ಮತದಾನಕ್ಕೆ 3 ದಿನ ಬಾಕಿ; ಸಮೀಕ್ಷೆಗಳಿಗೆ ತಡೆ ಹಾಕಿದ ಆಯೋಗ
ಬೆಂಗಳೂರು, ಮೇ 7; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10ರ ಬುಧವಾರ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಆಯೋಗ ನಿಯಮಗಳ ಅನ್ವಯ ಚುನಾವಣಾ ಸಮೀಕ್ಷೆ, ಚರ್ಚೆಗಳಿಗೆ ತಡೆ ಹಾಕಿದೆ. ಈ ನಿಯಮ ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಮತದಾನದ 48 ಗಂಟೆಗಳ ಮೊದಲು ಮಾಧ್ಯಮಗಳಲ್ಲಿ ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 120ರ ಪ್ರಕಾರ ನಿಷೇಧಿಸಲಾಗಿದೆ. ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.

ಟಿವಿ/ ರೇಡಿಯೋ/ ಕೇಬಲ್ ನೆಟ್‍ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನ ಪೂರ್ವದ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮ ಕೈಗೊಳ್ಳಬೇಕು. ಟಿವಿ ಕಾರ್ಯಕ್ರಮದಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.
ಸಮೀಕ್ಷೆಗಳಿಗೆ ತಡೆ; ಮತದಾನಕ್ಕಿಂತ 48 ಗಂಟೆಗಳ ಮೊದಲ ಅವಧಿಯಲ್ಲಿ ಒಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು, ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು, ಅದೇ ರೀತಿ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 120ರ ವ್ಯಾಪ್ತಿಯಲ್ಲಿ ಬರುತ್ತದೆ.

ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲಾ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳು ಮೇ 8ರ ಸಂಜೆ 6 ಗಂಟೆಯಿಂದ ಮೇ 10ರ ಸಂಜೆ 6.30 ರವರೆಗೆ ಈ ನಿರ್ದೇಶನಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ 2 ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಸಮೀಕ್ಷೆ ಮಾಡಿಸುತ್ತಿವೆ. ರಾಷ್ಟ್ರೀಯ ವಾಹಿನಿಗಳು ವಿವಿಧ ಸಂಸ್ಥೆಗಳ ಜೊತೆ ಸೇರಿ ಚುನಾವಣಾ ಪೂರ್ವ ಸಮೀಕ್ಷೆ ಮಾಡಿವೆ. ಆದರೆ ಸೋಮವಾರ ಸಂಜೆ 6 ಗಂಟೆಯ ಬಳಿಕ ಯಾವುದೇ ಸಮೀಕ್ಷೆ ಪ್ರಕಟಿಸುವಂತಿಲ್ಲ. ಅಲ್ಲದೇ ಮತದಾನ ಮುಗಿದ ಅರ್ಧ ಗಂಟೆಯ ಬಳಿಕ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಬೇಕಿದೆ.
ಜಾಹೀರಾತಿಗೂ ಅನುಮತಿ ಕಡ್ಡಾಯ; ಮೇ 10ರಂದು ಮತದಾನ ನಡೆಯವ ಹಿನ್ನಲೆಯಲ್ಲಿ ಮೇ 9 ಹಾಗೂ 10ರಂದು ಅಭ್ಯರ್ಥಿಗಳು/ ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications