Karnataka Elections: ಚುನಾವಣೆಗೂ ಮುನ್ನ ಸಮಾಜ ವಿರೋಧಿ ಶಕ್ತಿಗಳು, ರೌಡಿ ಶೀಟರ್‌ಗಳ ಗಡಿಪಾರು- ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ?

ಬೆಂಗಳೂರು, ಮಾರ್ಚ್‌ 30: ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಹಲವು ಜಿಲ್ಲೆಗಳಲ್ಲಿನ ಸಮಾಜ ವಿರೋಧಿ ಶಕ್ತಿಗಳು ಹಾಗೂ ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಮತದಾನ ನಡೆಯಲಿದೆ. ಫಲಿತಾಂಶವು ಮೇ 13 ರಂದು ಪ್ರಕಟಗೊಳ್ಳಲಿದೆ.

ಶಿವಮೊಗ್ಗ ಜಿಲ್ಲೆಯಿಂದ 55 ಜನರನ್ನು ಗಡಿಪಾರು ಮಾಡಲಾಗಿದೆ. ಕಳೆದ ಐದಾರು ತಿಂಗಳಲ್ಲಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಿ ಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.

Karnataka Elections: Anti-social elements, history sheeters exiled before polls

'ಇದು ರಾಜ್ಯದಲ್ಲಿಯೇ ಅತ್ಯಧಿಕ ಸಂಖ್ಯೆಯಾಗಿದೆ. ರೌಡಿ ಶೀಟರ್‌ಗಳ ಬಂಧನ ಪೂರ್ಣಗೊಂಡಿದೆ. ಜೈಲಿನಲ್ಲಿರುವ ಅಥವಾ ತಲೆ ಮರೆಸಿಕೊಂಡಿರುವ ಕೆಲವರನ್ನು ಹೊರತುಪಡಿಸಿ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ತಡೆಗಟ್ಟುವ ಕ್ರಮವನ್ನು ಪ್ರಾರಂಭಿಸಲಾಗಿದೆ. ಸುಮಾರು 90 ಪ್ರತಿಶತದಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದವರ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ' ಎಂದು ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೋಲಾರದಲ್ಲಿ ಈಗಾಗಲೇ ಐದು ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು 10 ಮಂದಿ ವಿರುದ್ಧವೂ ಇದೇ ರೀತಿ ಕ್ರಮ ಕೈಗೊಳ್ಳಲು ಸಿದ್ಧತೆ ನಡೆದಿದೆ ಎಂದು ಕೋಲಾರ ಎಸ್ಪಿ ಎಂ.ನಾರಾಯಣ ತಿಳಿಸಿದ್ದಾರೆ.

598 ರೌಡಿ ಶೀಟರ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಎಸ್‌ಪಿ 'ಟಿವಿ9 ಕನ್ನಡ'ಕ್ಕೆ ತಿಳಿಸಿದ್ದಾರೆ. ರೌಡಿ ಶೀಟರ್‌ಗಳಿಗೂ ಸಹ ಬಾಂಡ್‌ಗೆ ಸಹಿ ಹಾಕಲಾಗಿದ್ದು, ಅಕ್ರಮ ಎಸಗಿರುವುದು ಕಂಡುಬಂದರೆ ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುವುದು ಎಂದು ಎಸ್‌ಪಿ ಹೇಳಿದರು.

Karnataka Elections: Anti-social elements, history sheeters exiled before polls

ಮೈಸೂರು ಜಿಲ್ಲೆಯಲ್ಲಿ ಐದು ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ. ಐವರಲ್ಲಿ ಮೂವರನ್ನು ಐದು ತಿಂಗಳ ಕಾಲ ಹೊರಗೆ ಹೋಗುವಂತೆ ಸೂಚಿಸಲಾಗಿದೆ. ಉಳಿದ ಇಬ್ಬರಿಗೆ ನಾಲ್ಕು ತಿಂಗಳ ಕಾಲ ಹೊರಗುಳಿಯುಂತೆ ಆದೇಶಿಸಲಾಗಿದೆ ಎಂದು ಬಾನೋತ್‌ ಹೇಳಿದ್ದಾರೆ.

ಯಾವುದೇ ವ್ಯಕ್ತಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿ ಬೆದರಿಕೆ ಹಾಕಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಾನೋತ್ ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಏಳು ರೌಡಿ ಶೀಟರ್‌ಗಳನ್ನು ಚುನಾವಣೆಗೂ ಮುನ್ನ ಗಡಿಪಾರು ಮಾಡಲಾಗಿದೆ. ಜಿಲ್ಲಾಧಿಕಾರಿ (ಡಿಸಿ) ಎಚ್‌ಎನ್‌ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ. ಪರವಾನಗಿ ಹೊಂದಿದ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಆಯಾ ಪೊಲೀಸ್ ಠಾಣೆಗಳಲ್ಲಿ ಸಲ್ಲಿಸುವಂತೆ ಡಿಸಿ ಸೂಚಿಸಿದ್ದಾರೆ. ಮಡಿಕೇರಿಯಲ್ಲಿ ಇಬ್ಬರು ರೌಡಿ ಶೀಟರ್‌ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ರೌಡಿ ಶೀಟರ್‌ಗಳು ಮತ್ತು ಸಮಾಜ ವಿರೋಧಿ ಶಕ್ತಿಗಳು ಕೆಲವು ರೀತಿಯ ಪ್ರಭಾವವನ್ನು ಹೊಂದಿದ್ದಾರೆ. ಬೆದರಿಕೆ ಮತ್ತು ಭಯದ ಮೂಲಕ ಮತದಾರರಿಗೆ ಸಮಸ್ಯೆಯಾಗುತ್ತಾರೆ ಎಂದು ತಿಳಿದುಬಂದಿದೆ.

ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗ ಗಡಿಪಾರು

ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗ ಎಂದು ಕರೆಯಲ್ಪಡುವ ರೌಡಿ ಶೀಟರ್ ನಾಗರಾಜುಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಬೆಂಗಳೂರಿನಿಂದ ಹೊರಗುಳಿಯುವಂತೆ ಪೊಲೀಸರು ಸೂಚಿಸಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಗಡಿಪಾರು ನಿರ್ದೇಶನ ನೀಡಿದರು. ಟಿವಿ9 ಕನ್ನಡ ಸುದ್ದಿವಾಹಿನಿಯ ಪ್ರಕಾರ, ಚುನಾವಣೆಯ ನಂತರ ಪೊಲೀಸ್ ಮೇಲ್ವಿಚಾರಣೆಯೊಂದಿಗೆ ಮಾತ್ರ ಆತ ನಗರಕ್ಕೆ ಪ್ರವೇಶಿಸಬಹುದು.

ನಾಗರಾಜು ವಿರುದ್ಧ ದರೋಡೆ, ಕೊಲೆ ಸೇರಿದಂತೆ ಅಪರಾಧ ಪ್ರಕರಣಗಳ ದೊಡ್ಡ ಪಟ್ಟಿಯೇ ಇದೆ. ಈತನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 392ರ ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. 2005ರಲ್ಲಿ ಆರ್ ಆರ್ ನಗರ, ಆಡುಗೋಡಿ, ಬನಶಂಕರಿ ಪೊಲೀಸರು ಸರಣಿ ವಾಹನ ಕಳವು ಪ್ರಕರಣಗಳಲ್ಲಿ ಪ್ರಕರಣ ದಾಖಲಿಸಿದ್ದರು.

2009ರಲ್ಲಿ ಕಲಾಸಿಪಾಳ್ಯ ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು. 2012ರಲ್ಲಿ ರೌಡಿಶೀಟರ್ ಗುಪ್ಪಾ ಕೊಲೆ ಪ್ರಕರಣದಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ಇದುವರೆಗೆ 22 ಪ್ರಕರಣಗಳು ದಾಖಲಾಗಿದ್ದು, ಏಳು ಕೊಲೆ ಪ್ರಕರಣಗಳಲ್ಲಿ ಎ1 ಆರೋಪಿಯಾಗಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+