Karnataka Elections 2023: ಎಣ್ಣೆಯು ಬಂದ್; ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ಅಂತ್ಯ

ಬೆಂಗಳೂರು,ಮೇ 08: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಇಲ್ಲಿಯವರೆಗೂ ಅಬ್ಬರದ ಚುನಾವಣಾ ಪ್ರಚಾರವನ್ನ ನಡೆಸಿದ್ದು, ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಇಂದು (ಸೋಮವಾರ) ಸಂಜೆ 6 ಗಂಟೆಗೆ ತೆರೆ ಬೀಳಲಿದೆ.

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದೆ. ಇನ್ನೂ ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

Karnataka Elections 2023: Open Campaign Ends Today At 6 Pm In Karnataka

ಅದರಂತೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದಾಗಿದೆ.

ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಿನ್ನೆಲೆ ಬಿಜೆಪಿ ಹೈಕಮಾಂಡ್‌ ನಾಯಕರು ಸೇರಿದಂತೆ ಪ್ರಿಯಾಂಕಾ ಗಾಂಧಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಇಂದು ಬಿರುಸಿನ ಪ್ರಚಾರ ನಡೆಸುವ ಮೂಲಕ ಕೊನೆ ಘಳಿಗೆಯಲ್ಲಿ ಮತದಾರರನ್ನು ಓಲೈಸುವ ಕಸರತ್ತು ನಡೆಸಿದ್ದಾರೆ.

Karnataka Elections 2023: Open Campaign Ends Today At 6 Pm In Karnataka

ಇನ್ನೂ ಚುನಾವಣಾ ಭರಾಟೆಯನ್ನ ಇನ್ನಷ್ಟು ಹೆಚ್ಚಿಸಿದ ಕಾಂಗ್ರೆಸ್‌ ಬಿಜೆಪಿ ಹೈಕಮಾಂಡ್‌ ನಾಯಕರು ಸೇರಿದಂತೆ, ಸ್ಟಾರ್‌ ಪ್ರಚಾರಕರು, ಪಕ್ಷದ ಮುಖಂಡರು ಹಾಗೂ ಸಿನಿಮಾ ನಟ-ನಟಿಯರು ಕ್ಷೇತ್ರವನ್ನು ತೊರೆಯಬೇಕು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಯವರೆಗೆ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಂತಿಮ ಮತಯಾಚನೆಯ ಕಸರತ್ತು ನಡೆಸಲಿದ್ದಾರೆ.

ಸೋಮವಾರ ಸಂಜೆ 6 ಗಂಟೆಯ ಬಳಿಕ ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಏನಾದರೂ ಕಂಡು ಬಂದರೆ ಚುನಾವಣಾ ಆಯೋಗದ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದ್ದಾರೆ. ಅಲ್ಲದೇ ಚುನಾವಣೆಗೆ 48 ಗಂಟೆ ಇರುವಾಗಲೇ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗುತ್ತದೆ.

ಮೇ 10 ರಂದು ವಿಧಾನಸಭಾ ಚುನಾವಣೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದ್ದು, ಸೋಮವಾರ ಸಂಜೆ 6 ಗಂಟೆಯ ಬಳಿಕ ನಿಶ್ಶಬ್ದ ಅವಧಿಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುಂಪು ಗುಂಪಾಗಿ ಓಡಾಡುವಂತಿಲ್ಲ. ಪ್ರತಿ ಕ್ಷೇತ್ರದಲ್ಲಿ ಐದು ಮಂದಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಒಂದು ವೇಳೆ ಐದು ಮಂದಿಗಿಂತ ಹೆಚ್ಚು ಜನ ಒಂದೆಡೆ ಕಂಡು ಬಂದರೆ ನೀತಿ ಸಂಹಿತೆ ಉಲ್ಲಂಘನೆಯಡಿ ಸೂಕ್ತ ಕ್ರಮ ಜರುಗಿಸಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+