟಿರುವುದು ಅಜ್ಜಯ್ಯ. ನಾವು ಯಾರ ಹಂಗಿಲನಲ್ಲೂ ಅಧಿಕಾರ ಮಾಡ್ಬಾರ್ದು ಎಂದು ಅಜ್ಜಯ್ಯನ ಬಳಿ ಬೇಡಿಕೊಂಡಿದ್ದೆ. ನಾವು ಅಧಿಕಾರದಲ್ಲಿದ್ದಾಗ ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕು ಎಂದು ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ಗೃಹಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಬಸ್ ಪಾಸ್ ನೀಡಿದ್ದೇವೆ ಎಂದು ಹೇಳಿದರು.
ಆದಾಯ ತೆರಿಗೆ, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ. ಈ ಮಠ ನನಗೆ ಪುಣ್ಯ ದೈವ ಕ್ಷೇತ್ರ. ನನಗೆ ಪ್ರತಿಯೊಂದು ಸಂದರ್ಭದಲ್ಲಿ ಕೂಡ ಗಂಗಾಧರ ಅಜ್ಜ, ಇಲ್ಲಿಯ ಸ್ವಾಮೀಜಿ ನನಗೆ ಮಾರ್ಗದರ್ಶನ ಮಾಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡ್ಬೇಕು, ಯಾರಿಗೆ ಕೊಡ್ಬಾರ್ದು ಅನ್ನೋದನ್ನ ಇಲ್ಲೇ ಮಾರ್ಗದರ್ಶನ ಪಡೆದು ನಿರ್ಧಾರ ಮಾಡಿದ್ದೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಅಜ್ಜಯ್ಯನ ಮಾರ್ಗದರ್ಶನ ನಮಗೆ ಕೈ ಹಿಡಿದಿದೆ. ಇಲ್ಲಿಗೆ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಬಂದಿದ್ದಾರೆ. ಅವರಿಗೂ ಸಹ ಮಂಡ್ಯದಲ್ಲಿ ಏನಾಗುತ್ತೋ ಅತ್ತಾ. ಅವರಿಗೂ ಸಹ ನಾನು ಧೃಯ ಹೇಳಿದ್ದೇ. ಈಗ ಮಂಡ್ಯದಲ್ಲಿ ಕಾಂಗ್ರೆಸ್‍ಗೆ ಗೆದ್ದಿದೆ. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಶಾಸಕರು, ಬೇಳೂರು ಗೋಪಾಲಕೃಷ್ಣ ಕೂಡ ಇಲ್ಲಿ ಬಂದಿದ್ದಾರೆ. ಎಲ್ಲರೂ ಅವರವರಾಗಿಯೇ ಬಂದಿದ್ದಾರೆ ಎಂದು ಹೇಳಿದರು.
ಇನ್ನೂ ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಅನ್ನೋದು ಶಾಸಕಾಂಗ ಸಭೆಯಲ್ಲಿ ನಿರ್ಧಾರ ಆಗುತ್ತದೆ. ಅಜ್ಜಯ್ಯನ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಏರುತ್ತೇನೆ ಎಂಬ ನಂಬಿಕೆ ಇದೆ. ನೋಡೋಣ, ಆಗ್ತೀನಿ ಅನ್ನೋ ನಂಬಿಕೆ ನನಗಿದೆ ಎನ್ನುವ ಮೂಲಕ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications