Karnataka Elections: ಫಲಿತಾಂಶದ ಮೇಲೆ ಬೆಟ್ಟಿಂಗ್- ಬೆಂಗಳೂರಿನಲ್ಲಿ ಬುಕ್ಕಿಗಳಿಗೆ ಸಿಸಿಬಿ ಎಚ್ಚರಿಕೆ
ಬೆಂಗಳೂರು, ಮೇ 09: ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Elections 2023 ) ನಡೆಯಲಿದೆ. ಚುನಾವಣಾ ಫಲಿತಾಂಶಗಳ ಮೇಲೆ ಬೆಟ್ಟಿಂಗ್‌ನಲ್ಲಿ ತೊಡಗಿರುವ ಬುಕ್ಕಿಗಳ ವಿರುದ್ಧ ಬೆಂಗಳೂರು ಪೊಲೀಸರು ಕಠಿಣ ಕ್ರಮಕೈಗೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಬುಧವಾರ ಚುನಾವಣೆ ನಿಗದಿಯಾಗಿದ್ದು, ಬೆಟ್ಟಿಂಗ್ ಗ್ರೂಪ್‌ಗಳು ಮತ್ತು ಆಫ್‌ಗಳ ಮೂಲಕ ಆನ್‌ಲೈನ್ ಬೆಟ್ಟಿಂಗ್ ಮೇಲೆ ಕಣ್ಣಿಡಲು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರಿಗೆ ಸೂಚಿಸಿದೆ ಎಂದು ಟಿವಿ 9 ಕನ್ನಡ ವರದಿ ಮಾಡಿದೆ.

ಪ್ರಮುಖ ಅಸೆಂಬ್ಲಿ ಕ್ಷೇತ್ರಗಳು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ವಿಐಪಿ ಅಭ್ಯರ್ಥಿಗಳ ಮೇಲೆ ಜನರು ಬಾಜಿ ಕಟ್ಟುತ್ತಿದ್ದಾರೆ ಎಂದು ಟಿವಿ9 ಕನ್ನಡ ವರದಿ ಮಾಡಿದೆ.
ಸಿಸಿಬಿ ಹೆಚ್ಚಿನ ಅಲರ್ಟ್‌ನಲ್ಲಿದ್ದು, ಮುಂದಿನ ಒಂದು ವಾರದಲ್ಲಿ ಜಾಗರೂಕರಾಗಿರಲು ಪೊಲೀಸರಿಗೆ ಸೂಚಿಸಲಾಗಿದೆ. ಜೂಜಾಟದ ಹಲವಾರು ಆಪ್‌ಗಳ ಮೇಲೆ ಬೆಟ್ಟಿಂಗ್ ನಡೆಯುತ್ತಿದೆ ಎಂದು ವರದಿಯಾಗಿದೆ.
ಚುನಾವಣೆಗೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಂಡುಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಬುಧವಾರ ಚುನಾವಣೆ ನಿಗದಿಯಾಗಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದ ನಂತರ ಭಾರತೀಯ ಚುನಾವಣಾ ಆಯೋಗವು 375 ಕೋಟಿ ರೂಪಾಯಿ ಮೌಲ್ಯದ ನಗದು, ಚಿನ್ನಾಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.
2018 ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 83.93 ಕೋಟಿ ರೂಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಾರಿಯ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು 288 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಇಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.












Click it and Unblock the Notifications