ಬೆಂಗಳೂರು ನಗರದಲ್ಲಿ 3 ಲಕ್ಷ ಹೊಸ ಮತದಾರರು ಸೇರ್ಪಡೆ

ಬೆಂಗಳೂರು, ಮಾರ್ಚ್ 01 : 2018ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರದ ಮತದಾರರ ಪಟ್ಟಿ ಅಂತಿಮಗೊಳಿಸಲಾಗಿದೆ. 3,16,467 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮತ್ತು ಚುನಾವಣಾಧಿಕಾರಿ ಎನ್.ಮಂಜುನಾಥ್ ಪ್ರಸಾದ್ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 'ಹೊಸದಾಗಿ ಸೇರ್ಪಡೆಗೊಂಡ ಮತದಾರರಿಗೆ ಗುರುತಿನ ಚೀಟಿಯನ್ನು ಉಚಿತವಾಗಿ ಮಾರ್ಚ್ 15ರೊಳಗೆ ತಲುಪಿಸಲಾಗುತ್ತದೆ' ಎಂದರು.

ಬೆಂಗಳೂರು ನಗರದಲ್ಲಿ 3,16,467 ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಇವರಲ್ಲಿ 1,58,728 ಪುರುಷ, 1,57,739 ಮಹಿಳಾ ಮತದಾರರು ಇದ್ದಾರೆ. ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಯಶವಂತಪುರ, ಮಹದೇವಪುರ ಕ್ಷೇತ್ರಗಳಲ್ಲಿ ಹೆಚ್ಚು ಹೊಸ ಮತದಾರರು ಸೇರಿದ್ದಾರೆ.

manjunatha prasad

ವಿಧಾನಸಭಾ ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ನೋಂದಣಾಧಿಕಾರಿಗಳ ಕಚೇರಿ ಮತ್ತು ವಾರ್ಡ್ ಕಚೇರಿಗಳಲ್ಲಿ ನೂತನ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾನದಕ್ಕಾಗಿ 7,259 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

ಬೆಂಗಳೂರು ನಗರದಲ್ಲಿ 2013ರ ಚುನಾವಣೆಯಲ್ಲಿ 54.2, 2014ರ ಲೋಕಸಭೆ ಚುನಾವಣೆಯಲ್ಲಿ 52.04 ರಷ್ಟು ಮತದಾನವಾಗಿತ್ತು. ಈ ಬಾರಿ ಚುನಾವಣೆಯಲ್ಲಿ ಎಷ್ಟು ಮತದಾನವಾಗಲಿದೆ? ಎಂದು ಕಾದು ನೋಡಬೇಕಿದೆ.

ವಿಧಾನಸಭಾ ಕ್ಷೇತ್ರಗಳು : ರಾಜರಾಜೇಶ್ವರಿ ನಗರ, ಶಿವಾಜಿನಗರ, ಶಾಂತಿ ನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಕೆ.ಆರ್.ಪುರಂ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಪುಲಿಕೇಶಿ ನಗರ, ಸರ್ವಜ್ಞ ನಗರ, ಸಿ.ವಿ.ರಾಮನ್ ನಗರ

ಗೋವಿಂದರಾಜ ನಗರ, ವಿಜಯನಗರ, ಬಸವನಗುಡಿ, ಪದ್ಮನಾಭ ನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ, ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೇಕಲ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+