ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿಗಳು ಎಷ್ಟು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಮೇ 22 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕರ್ನಾಟಕದಲ್ಲಿ ಮೇ 23ರಂದು ಅಸ್ತಿತ್ವಕ್ಕೆ ಬರಲಿದೆ. ಈಗ ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆ ಆರಂಭವಾಗಿದೆ. ಒಬ್ಬರನ್ನು ಮಾತ್ರ ಡಿಸಿಎಂ ಆಗಿ ನೇಮಕ ಮಾಡಲು ಜೆಡಿಎಸ್ ಬಯಸಿದೆ.

ಸರ್ಕಾರ ರಚನೆಗೆ ಜೆಡಿಎಸ್‌ಗೆ ಬೇಷರತ್ ಬೆಂಬಲ ನೀಡಿರುವ ಕಾಂಗ್ರೆಸ್ ಉಪ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಶಾಸಕರ ಹೆಸರನ್ನು ಸೂಚಿಸಿದೆ. ದಲಿತ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಇಬ್ಬರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಎಂಬುದು ಕಾಂಗ್ರೆಸ್ ಬೇಡಿಕೆ.

ಡಿಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವ ನಾಲ್ವರು ಯಾರು?ಡಿಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವ ನಾಲ್ವರು ಯಾರು?

ಬುಧವಾರ ಸಂಜೆ 4.30ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲಿಂಗಾಯತ ಅಥವ ದಲಿತ ಸಮುದಾಯಕ್ಕೆ ಸೇರಿದ ಒಬ್ಬರನ್ನು ಉಪ ಮುಖ್ಯಮಂತ್ರಿ ಮಾಡೋಣ ಎಂದು ಜೆಡಿಎಸ್ ಹೇಳಿದೆ.

Karnataka elections : Congress may settle for one deputy CM only

ಮೊದಲು ಸ್ಪೀಕರ್ ಪಟ್ಟಕ್ಕಾಗಿ ಜೆಡಿಎಸ್‌ ಬೇಡಿಕೆ ಇಟ್ಟಿತ್ತು. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಭೇಟಿಯ ವೇಳೆ ಸ್ಪೀಕರ್ ಆಯ್ಕೆ ಕುರಿತು ಚರ್ಚೆ ನಡೆದಿದೆ. ನಂತರ ಸ್ಪೀಕರ್ ಪಟ್ಟವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ.

ಯಾರಾಗಲಿದ್ದಾರೆ ಕರ್ನಾಟಕದ ಮುಂದಿನ ಗೃಹ ಸಚಿವ?ಯಾರಾಗಲಿದ್ದಾರೆ ಕರ್ನಾಟಕದ ಮುಂದಿನ ಗೃಹ ಸಚಿವ?

ಮೊದಲು ಎಚ್.ಡಿ.ಕುಮಾರಸ್ವಾಮಿ ಅವರು ಮಾತ್ರ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಈಗ ಕೆಲವು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪ ಮುಖ್ಯಮಂತ್ರಿಯಾಗುವ ಹಿರಿಯ ನಾಯಕರು ಬುಧವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇಂದು ಸಂಜೆ ರೆಸಾರ್ಟ್‌ನಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ಸಭೆ ನಡೆಯಲಿದೆ. ಯಾರು ಪ್ರಮಾಣ ವಚನ ಸ್ವೀಕಾರ ಮಾಡಬೇಕು? ಎಂದು ರಾತ್ರಿ ವೇಳೆಗೆ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಹೆಸರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದ ಪ್ರಬಲ ನಾಯಕ, ಲಿಂಗಾಯತ ಸಮಯದಾಯಕ್ಕೆ ಸೇರಿದ ಎಂ.ಬಿ.ಪಾಟೀಲ ಅವರ ಹೆಸರು ಡಿಸಿಎಂ ಹುದ್ದೆಗೆ ಕೇಳಿಬರುತ್ತಿದೆ.

English summary
It is almost certain that there would be only one deputy to H D Kumaraswamy. The Congress which has been demanding two deputy chief minsters is set to settle for one at least for the time-being. The Congress had proposed the name of a Dalit and Lingayat MLA for the post of two deputy chief ministers. However the JD(S) was opposed to the idea and said that at best one could be accommodated.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X