TV9 C-Voter Opinion Poll Survey: ರಾಜಧಾನಿ ಗೆದ್ದವರು ರಾಜ್ಯ ಗೆಲ್ಲುತ್ತಾರಾ: ಬೆಂಗಳೂರಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಬೆಂಗಳೂರು, ಏಪ್ರಿಲ್ 25: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು, ಈಗಾಗಲೇ ಮೂರು ಪಕ್ಷಗಳ ರಾಜಕಾರಣಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಇತ್ತ ಈ ಬಾರಿ ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ಪಕ್ಷವನ್ನ ಭದ್ರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಫುಲ್ ಆಕ್ಟಿವ್ ಆಗಿವೆ.
ರಾಜ್ಯ ರಾಜಧಾನಿ ಬೆಂಗಳೂರನ್ನು ಗೆದ್ದವರೇ ರಾಜ್ಯವನ್ನು ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬೆಂಗಳೂರಿನಲ್ಲಿ ಚುನಾವಣಾ ತಯಾರಿ ನಡೆಸಿವೆ.

ಇನ್ನೂ ರಾಜ್ಯ ರಾಜಧಾನಿ ಬೆಂಗಳೂರು ನಗರ ವ್ಯಾಪ್ತಿಯ 28 ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 4 ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ತಯಾರಿ ನಡೆಸಿದ್ದು, ಮೂರು ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಗೆ ಬೆಂಗಳೂರು ನಗರ ವ್ಯಾಪ್ತಿಯ ಮೇಲೆ ಹೆಚ್ಚಿನ ಒತ್ತು ನೀಡಿವೆ. ಏಕೆಂದರೆ 2023 ರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ರಾಜಧಾನಿ ಬೆಂಗಳೂರು ಬಿಬಿಎಂಪಿ ಚುನಾವಣೆಯ ಅಧಿಕಾರದ ಚುಕ್ಕಾಣಿ ಹಿಡಿಯುವ ನಿಟ್ಟಿಯಲ್ಲಿ ಸಾಕಷ್ಟು ರೂಪರೇಷೆಯನ್ನ ಸಿದ್ದಪಡಿಸಿದ್ದಾರೆ. ಹೀಗಾಗಿ ಹೆಚ್ಚಿನ ವಿಧಾನಸಭಾ ಕ್ಷೇತ್ರವನ್ನ ಗೆಲ್ಲುವ ಅನಿವಾರ್ಯತೆ ರಾಜಕೀಯ ಪಕ್ಷಗಳಿವೆ.
ಇನ್ನೂ ಬೆಂಗಳೂರು ಭಾಗ ಮೇಲೆ ಕಣ್ಣೀಟ್ಟಿರುವ ರಾಜಕೀಯ ಪಕ್ಷಗಳಿಗೆ ಟಿವಿ9 ಕನ್ನಡ ಸುದ್ದಿ ವಾಹಿನಿ' ನಡೆಸಿದ ಸಿ-ವೋಟರ್ ಚುನಾವಣಾ ಪೂರ್ವ (TV9 C-Voter Opinion Poll Survey) ಸಮೀಕ್ಷೆಯ ಅಂಕಿ ಅಂಶಗಳು ಮಂಗಳವಾರ ಹೊರ ಬಿದಿದ್ದು, ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಸಿ-ವೋಟರ್ ಚುನಾವಣಾ ಪೂರ್ವ ಯಿಂದ ಅಘಾತ ಉಂಟು ಮಾಡಿದೆ.
ಬೆಂಗಳೂರು ಭಾಗದ ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 18 ರಿಂದ 22 ಸ್ಥಾನಗಳು ಸಿಗಬಹುದು ಎಂದು ಅಂದಾಜಿಸಲಾಗಿದ್ದು, ಇನ್ನೂ ಬಿಜೆಪಿಗೆ 7 ರಿಂದ 11 ಸ್ಥಾನಗಳು ಸಿಕ್ಕರೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಗೆ 1 ರಿಂದ 5 ಸ್ಥಾನಗಳು ಸಿಗಬಹುದು ಎಂದು ಸರ್ವೆಯಿಂದ ತಿಳಿದು ಬಂದಿದೆ. 1 ಸ್ಥಾನವನ್ನ ಸ್ವತಂತ್ರ ಅಭ್ಯರ್ಥಿಗಳು ಗೆಲ್ಲಬಹುದು ಎನ್ನಲಾಗಿದೆ.












Click it and Unblock the Notifications