ಅಕ್ರಮ ತಡೆಯಲು ಚುನಾವಣಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ
ಬೆಂಗಳೂರು, ಏಪ್ರಿಲ್ 17: ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಳಸುವ ವಾಹನಗಳಲ್ಲಿ ಕಡ್ಡಾಯವಾಗಿ ಜಿಪಿಎಸ್(ಗ್ಲೋಬಲ್ ಪೊಸಿಶನಿಂಗ್ ಸಿಸ್ಟೆಂ) ಅಳವಡಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ವಾಹನಗಳಿಗೆ ಜಿಪಿಎಸ್ ಕಡ್ಡಾಯ: ಸಾರಿಗೆ ಇಲಾಖೆ ನಿರಾಸಕ್ತಿ
ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಸುವ ಸಲುವಾಗಿ ಈ ವ್ಯವಸ್ಥೆಯನ್ನು ಪರಿಚಯಿಸಲು ಆಯೋಗ ಸಿದ್ಧತೆ ನಡೆಸಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಮೇ 12 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಕರ್ತವ್ಯದಲ್ಲಿರುವ ವಾಹನಗಳ ಸಂಚಾರವನ್ನು ಟ್ರ್ಯಾಕ್ ಮಾಡಬಲ್ಲ ಜಿಪಿಎಸ್ ಅಳವಡಿಕೆಯಿಂದಾಗಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಬಹುದು ಎಂದು ಆಯೋಗ ಅಭಿಪ್ರಾಯಪಟ್ಟಿದೆ.












Click it and Unblock the Notifications