ಕರ್ನಾಟಕ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಎಐಎಡಿಎಂಕೆ ಸ್ಪರ್ಧೆ

ಬೆಂಗಳೂರು, ಏಪ್ರಿಲ್ 18: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮಿಳಿಗರ ಪ್ರಾಬಲ್ಯವಿರುವ ಎರಡು ಕ್ಷೇತ್ರಗಳಲ್ಲಿ ತನ್ನ ಆಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಡಿಎಂಕೆ(All India Anna Dravida Munnetra Kazhagam) ನಿರ್ಧರಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳಿನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಕೆಜಿಎಫ್(ಮೀಸಲು) ಮತ್ತು ಬೆಂಗಳೂರಿನ ಗಾಂಧಿನಗರ ಕ್ಷೇತ್ರಗಳಲ್ಲಿ ಎಐಎಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಇಂದು(ಏ.18) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Karnataka elections: AIADMK to contest two seats

2013 ರಲ್ಲಿ 5 ಕ್ಷೇತ್ರಗಳಲ್ಲಿ ಎಐಎಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಐದು ಕ್ಷೇತ್ರಗಳಲ್ಲಿ ಈ ಪಕ್ಷದ ಅಭ್ಯರ್ಥಿಗಳು ಪಡೆದ ಒಟ್ಟು ಮತಗಳು ಕೇವಲ 10,208 ಮಾತ್ರ!

ಈ ಬಾರಿಯ ಚುನಾವಣೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ತಿಗಳನ್ನು ಕಣಕ್ಕಿಳಿಸಲು ಮೊದಲು ಎಐಎಡಿಎಂಕೆ ನಿರ್ಧರಿಸಿತ್ತಾದರೂ ನಂತರ ಕೇವಲ ಎರಡೇ ಕ್ಷೇತ್ರಗಳಲ್ಲಿ ನಿಲ್ಲಿಸುವ ತೀರ್ಮಾನ ಕೈಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+