ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ 16 ಐಎಎಸ್ ಅಧಿಕಾರಿಗಳ ವರ್ಗಾವಣೆ
Recommended Video

ಮೈಸೂರು, ಏಪ್ರಿಲ್ 17: ಕರ್ನಾಟಕದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 16 ಐಎಎಸ್ ಅಧಿಕಾರಿಗಳನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಳೆದ ತಿಂಗಳಷ್ಟೆ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಕೆ ಬಿ ಶಿವಕುಮಾರ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿದ್ದ ದರ್ಪಣ್ ಜೈನ್ ಅವರನ್ನು ನೇಮಿಸಲಾಗಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ವರ್ಗಾವಣೆಯಾದ ಶಿವಕುಮಾರ್ ಕೆ.ಬಿ. ಆವರಿಗೆ ಯಾವ ಸ್ಥಾನ ನೀಡಲಿದ್ದಾರೆ ಎಂಬುದು ತಿಳಿದುಬಂದಿಲ್ಲ. ಶಿವಕುಮಾರ್ ಗೂ ಮೊದಲು ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರಂದೀಪ್ ಅವರನ್ನೂ ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಇದುವರೆಗೂ ಅವರಿಗೆ ಯಾವುದೇ ಹುದ್ದೆ ನೀಡದ ಕಾರಣ ಅವರು ಖಾಲಿ ಕುಳಿತಿದ್ದಾರೆ!

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ರಾಜ್ಯ ಸರ್ಕಾರ ರ, ಆಯಕಟ್ಟಿನ ಸ್ಥಳಗಳಿಗೆ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೂರು ನೀಡಿದ್ದರು. ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ರಾಜ್ಯ ಸರ್ಕಾರ ಮಾಡಿರುವ ವರ್ಗಾವಣೆಗಳ ಬಗ್ಗೆ ಆಕ್ಷೇಪ ಸಲ್ಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಶಿವಕುಮಾರ್ ಕೆ.ಬಿ. ಸೇರಿ 8 ಅಧಿಕಾರಿಗಳಿಗೆ ಸ್ಥಳ ತೋರಿಸದೆ ವರ್ಗಾವಣೆ ಮಾಡಿದೆ.












Click it and Unblock the Notifications