ಇಂದು ಸಂಜೆ ಕಾಂಗ್ರೆಸ್‌ 110 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ, ಏಪ್ರಿಲ್ 13 : ಕರ್ನಾಟಕದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 110 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ. ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ.

ನವದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೇರಿದಂತೆ ವಿವಿಧ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Karnataka elections : Congress list likely to be announced today evening

ಸಭೆಯ ಬಳಿಕ ಮಾತನಾಡಿದ ಡಾ.ಜಿ.ಪರಮೇಶ್ವರ ಅವರು, 'ಅತಿ ಹೆಚ್ಚು ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಇಂದೇ ಅಂತಿಮವಾಗಲಿದೆ. ಸಂಜೆ ಮತ್ತೊಮ್ಮೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ' ಎಂದು ಹೇಳಿದರು.

ಇಂದು ಬೆಳಗ್ಗೆ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆ ಅಪೂರ್ಣವಾಗಿದ್ದು, ಸಂಜೆ ಮತ್ತೊಮ್ಮೆ ಸಭೆ ನಡೆಯಲಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ, ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬಾರದು. ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಈ ಕುರಿತು ಸಂಜೆ ಅಂತಿಮ ತೀರ್ಮಾನ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 72, ಜೆಡಿಎಸ್ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ 12ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+