ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀರಾಮುಲು ವಿರುದ್ಧ ಪ್ರಚಾರ ಮಾಡೋಲ್ಲ ಎಂದ ಕಿಚ್ಚ ಸುದೀಪ್

|
Google Oneindia Kannada News

Recommended Video

ಬಿ ಶ್ರೀರಾಮುಲು ವಿರುದ್ಧ ಪ್ರಚಾರ ಮಾಡುವ ಬಗ್ಗೆ ಸುದೀಪ್ ಹೇಳಿದ್ದೇನು? | Oneindia Kannada

ಬೆಂಗಳೂರು, ಮೇ 05: "ಶ್ರೀರಾಮುಲು ಅವರ ವಿರುದ್ಧ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಾನು ಪ್ರಚಾರ ಮಾಡುತ್ತಿದ್ದೇನೆ ಎಂಬ ಸುದ್ದಿ ಸುಳ್ಳು" ಎಂದು ಕನ್ನಡ ನಟ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ಮಾಡುತ್ತಿರುವ ಸುದೀಪ್, ಬಾದಾಮಿಯಲ್ಲಿಯೂ ಮಾಡುತ್ತಾರೆ. ಇಲ್ಲಿ ಶ್ರೀರಾಮುಲು ವಿರುದ್ಧ ಸುದೀಪ್ ಪ್ರಚಾರ ಮಾಡುತ್ತಾರೆ ಎಂದು ವದಂತಿಗಳು ಹಬ್ಬಿದ್ದವು.

Karnataka Elections: Kichcha Sudeep says, he will not campaign against Sriramulu in Badami

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟಪಡಿಸಿರುವ ನಟ ಸುದೀಪ್, "ನಾನು ಶ್ರೀರಾಮುಲು ಅವರ ವಿರುದ್ಧ ಪ್ರಚಾರ ಮಾಡುತ್ತಿರುವ ಸುದ್ದಿ ಸುಳ್ಳು. ಅವರು ನನಗೆ ಹಲವು ವರ್ಷಗಳಿಂದ ಪರಿಚಿತರು. ಅವರಿಗೆ ನಾನು ಶುಭ ಹಾರೈಸುತ್ತೇನೆ. ಈ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ಕೆಲವು ಚಾನೆಲ್ ಗಳ ಬಗ್ಗೆ ನಾನು ಬೇಸರ ವ್ಯಕ್ತಪಡಿಸುತ್ತೇನೆ. ಇಂಥ ಸುದ್ದಿಗಳನ್ನು ಪ್ರಸಾರ ಮಾಡುವ ಮೊದಲೇ ಸರಿಯಾಗಿ ಖಚಿತ ಪಡಿಸಿಕೊಂಡರೆ ಎಲ್ಲರಿಗೂ ಒಳ್ಳೆಯದು ಅನ್ನಿಸುತ್ತೆ" ಎಂದು ಅವರು ಹೇಳಿದ್ದಾರೆ.

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ತಾರಾ ಪ್ರಚಾರಕರು ಅಖಾಡಕ್ಕಿಳಿದಿದ್ದು ಚುನಾವಣಾ ಕಣಕ್ಕೆ ಹೊಸ ರಂಗು ಬಂದಂತಾಗಿದೆ.

English summary
Karnataka assembly elections 2018: Famous Kannada actor Kichcha Sudeep said, he will not campaign against Sriramulu in Badami in Bagalkot district. Sriramulu is BJP candidate in Badami for assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X