ಕರ್ನಾಟಕ ಚುನಾವಣೆ : ಶುಕ್ರವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಮೇ 03 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಶುಕ್ರವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈ ಕುರಿತು ಮಾಹಿತಿ ನೀಡಿದರು, 'ಮೇ 4ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ' ಎಂದು ಹೇಳಿದರು.

'ರಾಷ್ಟ್ರೀಯ ಬ್ಯಾಂಕ್‌ಗಳ ಸಾಲ ಮನ್ನಾ ಮಾಡುವುದು ಹಾಗೂ ಭಾಗ್ಯ ಲಕ್ಷ್ಮೀ ಯೋಜನೆಯನ್ನು ಹೆಚ್ಚಿಸುವುದು ಸೇರಿದಂತೆ ವಿವಿಧ ಭರವಸೆಗಳನ್ನು ಪ್ರಣಾಳಿಕೆ ಒಳಗೊಂಡಿರಲಿದೆ' ಎಂದರು.

B.S.Yeddyurappa

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ರೆಡಿಸನ್ ಬ್ಲೂ ಹೋಟೆಲ್‌ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಮಾಜಿ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿಯನ್ನು ಬಿಜೆಪಿ ರಚನೆ ಮಾಡಿತ್ತು. ಪ್ರಣಾಳಿಕೆ ರಚನೆ ಸಮಿತಿಯಲ್ಲಿ 17 ಸದಸ್ಯರಿದ್ದಾರೆ.

ಎಎಪಿ ಪ್ರಣಾಳಿಕೆ ಬಿಡುಗಡೆ : ಆಮ್ ಆದ್ಮಿ ಪಕ್ಷವು ಸಹ ಶುಕ್ರವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. 'ಕರ್ನಾಟಕ ಚರ್ಚೆ' ಎಂಬ ಸಂವಾದದಿಂದ ಲಕ್ಷಾಂತರ ಜನರೊಂದಿಗೆ ವಿವಿಧ ಮಾಧ್ಯಮಗಳ ಮೂಲಕ ಸಂವಾದ ನಡೆಸಿ ಪ್ರಣಾಳಿಕೆಯನ್ನು ಪಕ್ಷವು ತಯಾರಿಸಿದೆ .

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ. ಪಕ್ಷದ ರಾಷ್ಟೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಪಂಕಜ್ ಗುಪ್ತಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+