Karnataka New CM: ಸಿದ್ದರಾಮಯ್ಯ ಮುಂದಿನ ಸಿಎಂ, ಅಧಿಕೃತ ಘೋಷಣೆಯಷ್ಟೇ ಬಾಕಿ!? ಖರ್ಗೆ ಜೊತೆಗೆ ಅಂತಿಮ ಮಾತುಕತೆ!

ಬೆಂಗಳೂರು, ಮೇ 15: ಬಿಜೆಪಿಗೆ ಸಡ್ಡು ಹೊಡೆದು ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಜಟಾಪಟಿ ಮುಂದುವರೆದಿದೆ. ಹೈಕಮಾಂಡ್‌ ಅಂಗಳವನ್ನ ತಲುಪಿರುವ ಮುಖ್ಯಮಂತ್ರಿ ವಿಚಾರದಲ್ಲಿ ಹಗ್ಗಜಗ್ಗಾಟ ಮುಂದುವರೆದಿದ್ದು, ಸಿದ್ದರಾಮಯ್ಯ ಪರ ರಾಹುಲ್‌ ಗಾಂಧಿ ಒಲವು ತೋರಿದ್ದಾರೆ ಎನ್ನಲಾಗಿದೆ.

ಬಹುತೇಕ ಆಟಳಿತದ ಅನುಭವವಿರುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿ ಹೈಕಮಾಂಡ್‌ ಆಯ್ಕೆ ಮಾಡಲಿದೆ ಎಂದು ಹೇಳಲಾಗಿದ್ದು, ಮಂಗಳವಾರ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಜೊತೆಗೆ ಅಂತಿಮವಾಗಿ ಚರ್ಚೆ ನಡೆಸಿ ಸಿದ್ದರಾಮಯ್ಯ ಅವರನ್ನ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

next cm siddaramaiah

ಬಹುಮತದಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಇಬ್ಬರು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಈ ಇಬ್ಬರ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡದು ಕುಳಿತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಮೇಲೆ ತೀವ್ರ ಇಬ್ಬರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಒಟ್ನಲಿ ಮುಂದಿನ ಲೋಕಸಭಾ ಚುನಾವಣೆ ಹಿನ್ನಲೆ ಮಂಗಳವಾರ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ್‌ ಖರ್ಗೆ ಚರ್ಚೆ ನಡೆಸಲಿದ್ದು, ಅಂತಿಮವಾಗಿ ಕಾಂಗ್ರೆಸ್ ವರಿಷ್ಠರು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಿದ್ದಾರೆಂದು ಎಂದು ಹೇಳಲಾಗಿದೆ.

ಇನ್ನೂ ಹೈಕಮಾಂಡ್‌ ನಾಯಕರ ಬುಲಾವ್‌ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರಾದ ಕೆ ಜೆ ಜಾರ್ಜ್‌, ಎಂ ಬಿ ಪಾಟೀಲ್‌, ಜಮೀರ್‌ ಅಹಮ್ಮದ್‌ ಹಾಗೂ ಯತೀಂದ್ರ ಸಿದ್ದರಾಮಯ್ಯ ಸಾಥ್‌ ನೀಡಿದ್ದಾರೆ.

next cm siddaramaiah

ದೆಹಲಿಯ ಐಟಿಸಿ ಮೌರ್ಯ ಹೋಟೆಲ್​ನಲ್ಲಿ ಸೋಮವಾರ ರಾತ್ರಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್​ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಈಗಾಗಲೇ 135 ಶಾಸಕರ ಅಭಿಪ್ರಾಯ ಹಾಗೂ ವೀಕ್ಷಕರ ಅಭಿಪ್ರಾಯದ ಮೇರೆಗೆ ಸಿದ್ದರಾಮಯ್ಯ ಪರವಾಗಿ ಬಹುತೇಕ ಶಾಸಕರು ಒಲವು ತೋರಿದ್ದು, ಎಐಸಿಸಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದಾರೆ.

ಬಹುತೇಕ ಶಾಸಕರು ಸಿದ್ದರಾಮಯ್ಯ ಗೆ ಜೈ ಎಂದಿದು, ಬೇಸರಗೊಂಡಿರುವ ಡಿ ಕೆ ಶಿವಕುಮಾರ್‌ ದೆಹಲಿಗೆ ಪ್ರಯಾಣದಿಂದ ದೂರ ಉಳಿದಿದ್ದರು. ಇನ್ನೂ ಕೊನೆಯ ಪ್ರಯತ್ನವಾಗಿ ಸೋನಿಯಾ ಗಾಂಧಿ ಅವರನ್ನ ಭೇಟಿ ಮಾಡಲು ನಿರ್ಧರಿಸಿದ್ದು, ಮಂಗಳವಾರ ಬೆಳಗ್ಗೆ ಡಿ ಕೆ ಶಿವಕುಮಾರ್‌ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ವೈದ್ಯಕೀಯ ತಪಾಸಣೆಗೆ ಒಳಗಾದ ನಂತರ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ಮಂಗಳವಾರ ದೆಹಲಿಗೆ ತೆರಳುತ್ತೇನೆ. ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವುದೇ ನನ್ನ ಮೊದಲ ಆದ್ಯತೆ. ಸೋನಿಯಾ ಗಾಂಧಿ ಶಿಮ್ಲಾದಿಂದ ಮಂಗಳವಾರ ಬರ್ತಾರೆ.

ನಾನು ಕೂಡ ದೆಹಲಿಗೆ ಹೋಗುತ್ತೇನೆ. ಸೋನಿಯಾ ಗಾಂಧಿ ಅವರು ಬರಲಿ ಅಂತಾನೆ ನಾನು ಕಾಯುತ್ತಾ ಇದಿನಿ ಎಂದು ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಡಿ ಕೆ ಶಿವಕುಮಾರ್‌ ಈಗಾಗಲೇ ಅಸಮಾಧಾನಗೊಂಡಿದ್ದು, ಸೋನಿಯಾ ಗಾಂಧಿ ಅವರಿಗೆ ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಪಕ್ಷವನ್ನ ಅಧಿಕಾರಕ್ಕೆ ತಂದಿರುವ ಡಿ ಕೆ ಶಿವಕುಮಾರ್‌ ಕೊನೆಯವರೆಗೂ ಸಿಎಂ ಸ್ಥಾನದ ಕಸರತ್ತನ್ನ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+