ಚನ್ನಪಟ್ಟಣದಲ್ಲಿ ಎಚ್‌ಡಿಕೆ ಕಟ್ಟಿಹಾಕಲು ಕಾಂಗ್ರೆಸ್‌ನಿಂದ ಮೆಗಾ ಪ್ಲಾನ್: ಡಿಕೆಶಿ, ಡಿಕೆ ಸೂರಿ, ಯೋಗೇಶ್ವರ್ ಹೆಸರು ಮುನ್ನೆಲೆಗೆ
ಚನ್ನಪಟ್ಟಣ, ಮಾರ್ಚ್ 27: ಕರ್ನಾಟಕ ಚುನಾವಣೆಯು ( Karnataka Assembly Elections 2023 ) ಮೇ ತಿಂಗಳಲ್ಲಿ ನಡೆಯಲಿದೆ. ಜೆಡಿಎಸ್ ( JDS ) ತನ್ನ ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ( HD Kumaraswamy ) ರಾಮನಗರ ( Ramanagara ) ಜಿಲ್ಲೆಯ ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಆದರೆ, ಕಾಂಗ್ರೆಸ್ ( Congress )ಪಕ್ಷವು ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಚನ್ನಪಟ್ಟಣಕ್ಕೆ ಅಭ್ಯರ್ಥಿಯನ್ನು ಘೋಷಿಸಿಲ್ಲ. ಇದು ಕುತೂಹಲಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ ಪಕ್ಷ ತೊರೆದು ಜೆಡಿಎಸ್ ಸೇರಿದ್ದಾರೆ. ಭಾನುವಾರ ಮೈಸೂರು ನಗರದಲ್ಲಿ ನಡೆದ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭಕ್ಕೂ ಮುನ್ನ ಅವರು ಜೆಡಿಎಸ್ ತೊರೆದಿರುವುದು ಅನೇಕ ಉಹಾಪೋಹಗಳಿಗೆ ನಾಂದಿ ಹಾಡಿದೆ.

ಜೆಡಿಎಸ್ ಸೇರ್ಪಡೆಗೊಂಡ ಬಳಿಕ ಮಾತನಾಡಿರುವ ಪ್ರಸನ್ನ ಗೌಡ ಅವರು ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಬೇಕಿತ್ತು. ಆದರೆ ಮೊದಲನೇ ಪಟ್ಟಿಯಲ್ಲಿ ನನ್ನ ಹೆಸರಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತಿದ್ದೇನೆ. ಕಾಂಗ್ರೆಸ್ ನಾಯಕರಿಗೆ ಸ್ಪಷ್ಟ ನಿಲುವಿಲ್ಲ. ಅವರು ಸುಳ್ಳು ಭರವಸೆ ಹಾಗೂ ಘೋಷಣೆಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಮಾಜಿ ಎಚ್ ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಮೆಚ್ಚಿ ನಾನು ಜೆಡಿಎಸ್ ಸೇರುತ್ತಿದ್ದೇನೆ' ಎಂದಿದ್ದಾರೆ.
ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಗೊಂಡಿದ್ದರಿಂದ ರಾಮನಗರ ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹಿನ್ನೆಡೆಯಾಗಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ. ಆದರೆ, ಚನ್ನಪಟ್ಟಣದ ರಾಜಕೀಯ ವಲಯದಲ್ಲಿ ಕುತೂಹಲಕರ ಚರ್ಚೆಗಳು ಗರಿಗೆದರಿವೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಸೋಲಿಸಲು ಡಿ ಕೆ ಶಿವಕುಮಾರ್ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಒಂದು ಕಡೆ ಡಿಕೆಶಿ ಅವರೇ ಚನ್ನಪಟ್ಟಣದ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇನ್ನೊಂದೆಡೆ ಬಿಜೆಪಿ ಎಂಎಲ್‌ಸಿ ಆಗಿರುವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತಿದೆ. ಆ ಮೂಲಕ ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಅವರನ್ನು ಕಣಕ್ಕಿಳಿಸುವ ತಂತ್ರವನ್ನು ಕಾಂಗ್ರೆಸ್ ರೂಪಿಸಿದೆ ಎನ್ನಲಾಗಿದೆ.

ಒಕ್ಕಲಿಗರ ಪ್ರಾಬಲ್ಯದ ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಈ ಹಿಂದೆ ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಸ್ಥಳೀಯವಾಗಿ ವರ್ಚಸ್ಸನ್ನು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಬಲ ನಾಯಕರೊಬ್ಬರನ್ನು ನಿಲ್ಲಿಸುವುದಕ್ಕೆ ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಒಂದು ವೇಳೆ, ಡಿಕೆಶಿ ಅಥವಾ ಯೋಗೇಶ್ವರ್ ಅವರು ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿದರೆ, ಭಾರೀ ಪೈಪೋಟಿ ಏರ್ಪಡುವುದಂತೂ ಪಕ್ಕಾ ಆಗಿದೆ. ಆ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಕಟ್ಟಿಹಾಕುವುದು ಕಾಂಗ್ರೆಸ್‌ನ ಯತ್ನವಾಗಿದೆ.

ಇನ್ನು ಡಿಕೆಶಿ ಅವರು ಕನಕಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಅಲ್ಲಿ ಅವರಿಗೆ ಯಾವುದೇ ಪ್ರಬಲ ಎದುರಾಳಿಗಳಿಲ್ಲ. ಈಗಾಗಲೇ ಏಳು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆಯಾಗಿರುವ ಡಿಕೆಶಿ ಈ ಬಾರಿಯೂ ಜಯಬೇರಿ ಬಾರಿಸಲಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇನ್ನು ಚನ್ನಪಟ್ಟಣದಿಂದ ಡಿಕೆಶಿ ಸಹೋದರ, ಸಂಸದ ಡಿಕೆ ಸುರೇಶ ಸ್ಪರ್ಧಿಸಿದರೂ ಅಚ್ಚರಿ ಪಡಬೇಕಿಲ್ಲ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications