ಚುನಾವಣಾ ವರ್ಷ : ಮಂಡ್ಯ, ಹಾಸನ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ
ಬೆಂಗಳೂರು, ಡಿಸೆಂಬರ್ 29 : ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿಗೆ ಹೆಚ್ಚುವರಿ ಪದಾಧಿಕಾರಿಗಳ ನೇಮಕವಾಗಿದೆ. ಎರಡು ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆಯಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೆಚ್ಚುವರಿ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಜಿಲ್ಲಾಧ್ಯಕ್ಷರ ಬದಲಾವಣೆ : ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸಿ.ಡಿ.ಗಂಗಾಧರ, ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಜಾವಗಲ್ ಮಂಜುನಾಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪದಾಧಿಕಾರಿಗಳ ಪಟ್ಟಿ : ವಿ.ಆರ್.ಸುದರ್ಶನ್, ಮಂಜುನಾಥ ಭಂಡಾರಿ, ವೆಂಕಟಮುನಿಯಪ್ಪ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
10 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು, 16 ಪ್ರಧಾನ ಕಾರ್ಯದರ್ಶಿಗಳು, 78 ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾದ ಸಚಿವ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ ತಿಂಗಳಿನಲ್ಲಿ ಕೆಪಿಸಿಸಿ 15 ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಿತ್ತು. ಈಗ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಹೆಚ್ಚುವರಿ ಪದಾಧಿಕಾರಿಗಳನ್ನು ನೇಮಕ ಮಾಡಿದೆ.











Click it and Unblock the Notifications