ಬಾಗಲಕೋಟೆ: ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂ.ಜಪ್ತಿ, ಐವರು ಪೊಲೀಸ್ ವಶಕ್ಕೆ
ಬೆಂಗಳೂರು, ಏಪ್ರಿಲ್ 29: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ ಘೋಷಣೆ ಆದಾಗಿನಿಂದ ಇದುವರೆಗೆ ಕರ್ನಾಟಕದಲ್ಲಿ ಸಾಕಷ್ಟು ಕಡೆಗಳಲ್ಲಿ ಕೋಟಿಗಟ್ಟಲೇ ನಗದು, ಮದ್ಯ, ಇನ್ನಿತರ ಉಡುಗೊರೆಯ ವಸ್ತುಗಳು ಜಪ್ತಿಯಾಗುತ್ತಿವೆ. ಇದೀಗ ಜಿಲ್ಲೆಯೊಂದರಲ್ಲಿ ಬರೋಬ್ಬರಿ ಐದು ಕೋಟಿ ರೂಪಾಯಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಮಾರ್ಚ್ 29ರಿಂದಲೇ ರಾಜ್ಯದ ಮೂಲೆ ಮೂಲೆಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.

ಅನುಮಾನಾಸ್ಪದ ವಾಹನಗಳು, ವ್ಯಕ್ತಿಗಳು ಕಂಡು ಬಂದರೆ ತಪಾಸಣೆ ಮಾಡಲು ಚೆಕ್ ಪೋಸ್ಟ್ ನಿರ್ಮಿಸಿದ್ದಾರೆ. ಹೀಗೆ ತಪಾಸಣೆ ಮಾಡುವಾಗ ಬಾಗಲಕೋಟೆಯಲ್ಲಿ 5 ಕೋಟಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಶನಿವಾರ ನಡೆಸಿದೆ.
ಚುನಾವಣಾಧಿಕಾರಿಗಳು ಹಾಗೂ ಸಂಬಂಧಿಸಿದ ಸ್ಕ್ವಾಡ್ ತಂಡದ ಸಿಬ್ಬಂದಿ ಮತ್ತು ಪೊಲೀಸರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಷಾನಟ್ಟಿ ಚೆಕ್‌ಪೋನಲ್ಲಿ ಎಂದಿನಂತೆ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೊಲೆರೋ ವಾಹನ ತಪಾಸಣೆ ನಡೆಸಿದಾಗ ಇಷ್ಟೊಂದು ಪ್ರಮಾಣ ಹಣ ಇರುವುದು ಗೊತ್ತಾಗಿದೆ. ಕೂಡಲೇ ಎಲ್ಲ ಹಣ ಜಪ್ತಿ ಮಾಡಿಕೊಂಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
500 ರೂ. ಮುಖಬೆಲೆಯ ಕಂತೆ ಕಂತೆ ನೋಟು
ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಹೋಗುತ್ತಿದ್ದ ಬೊಲೆರೊ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ದಾಖಲೆಯೇ ಇಲ್ಲದೇ 500 ರೂಪಾಯಿ ಮುಖಬೆಲೆಯ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಕಾರಿನಲ್ಲಿ ಐವರನ್ನು ಈ ಬಗ್ಗೆ ವಿಚಾರಿಸಿದಾಗ ದಾಖಲೆ ಒದಗಿಸುವಲ್ಲಿ ಅವರು ವಿಫಲರಾಗಿದ್ದಾರೆ.

ಜಪ್ತಿಯಾಗಿರುವ ಐದು ಕೋಟಿ ರೂಪಾಯಿ ನಗದು ಹಣ ಸದ್ಯ ಯೂನಿಯನ್ ಬ್ಯಾಂಕ್‌ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ, ಕಾರಿನಲ್ಲಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಆ ಐವರ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಇಟ್ಟುಕೊಂಡಿರುವ ಹುಬ್ಬಳ್ಳಿ ಯೂನಿಯನ್ ಬ್ಯಾಂಕ್ ಆ ಐದು ಕೋಟಿ ಹಣವನ್ನು ಮುಧೋಳ ಬ್ಯಾಂಕ್ ಗೆ ಸಾಗಣೆ ಮಾಡಿದೆ.












Click it and Unblock the Notifications