Karnataka Elections: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ, ಮಾಜಿ ಶಾಸಕ ಹಾಲಪ್ಪ ಬಿಜೆಪಿ ಸೇರ್ಪಡೆ
ಬೆಂಗಳೂರು, ಏಪ್ರಿಲ್ 04: ನೇತ್ರ ತಜ್ಞ, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿಗೌಡ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು. ಅವರ ಸೇರ್ಪಡೆಯಿಂದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಆಶಯವನ್ನು ಕೇಸರಿ ಪಕ್ಷವು ವ್ಯಕ್ತಪಡಿಸಿದೆ. ಒಕ್ಕಲಿಗ ಪ್ರಾಬಲ್ಯದ ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿಗೆ ಭದ್ರ ನೆಲೆಯನ್ನು ಕಂಡುಕೊಳ್ಳಲು ಯತ್ನಿಸುತ್ತಿದೆ.
ಎರಡು ಬಾರಿ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದ ಅಪ್ಪಾಜಿಗೌಡರು, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿಯಲ್ಲಿದ್ದಾರೆ ಎನ್ನಲಾಗಿದೆ.

ಅಪ್ಪಾಜಿಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯನ್ನು ಸೇರ್ಪಡೆಗೊಂಡು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿಷ್ಠಾವಂತ ಮತ್ತು ಹಡಗಲಿ ಮಾಜಿ ಶಾಸಕ ವಿಬಿ ಹಾಲಪ್ಪ (ನಂದಿಹಳ್ಳಿ) ಅವರೂ ಸಹ ಇದೇ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಅಪ್ಪಾಜಿಗೌಡರ ಸೇರ್ಪಡೆಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ಬಲಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಪಂಚಮಸಾಲಿ ಲಿಂಗಾಯತ ಮುಖಂಡ ಹಾಲಪ್ಪ ಅವರನ್ನು ಬಿಜೆಪಿಗೆ ಕರೆತಂದಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಮುದಾಯದ ಮತಗಳನ್ನು ಕ್ರೋಢೀಕರಿಸುವ ದೃಷ್ಟಿಯಿಂದ ಹಾಲಪ್ಪ ಅವರಿಗೆ ರಾಮುಲು ಗಾಳ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಲಪ್ಪ ಅವರು 1999 ರಲ್ಲಿ ಹಡಗಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಹಡಗಲಿ ಕಾಂಗ್ರೆಸ್ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ಅವರ ಪರಮಾಪ್ತರು ಎಂದು ಹೇಳಲಾಗುತ್ತದೆ.

ಹಾಲಪ್ಪ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಶ್ರೀರಾಮುಲು ಅವರು ಎರಡೂ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ ಎಂದು ಹೇಳಿದರು. ಹಾಲಪ್ಪ ಅವರ ಪ್ರವೇಶದಿಂದಾಗಿ ಅವಳಿ ಜಿಲ್ಲೆಗಳಾದ ಬಳ್ಳಾರಿ ಮತ್ತು ವಿಜಯನಗರದಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆಲ್ಲಲಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಇಬ್ಬರು ನಾಯಕರನ್ನು ಸೇರ್ಪಡೆಗೊಂಡ ನಂತರ, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಜನಾದೇಶದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ ಎಂದು ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಬಸವರಾಜ ಬೊಮ್ಮಾಯಿ ಟ್ವೀಟ್
'ಭಾರತೀಯ ಜನತಾ ಪಾರ್ಟಿಯ ಜನಪರ ಆಡಳಿತ ಹಾಗೂ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಪಕ್ಷವನ್ನು ಸೇರ್ಪಡೆಯಾಗುವವರ ಪರ್ವ ಇಂದು ಸಹ ಮುಂದುವರೆದಿದೆ. ಮಾಜಿ ಶಾಸಕರಾದ ಶ್ರೀ ನಂದಿಹಳ್ಳಿ ಹಾಲಪ್ಪ, ಮುಖಂಡರುಗಳಾದ ಶ್ರೀ ಕೃಷ್ಣ ನಾಯ್ಕ, ಶ್ರೀ ಪರಮೇಶ್ವರಪ್ಪ, ಎನ್. ಕೋಟೆಪ್ಪ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ' ಎಂದು ಬೊಮ್ಮಾಯಿ ತಿಳಿಸಿದ್ದಾರೆ.

'ಡಾ. ಅಪ್ಪಾಜಿ ಗೌಡ ಹಾಗೂ ಹಲವು ಮುಖಂಡರು ಇಂದು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಎಲ್ಲರಿಗೂ ಆತ್ಮೀಯವಾದ ಸ್ವಾಗತವನ್ನು ಬಯಸುತ್ತೇನೆ' ಎಂದೂ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ಘಟಕದಿಂದ ಟ್ವೀಟ್
'ಬಿಜೆಪಿ ಸಿದ್ಧಾಂತ, ವಿಚಾರಧಾರೆ ಮತ್ತು ಅಭಿವೃದ್ಧಿಯ ಆಡಳಿತವನ್ನು ಮೆಚ್ಚಿ ಹಲವು ಪ್ರಮುಖರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಅವರ ಸಮ್ಮುಖದಲ್ಲಿ ಇಂದು ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ, ಪ್ರಮುಖರಾದ ಕೃಷ್ಣ ನಾಯ್ಕ, ಪರಮೇಶ್ವರಪ್ಪ' ಎಂದು ಬಿಜೆಪಿ ಟ್ವೀಟಿಸಿದೆ.
'ಎನ್. ಕೋಟೆಪ್ಪ, ಡಾ. ಅಪ್ಪಾಜಿ ಗೌಡ ಮತ್ತು ಹಲವು ಮುಖಂಡರು, ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀರಾಮುಲು, ಸಂಸದರಾದ ದೇವೇಂದ್ರಪ್ಪ ಮತ್ತು ಪ್ರಮುಖರು ಉಪಸ್ಥಿತರಿದ್ದರು' ಎಂದು ಬಿಜೆಪಿ ತಿಳಿಸಿದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು










Click it and Unblock the Notifications