Get Updates
Get notified of breaking news, exclusive insights, and must-see stories!

ಕಾಂಗ್ರೆಸ್: ಸಿಎಂ ಸ್ಥಾನಕ್ಕೆ ಇಬ್ಬರು ಮಾತ್ರವೇ ಆಕಾಂಕ್ಷಿಗಳಲ್ಲ, ನಾವೂ ಇದ್ದೇವೆ: ಹೊಸ ಬಾಂಬ್ ಸಿಡಿಸಿದ ಎಂ.ಬಿ.ಪಾಟೀಲ್

ನವದೆಹಲಿ, ಏಪ್ರಿಲ್ 07: ಕರ್ನಾಟಕ ರಾಜ್ಯ ವಿಧಾನಸಭೆಗೆ ದಿನಾಂಕ ಮಾತ್ರವೇ ಘೋಷಣೆಯಾಗಿದೆ, ಮತದಾನ ಪ್ರಕ್ರಿಯೆ ಬಾಕಿ ಇದೆ. ಹೀಗಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆ ಕಾವಿನ ಜೊತೆಗೆ ಸಿಎಂ ಸ್ಥಾನನ ಯಾರಿಗೆ? ಎಂಬ ವಿಚಾರವು ಸಾಕಷ್ಟು ಚರ್ಚೆ ಬರುತ್ತಿದೆ. ಈ ಮಧ್ಯೆ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸದರಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತ್ರವೇ ಮುಖ್ಯಮಂತ್ರಿಗಳ ಸ್ಥಾನ ಆಕಾಂಕ್ಷಿಗಳಲ್ಲ. ಅವರೊಂದಿಗೆ ನಾವು ಇದ್ದೇವೆ ಎಂದು ಎಂ.ಬಿ.ಪಾಟೀಲ್ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.

Karnataka Elections 2023: I Do Aspire To Become the CM of Karnataka Says MB Patil

ಈ ಸಂಬಂಧ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಗುರುವಾರ ಮಾತನಾಡಿದ ಎಂ.ಬಿ.ಪಾಟೀಲ್, ಪಕ್ಷದ ಈ ಬಾರಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಷ್ಟೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲ. ನಾನು ಸೇರಿದಂತೆ ಇನ್ನು ಹಲವು ನಾಯಕರು ಈ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಪಟ್ಟಿಯಲ್ಲಿದ್ದೇವೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ನ ಸಿಎಂ ಸ್ಥಾನದ ಆಕಾಂಕ್ಷಿಗಳು ಇವರು

ಕಾಂಗ್ರೆಸ್‌ನಿಂದ ಮುಂಖ್ಯಮಂತ್ರಿಗಳ ಪಟ್ಟಿಯಲ್ಲಿ ನಾನು ಒಳಗೊಂಡಂತೆ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣಬೈರೇಗೌಡ ಅವರು ಸಹ ಇದ್ದಾರೆ ಎಂದು ಅವರು ಆಕಾಂಕ್ಷಿಗಳ ಹೆಸರು ಬಹಿರಂಗಪಡಿಸಿದರು.

ಇನ್ನೂ ಕರ್ನಾಟಕದ ಮಟ್ಟಿಗೆ ನೋಡುವುದಾದರೆ, ವಿಪಕ್ಷ ನಾಯಕರಾದ ನಮ್ಮ ಸಿದ್ದರಾಮಯ್ಯನವರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಉನ್ನತ ನಾಯಕರು. ಅವರ ನಂತರ ಸಿಎಂ ಪಟ್ಟಿಯಲ್ಲಿ ನಾವಿದ್ದೇವೆ ಎಂದು ಹೇಳಿದರು.

Karnataka Elections 2023: I Do Aspire To Become the CM of Karnataka Says MB Patil

ಈಗಾಗಲೇ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಹಾಗೂ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಉಭಯ ನಾಯಕರು ತಮ್ ಮಹಾತ್ವಾಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಈದುವರೆಗೆ ಕಾಂಗ್ರೆಸ್‌ ಹೈಕಮಾಂಡ್ ಇಂತವರೇ ಕರ್ನಾಟಕದ ಸಿಎಂ ಅಭ್ಯರ್ಥಿ ಎಂದು ತಿಳಿಸಿಲ್ಲ. ಇದೆಲ್ಲದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ನಿರ್ಧಾರ ಕೈಗೊಳ್ಳುತ್ತಾರೆ. ಅದೇ ಅಂತಿಮ, ಅದೇ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ. ಮುಂದೆಯು ಅದೇ ನಡೆಯುತ್ತದೆ ಎಂದು ತಿಳಿಸಿದರು.

ಎದುರಾಗಿರುವ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯನವರು ಹಾಗೂ ಡಿಕೆ ಶಿವಕುಮಾರ್ ಅವರು ಸೇರಿದಂತೆ ಎಲ್ಲ ನಾಯಕರು ಸಾಮೂಹಿಕವಾಗೇ ಎದುರಿಸುತ್ತೇವೆ. ಕಾಂಗ್ರೆಸ್‌ ಬಹುಮತ ಪಡೆದು ಅಧಿಕಾರಕ್ಕೆ ಬಂದ ನಂತರ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಬಳಿಕ ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಅವರು ವಿವರಿಸಿದರು.

ಕಾಂಗ್ರೆಸ್‌ ಬೆಂಬಲಕ್ಕೆ ಲಿಂಗಾಯತರು; ಭವಿಷ್ಯ

ಲಿಂಗಾಯತರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುತ್ತಾರೆ ಎಂದು ಎಂ.ಬಿ ಪಾಟೀಲ್ ಅವರು ಭವಿಷ್ಯ ನುಡಿದರು. ಜೊತೆಗೆ ಅದಕ್ಕೆ ಕಾರಣ ತಿಳಿಸಿದರು. ಏನೆಂದರೆ, ಆಡಳಿತಾರೂಢ ಬಿಜೆಪಿ ಸರ್ಕಾರ ಜನರಿಗ ಮೋಸ ಮಾಡಿದೆ. ಕೇವಲ ಶೇಕಡಾ ಎರಡರಷ್ಟು ಮಾತ್ರವೇ ಮೀಸಲಾತಿ ಹೆಚ್ಚಳ ಮಾಡಿದೆ.

ಇನ್ನೂ ಮುಖ್ಯವಾಗಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ಆ ಸ್ಥಾನದಿಂದ ಕೆಳಗಿಸಲಾಯಿತು. ಇದು ಸಹ ಲಿಂಗಾಯತ ಸಮುದಾಯಕ್ಕೆ ನೋವುಂಟು ಮಾಡಿದೆ. ಇದೆಲ್ಲ ಕಾರಣದಿಂದ ಲಿಂಗಾಯತರು ಇ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಲಿದ್ದಾರೆ. ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮೋಸವನ್ನು ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬಯಲಿಗೆ ಎಳೆಯಲಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+