ಕರ್ನಾಟಕ ಚುನಾವಣೆ; ಸಿ-ವಿಜಿಲ್ ಮೂಲಕ ದೂರು ನೀಡುವುದು ಹೇಗೆ?
ಬೆಂಗಳೂರು, ಏಪ್ರಿಲ್ 09; ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10ರ ಬುಧವಾರ ಮತದಾನ ನಡೆಯಲಿದೆ. ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಚುನಾವಣಾ ಮಾದರಿ ನೀತಿ ಸಂಹಿತೆ ರಾಜ್ಯದಲ್ಲಿ ಜಾರಿಗೆ ಬಂದಿದೆ.
ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ, ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗ ಸಿ-ವಿಜಿಲ್(cVIGIL) ಎಂಬ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಜನರು ಈ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಪಾರದರ್ಶಕವಾಗಿ ಚುನಾವಣೆ ನಡೆಸಲು ಆಯೋಗದ ಜೊತೆ ಸಹಕಾರ ನೀಡಬಹುದಾಗಿದೆ.

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಸಹ ಲಭ್ಯವಿದೆ. ಜನರು ಅಕ್ರಮಗಳ ಬಗ್ಗೆ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡಲಿದೆ.
ಯಾವ ಮಾದರಿಯ ದೂರುಗಳು; ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದು. ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್ ಅಂಟಿಸುವುದು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ ಸಂದೇಶಗಳು, ಮತಗಟ್ಟೆಯ 200 ಮೀ. ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಬನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಜನರು ದೂರು ನೀಡಬಹುದು.

ಗೂಗಲ್ ಪ್ಲೇ-ಸ್ಟೋರ್‌ನಲ್ಲಿ ಸಿ- ವಿಜಿಲ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಿಕೊಂಡು ಸರಳವಾಗಿ ದೂರು ನೀಡಬಹುದಾಗಿದೆ. ಅಕ್ರಮದ ಕುರಿತಾದ ಫೋಟೋ ಅಥವಾ ವಿಡಿಯೋಗಳನ್ನು ಅಪ್‍ಲೋಡ್ ಮಾಡಿ ದೂರು ನೀಡಬಹುದು. ತಮ್ಮ ಸ್ವವಿವರ ನೀಡಿಯಾದರೂ ಅಥವಾ ನೀಡದೆಯೂ ದೂರು ನೀಡಬಹುದು. ಒಟ್ಟು 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಆಯೋಗ ಹೇಳಿದೆ.
ಈ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿ ನಿಯೋಜಿಸಲಾಗಿದೆ. ಇವರು ಮತದಾನ ಮುಕ್ತಾಯವಾಗುವವರೆಗೂ 3 ಪಾಳಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ.
ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ 100 ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸುವರು. ಜನರು ಸಿವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಪ್ರಕರಣಗಳನ್ನು ದಾಖಲಿಸಬೇಕು ಎಂದು ಸೂಚನೆ ಕೊಡಲಾಗಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಪಂಚರಾಜ್ಯ ಚುನಾವಣೆಗಳಲ್ಲಿ ಅಕ್ರಮ: ಚುನಾವಣಾ ಆಯೋಗದಿಂದ ₹650 ಕೋಟಿಗೂ ಅಧಿಕ ಮೌಲ್ಯದ ವಸ್ತು ಜಪ್ತಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications