Congress 3rd big promise : ಬಡ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ Free: ಇದು ಕಾಂಗ್ರೆಸ್‌ನ 3ನೇ ಗ್ಯಾರಂಟಿ!

ಕಾಂಗ್ರೆಸ್​ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಮೂರನೇ ಗ್ಯಾರಂಟಿ ಘೋಷಣೆ ಮಾಡಿದೆ.

ಬೆಂಗಳೂರು,ಫೆಬ್ರವರಿ24: ಕಾಂಗ್ರೆಸ್​ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದೆ. ಜನರನ್ನು ಸೆಳೆಯಲು ಒಂದರ ಮೇಲೆ ಒಂದರಂತೆ ಜನಾಕರ್ಷಕ ಘೋಷಣೆಗಳನ್ನು ಮಾಡುತ್ತಿದೆ.

ಮೊದಲು 200 ಯೂನಿಟ್ ವಿದ್ಯುತ್ ಉಚಿತ ಘೋಷಿಸಿದ್ದ ಕಾಂಗ್ರೆಸ್, ಎರಡನೇ ಗ್ಯಾರಂಟಿ ಯೋಜನೆಯಾಗಿ ಪ್ರತಿಯೊಂದು ಕುಟುಂಬದ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ ಹಣವನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿ ಮಾಡುವುದಾಗಿ ಘೋಷಣೆ ಮಾಡಿದೆ. ಅದರಂತೆ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಮೂರನೇ ಘೋಷಣೆ ಮಾಡಿದೆ.

Karnataka Elections 2023 : Congress 3rd big promise : 10 kg Free Rice to Each Member of Poor Family

ಈ ಕುರಿತು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್ ಸೇರಿದಂತೆ ಕೈ ಶಾಸಕರು ಈ ಮೂರನೇ ಗ್ಯಾರಂಟಿ ಯೋಜನೆಯನ್ನ ಘೋಷಣೆ ಮಾಡಿದ್ದಾರೆ.

ಈ ವೇಳೆ ಡಿ ಕೆ ಶಿವಕುಮಾರ್ ಮಾತನಾಡಿ, ಬೆಲೆ ಏರಿಕೆ ತತ್ತರಿಸಿರುವ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಾಗಲೇ ಎರಡು ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಪ್ರಜಾಧ್ವನಿ ಯಾತ್ರೆ ವೇಳೆ ನಮಗೆ ಜನರಿಗೆ ಒತ್ತಡ ಇದೆ. 7 ಕೆಜಿ ಅಕ್ಕಿಯನ್ನ 5 ಕೆಜಿಗೆ ಅಕ್ಕಿಯನ್ನ ಇಳಿಸಿದ್ದಾರೆ. ಹೀಗಾಗಿ ಜನತೆಯ ಒತ್ತಡ ಇದೆ. ಇವತ್ತು ಕಾಂಗ್ರೆಸ್ ಪಕ್ಷ ಮೂರನೇ ಗ್ಯಾರಂಟಿ ಅನ್ನಭಾಗ್ಯ ಘೋಷಣೆ ಮಾಡ್ತಿದ್ದೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+