ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಎಂಟ್ರಿ: ಮಾಹಿತಿ ಕೊಟ್ಟ ಗೀತಾ ಶಿವರಾಜ್ ಕುಮಾರ್!
ಬೆಂಗಳೂರು,ಏಪ್ರಿಲ್28: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ನನಗೆ ಸಂತೋಷವನ್ನ ಉಂಟು ಮಾಡಿದೆ. ನಟ ಶಿವರಾಜಕುಮಾರ್ ಅವರು ಕೂಡ ಕಾಂಗ್ರೆಸ್ ಪಕ್ಷದ ಕೆಲವು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅವರು ಚಿತ್ರೀಕರಣದಲ್ಲಿರುವುದರಿಂದ ಸಮಯ ಬಿಡುವು ಮಾಡಿಕೊಂಡು ಪ್ರಚಾರ ಮಾಡುತ್ತಾರೆ ಎಂದು ಗೀತಾ ಶಿವರಾಜ್ ಕುಮಾರ್ ಮಾಹಿತಿ ನೀಡಿದರು.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಐತಿಹಾಸಿಕ ಪಕ್ಷ. ಈ ಪಕ್ಷಕ್ಕೆ ಸೇರುತ್ತಿರುವುದು ಬಹಳ ಸಂತೋಷವಾಗುತ್ತಿದೆ. ನನ್ನನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡ ಸಹೋದರ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದಗಳು. ನಾವು ಕನಕಪುರಕ್ಕೆ ಶಿಫ್ಟ್ ಆಗುತ್ತಿದ್ದೇವೆ ಎಂದು ಮಾಧ್ಯಮಗಳು ತಿಳಿಸುತ್ತಿದ್ದು, ಅದೂ ಕೂಡ ಸಧ್ಯದಲ್ಲೇ ಆಗಲಿದೆ ಎಂದು ಹೇಳಿದರು.

ಇನ್ನೂ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ತಂದೆ ಜತೆ ಕೆಲಸ ಮಾಡಿದ್ದು, ಅವರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ತಮ್ಮ ಮಧು ಕಾಂಗ್ರೆಸ್ ಸೇರಿದಾಗಲೇ ನಾನು ಕಾಂಗ್ರೆಸ್ ಜತೆಗಿದ್ದೆ. ಪಕ್ಷ ನನಗೆ ಎಲ್ಲಿ ಹೇಳುತ್ತದೆಯೋ ಅಲ್ಲಿ ಹೋಗಿ ಪ್ರಚಾರ ಮಾಡಲು ಸಿದ್ಧನಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರಾದ ಸಿದ್ದರಾಮಯ್ಯ ಅವರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದರು.
ಇನ್ನೂ ಗೀತಾ ಶಿವಕುಮಾರ್ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ನಂತರ ಡಿ ಕೆ ಶಿವಕುಮಾರ್ ಮಾತನಾಡಿ, ಈ ವಿಶೇಷ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ಬಂದಿದ್ದೇನೆ. ನಾನು ಅನೇಕ ದಿನಗಳಿಂದ ಗಾಳ ಹಾಕುತ್ತಿದ್ದೆ. ಮಧುಬಂಗಾರಪ್ಪ ಅವರು ಗಾಳಕ್ಕೆ ಸಿಕ್ಕರು. ನಂತರ ಸಹೋದರಿ ಗೀತಾ ಶಿವರಾಜಕುಮಾರ್ ಅವರಿಗೆ ಬಲೆಯನ್ನೇ ಬೀಸಬೇಕಾಯಿತು. ಅವರು ನನ್ನ ಬಲೆಗೂ ಬೀಳಲಿಲ್ಲ. ಅವರು ರಾಹುಲ್ ಗಾಂಧಿ ಅವರು ರಾಜ್ಯದ ಜನರಿಗೆ ಘೋಷಣೆ ಮಾಡಿರುವ ಜನಪರ ಕಾರ್ಯಕ್ರಮಗಳ ಬಲೆಗೆ ಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಟೀಕೆ ಮಾಡಿದ್ದರು. ಅವರ ಟೀಕೆಗೆ ರಾಜಕುಮಾರ್ ಅವರ ಸೊಸೆ, ನಮ್ಮ ಶಿವಣ್ಣನ ಧರ್ಮಪತ್ನಿ, ನನ್ನ ನಾಯಕರಾದ ಬಂಗಾರಪ್ಪ ಅವರ ಪುತ್ರಿ ಗೀತಾ ಅವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಉತ್ತರ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಗೀತಾ ಅವರನ್ನು ಪಕ್ಷಕ್ಕೆ ನೀನೇ ಹೋಗಿ ಸೇರಿಸಿಕೊಳ್ಳಬೇಕು ಎಂದು ಹೇಳಿದರು. ಹೀಗಾಗಿ ಮಂಗಳೂರಿನಿಂದ ಈ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದೇನೆ. ಇಂದು ಕಾಂಗ್ರೆಸ್ ಪಕ್ಷದ ಪರವಾಗಿ ಬಹಳ ಸಂತೋಷದಿಂದ ಗೀತಾ ಶಿವರಾಜಕುಮಾರ್ ಅವರನ್ನು ಪಕ್ಷಕ್ಕೆ ತುಂಬುಹೃದಯದಿಂದ ಸ್ವಾಗತಿಸುತ್ತಿದ್ದೇನೆ.
ಇನ್ನು ಮೂಡಿಗೆರೆ ಕ್ಷೇತ್ರದಲ್ಲಿ ಬಹಳ ವಿಚಲಿತ ರಾಜಕಾರಣ ನಡೆಯುತ್ತಿದೆ. ಬಿ.ಬಿ ನಿಂಗಯ್ಯ ಅವರು ಜೆಡಿಎಶ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಬೇಕು ಎಂದು 6 ತಿಂಗಳ ಕಾಲ ಕಾದರು. ನಾನು ಒಪ್ಪಲಿಲ್ಲ. ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಿದರು. ಜೆಡಿಎಸ್ ನಲ್ಲಿ ಮೂರು ಬಾರಿ ಶಾಸಕರು ಹಾಗೂ ಮಾಜಿ ಮಂತ್ರಿಯಾಗಿದ್ದ ಸಜ್ಜನ, ಹಸನ್ಮುಖಿ ನಾಯಕ
ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಕಾಂಗ್ರೆಸ್ ಪಕ್ಷ ಮಾತ್ರ ರಕ್ಷಣೆ ನೀಡಲು ಸಾಧ್ಯ. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ಮಾ ಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರು ಕೂತ ಜಾಗದಲ್ಲಿ ಅಧ್ಯಕ್ಷರನ್ನಾಗಿ ಮಾಡಿದ್ದು, ಈ ಪಕ್ಷ ಸೇರಬೇಕು ಎಂದು
ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಶಮ್ಶುಲ್ಲಾ ಖಾನ್ ಹಾಗೂ ಶಾಂತಿನಗರ ಕ್ಷೇತ್ರದ ಭುವನೇಶ್ವರಿ ತುಳಸಿರಾಮ, ದೊಮ್ಮಲೂರಿನ ಮಾಜಿ ಕಾರ್ಪೊರೇಟರ್ ಗೀತಾ ಶ್ರೀನಿವಾಸ ರೆಡ್ಡಿ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಈ ಎಲ್ಲಾ ನಾಯಕರ ಜತೆ ಸಾವಿರಾರು ಜನ ಕಾರ್ಯಕರ್ತರು ಇಂದು ಪಕ್ಷ ಸೇರುತ್ತಿದ್ದಾರೆ. ಇವರೆಲ್ಲರಿಗೂ ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ












Click it and Unblock the Notifications