ಬಿಜೆಪಿ 150 ಅಭ್ಯರ್ಥಿಗಳ ಪಟ್ಟಿ ಸೋಮವಾರ ಬಿಡುಗಡೆ

Posted By: Gururaj
Subscribe to Oneindia Kannada

ಬೆಂಗಳೂರು, ಏಪ್ರಿಲ್ 08 : 2018ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆ. ಸೋಮವಾರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಬೆಂಗಳೂರು ಹೊರವಲಯದ ಯಲಹಂಕದಲ್ಲಿ 4 ದಿನಗಳಿಂದ ಟಿಕೆಟ್ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಣೆ ನಡೆಯಿತು. ಶನಿವಾರ ಸಂಜೆ ಸಭೆ ಮುಕ್ತಾಯಗೊಂಡಿದ್ದು, ಪಕ್ಷದ ನಾಯಕರು ಪಟ್ಟಿಯನ್ನು ಹಿಡಿದು ದೆಹಲಿಗೆ ತೆರಳಿದರು.

ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರ ಪಟ್ಟಿ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ ಮುಂತಾದವರು ಶನಿವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ.

Karnataka elections : BJP to release candidates list on Monday

ಭಾನುವಾರ ಬೆಳಗ್ಗೆ ಹೈಕಮಾಂಡ್ ನಾಯಕರ ಜೊತೆ ರಾಜ್ಯ ನಾಯಕರು ಸಭೆ ನಡೆಸಲಿದ್ದಾರೆ. ರಾತ್ರಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸೋಮವಾರ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರದ 24 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

'ಪಕ್ಷ 150 ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಎಲ್ಲಾ ನಾಯಕರ ಗುರಿಯಾಗಿದೆ. ಟಿಕೆಟ್‌ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಣೆ ಮಾಡಲಾಗಿದೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಟ್ಟಿಗೆ ಒಪ್ಪಿಗೆ ಪಡೆಯಲಾಗುತ್ತದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಚುನಾವಣೆ 2018 : ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುತ್ತದೆ. ಕೆಲವು ಕ್ಷೇತ್ರಗಳಲ್ಲಿ ಇಬ್ಬರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕೆಲವು ಕ್ಷೇತ್ರದ ಟಿಕೆಟ್‌ಗೆ 5ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ಬೆಂಗಳೂರಿನಲ್ಲಿ ನಡೆಸ ಸಭೆಯಲ್ಲಿ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP to release 150 candidates list for Karnataka assembly elections 2018 on Monday, April 9. Party Central election committee meeting will be held on Sunday night at New Delhi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ