Dalit CM Race: ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ ನಲ್ಲಿ ಸಿಎಂ ಕೂಗು; ಸಿಎಂ ರೇಸ್‌ ನಲ್ಲಿ ದಲಿತ ಯುವ ನಾಯಕ ಹೆಸರು!

ಕಲಬುರಗಿ, ಮೇ 12: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ ಡೌನ್‌ ಶುರುವಾಗಿದೆ. ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಬಹುಮತವನ್ನ ಗಳಿಸಬಹುದು ಎಂದು ಹೇಳಲಾಗಿದ್ದು, ಸರ್ಕಾರ ರಚನೆಗೂ ಮುನ್ನವೇ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮತ್ತೆ ದಲಿತ ಸಿಎಂ ಕೂಗು ಕೇಳಿ ಬಂದಿದ್ದು, ದಲಿತ ಯುವ ನಾಯಕನ ಹೆಸರು ಮುನ್ನಲೆಗೆ ಬಂದಿದೆ.

ಹೌದು, ರಾಜ್ಯ ವಿಧಾನಸಭಾ ಚುನಾವಣೆಯ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ ಪಾಳಯದಲ್ಲಿ ಕಾರ್ಯಚಟುವಟಿಕಗೆಳು ಜೋರಾಗಿದ್ದು, ಸಿಎಂ ರೇಸ್ ಆರಂಭವಾಗಿದೆ. ಪದೇ ಪದೇ ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಸ್ಥಾನಕ್ಕಾಗಿ ಕೂಗು ಕೇಳಿ ಬರುತ್ತಿತ್ತು. ಇದೀಗ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ದಲಿತ ಸಿಎಂ ಕೂಗು ಕೇಳಿ ಬಂದಿದೆ.

priyank kharge

ಕಾಂಗ್ರೆಸ್‌ನಲ್ಲಿ ದಲಿತ ಸಮುದಾಯದ ಮುಂಚೂಣಿ ನಾಯಕರಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ ಅವರ ಹೆಸರು ಕೇಳಿಬರುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರಂತೂ ದಲಿತ ಸಮುದಾಯ ಎಂದು ಅವಕಾಶ ಬೇಡ. ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲ ಸಮುದಾಯದ ನಾಯಕ ಎಂದು ಪರಿಗಣಿಸಿ ಅವಕಾಶ ಕೊಡಿ ಎಂದು ಹಲವಾರು ಬಾರಿ ಹೇಳಿದ್ದಾರೆ. ಡಾ.ಜಿ. ಪರಮೇಶ್ವರ್‌ ಅವರು ಸಹ, ಯಾಕೆ ಅವಕಾಶ ಸಿಗುವುದಿಲ್ಲ ಎಂಬ ಬೇಸರವನ್ನ ಹಾರ ಹಾಕಿದ ಉದಾಹರಣೆಗಳಿವೆ.

ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ. ಆದರೆ ದಲಿತ ನಾಯಕರನ್ನು ಸಿಎಂ ಮಾಡೋ ಕಾಲವಿನ್ನೂ ಕೂಡ ಬಂದಿಲ್ಲ. ಕಾಂಗ್ರೆಸ್ ಹಿರಿಯ ನಾಯಕರಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಕೆ.ಹೆಚ್​ ಮುನಿಯಪ್ಪರಂತ ಘಟಾನುಘಟಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ಪುತ್ರ ಪ್ರಿಯಾಂಕ ಖರ್ಗೆರನ್ನು ಸಿಎಂ ಮಾಡಬೇಕು ಎನ್ನುವ ಅಭಿಯಾನ ಮಾಡಲಾಗುತ್ತಿದೆ. ಫಲಿತಾಂಶಕ್ಕೂ ಮುನ್ನ ಮತ್ತೆ ದಲಿತ ಸಿಎಂ ಕೂಗು ಕಾಂಗ್ರೆಸ್ ಪಾಳಯದಲ್ಲಿ ಮುನ್ನೆಲೆಗೆ ಬಂದಿದೆ.

priyank kharge

ಇತ್ತ ಎಕ್ಸಿಟ್‌ ಪೋನ್‌ ಸಮೀಕ್ಷೆಯಿಂದ ಕಾಂಗ್ರೆಸ್‌ ನಾಯಕರು ಮಾನಸಿಕವಾಗಿ ಸರ್ಕಾರ ರಚಿಸಲು ಸಿದ್ದರಾಗಿದ್ದು, ಪ್ರಿಯಾಂಕ್ ಖರ್ಗೆಯವರನ್ನು ಮುಖ್ಯಮಂತ್ರಿ ಆಗಬೇಕು ಎಂದು ಬೆಂಬಲಿಗರಿಂದ ಪೋಸ್ಟರ್‌ ಅಭಿಯಾನ ಆರಂಭವಾಗಿದೆ.

ಪ್ರಿಯಾಂಕ್‌ ಖರ್ಗೆ ಸಿಎಂ ಆಗ್ಬೇಕು ಎಂಬ ಪೋಸ್ಟರ್‌ ನಲ್ಲಿ ಮುಂದಿನ ಮುಖ್ಯಮಂತ್ರಿ, ಇದು ಅಪ್ಪನ ಕನಸಲ್ಲ, ಕೋಟ್ಯಂತರ ಕನ್ನಡಿಗರ ಕನಸು. ಪ್ರಿಯಾಂಕ್ ಖರ್ಗೆ ಅವರಿಗೆ ಅರ್ಹತೆ, ಸಾಮರ್ಥ್ಯ, ಯೋಗ್ಯತೆ, ಜ್ಞಾನ, ಬದ್ಧತೆ ಹಾಗೂ ಕನ್ನಡಿಗರ ಆಶೀರ್ವಾದವಿದೆ. ಹೀಗಾಗಿ ಮುಂದಿನ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಅಂತಾ ಕಲಬುರಗಿ ಕಾಂಗ್ರೆಸ್‌ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+