ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ.15 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಾಲಿ ಶಾಸಕರ ಮೇಲುಗೈ?!

|
Google Oneindia Kannada News

Recommended Video

Karnataka Elections 2018 :ಕಾಂಗ್ರೆಸ್ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಏಪ್ರಿಲ್ 15ಕ್ಕೆ ರಿಲೀಸ್ |Oneindia Kannada

ಬೆಂಗಳೂರು, ಮಾರ್ಚ್ 29: ಭಾರತೀಯ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸುತ್ತಿದ್ದಂತೆಯೇ ಎಲ್ಲ ಆಪಕ್ಷಗಳಲ್ಲೂ ಬಿರುಸಿನ ಕಾರ್ಯಚಟುವಟಿಕೆ ಆರಂಭವಾಗಿದೆ. ಹೆಚ್ಚು ಸಮಯವಿಲ್ಲದ ಕಾರಣ ಕಾಂಗ್ರೆಸ್ ಒಂದೇ ಹಂತದಲ್ಲಿ ಎಲ್ಲಾ 224 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

ಈ ಕುರಿತು ಪತ್ರಕರ್ತರೊಂದಿದಗೆ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಏ.15 ರ ಹೊತ್ತಿಗೀಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಎಲ್ಲಾ ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಖಚಿತ!ಎಲ್ಲಾ ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಖಚಿತ!

ಕರ್ನಾಟಕದಲ್ಲಿ ಮೇ 12 ರಂದು ಒಂದೇ ಹಂತದಲ್ಲಿ ಮತದಾನ ನಡೆಯುವುದಾಗಿ ಚುನಾವಣಾ ಆಯೋಗ ಈಗಾಗಲೇ ಘೋಷಿಸಿದೆ. ಮೇ.15 ರಂದು ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಸಿ ಫೋರ್ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲುವಿನ ನಗೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಗೆ ಪ್ರತಿಕ್ಷೇತ್ರವೂ ಮಹತ್ವದ್ದೇ. ಆದ್ದರಿಂದ ಅಭ್ಯರ್ಥಿಗಳ ಆಯ್ಕೆಯ ಸಮಯದಲ್ಲಿ ಅಳೆದು, ತೂಗಿ ಆಯ್ಕೆ ಮಾಡುವ ಅನಿವಾರ್ಯತೆ ಕಾಂಗ್ರೆಸ್ ಮುಂದಿದೆ.

ಏ.15 ರಂದು ಪಟ್ಟಿ ಬಿಡುಗಡೆ

ಏ.15 ರಂದು ಪಟ್ಟಿ ಬಿಡುಗಡೆ

ಏ.9 ಮತ್ತು 10 ರಂದು ಸ್ಕ್ರೀನಿಂಗ್ ಕಮಿಟಿ ಸಭೆಯ ನಂತರ ಕಾಂಗ್ರೆಸ್ ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಂತರ ಏ.15 ಕ್ಕೆ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿ.ಪರಮೇಶ್ವರ್ ಈಗಾಗಲೇ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಪ್ರಣಾಳಿಕೆ ಸಮಿತಿಯೊಂದಿಗೆ ಸಭೆ ನಡೆಸುತ್ತಿದ್ದಾರೆ. ಇದು ಅಭ್ಯರ್ಥಿಗಳ ಆಯ್ಕೆಗೆ ನೆರವಾಗಲಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಸಭೆ

ದೆಹಲಿಯಲ್ಲಿ ಸಭೆ

ಏ.9 10 ರಂದು ದೆಹಲಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ ನಮ್ಮ ತೀರ್ಮಾನಗಳನ್ನು ಸಭೆಯ ಮುಂದಿಡುತ್ತೇವೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯ ಅಂತಿಮ ತೀರ್ಮಾನ ನಡೆಯಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕಳೆದ ತಿಂಗಳಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಚಿಸಿರುವ ಈ ಸ್ಕ್ರೀನಿಂಗ್ ಸಮಿತಿಯಲ್ಲಿ ಕಾಂಗ್ರೆಸ್ ನ ಹಿರಿಯ ಉಖಂಡರಾದ ಮಧುಸೂದನ್ ಮಿಸ್ತ್ರಿ, ಸಂಸದರಾದ ತಮ್ರಧ್ವಜ್ ಸಹು, ಗೌರವ್ ಗೋಗಾಯ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಜಿ ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಅವರಿದ್ದಾರೆ.

ಕಾಂಗ್ರೆಸ್ ನಾಯಕರ 'ಪುತ್ರ ವ್ಯಾಮೋಹ'ಕ್ಕೆ ಬಗ್ಗುವರೇ ರಾಹುಲ್ ಗಾಂಧಿ?!ಕಾಂಗ್ರೆಸ್ ನಾಯಕರ 'ಪುತ್ರ ವ್ಯಾಮೋಹ'ಕ್ಕೆ ಬಗ್ಗುವರೇ ರಾಹುಲ್ ಗಾಂಧಿ?!

40 ಸ್ಟಾರ್ ಕ್ಯಾಂಪೇನರ್ ಗಳು

40 ಸ್ಟಾರ್ ಕ್ಯಾಂಪೇನರ್ ಗಳು

ಅಷ್ಟೇ ಅಲ್ಲದೆ, ಪಕ್ಷ 40 ಕ್ಕೂ ಹೆಚ್ಚು ಸ್ಟಾರ್ ಕ್ಯಾಂಪೇನರ್ ಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲು ಚಿಂತನೆ ನಡೆಸುತ್ತಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ನಟಿ ರಮ್ಯಾ ಅವರಿಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳಿರುವುದರಿಂದ ಅವರನ್ನು ಸ್ಟಾರ್ ಕ್ಯಾಂಪೇನರ್ ರೀತಿಯಲ್ಲಿ ಕಾಂಗ್ರೆಸ್ ಬಳಸಿಕೊಳ್ಳಬಹುದು. ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕನ್ನಡದ ಹಲವು ನಟರು ಕಾಂಗ್ರೆಸ್ ಪರ ಪ್ರಚಾರ ಮಾಡುವ ನಿರೀಕ್ಷೆ ಇದೆ.

ಹಾಲಿ ಶಾಸಕರಿಗೆ ಟಿಕೇಟ್ ಗ್ಯಾರಂಟಿ?!

ಹಾಲಿ ಶಾಸಕರಿಗೆ ಟಿಕೇಟ್ ಗ್ಯಾರಂಟಿ?!

ಹಾಲಿ ಶಾಸಕರಿಗೆ ಈ ಬಾರಿ ಚುನಾವಣೆಯಲ್ಲಿ ಟಿಕೇಟ್ ನೀಡಬೇಕೆಂದು ಈಗಾಗಲೇ ಕರ್ನಾಟಕ ಕಾಂಗ್ರೆಸ್ ಹೈಕಮಾಂಡಿಗೆ ಶಿಫಾರಸು ಮಾಡಿದೆ. ಈ ಕುರಿತು ಶ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ. ಕೇವಲ ಕಾಂಗ್ರೆಸ್ ನ ಹಾಲಿ ಶಾಸಕರಿಗೆ ಮಾತ್ರವಲ್ಲದೆ, ಬಿಜೆಪಿ ಮತ್ತು ಜೆಡಿಎಸ್ ತೊರೆದು, ಅಥವಾ ಪಕ್ಷೇತರ ಶಾಸಕರಾಗಿ ಈಗ ಕಾಂಗ್ರೆಸ್ ಸೇರಿರುವ ಎಲ್ಲಾ ಶಾಸಕರಿಗೂ ಟಿಕೇಟ್ ನೀಡುವಂತೆ ಬೇಡಿಕೆ ಇದೆ. ಆದರೆ ಇದು ಮೂಲ ಕಾಂಗ್ರೆಸ್ಸಿಗರಲ್ಲಿ ಬೇಸರ ಮೂಡಿಸಿದರೆ ಅಚ್ಚರಿಯಿಲ್ಲ. ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ!

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Ahead of the highly anticipated, Karnataka assembly elections 2018 to be conducted on May 12, the ruling Congress in the state has said that it would announce the list of its candidates by April 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X