ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಚುನಾವಣಾ ಕಣದಲ್ಲಿರುವ ವಿಧಾನಪರಿಷತ್ ಸದಸ್ಯರ ಪಟ್ಟಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 23 : ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಸಂಸದರು, ವಿಧಾನಪರಿಷತ್ ಸದಸ್ಯರು ಚುನಾವಣಾ ಕಣದಲ್ಲಿದ್ದಾರೆ. ಹಲವು ನಾಯಕರು ವಿಧಾನಪರಿಷತ್‌ನಿಂದ ವಿಧಾನಸಭೆಗೆ ಆಗಮಿಸಲು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ವಿಧಾನಪರಿಷತ್ ಸದಸ್ಯರು ಈ ಬಾರಿಯ ವಿಧಾನಸಭೆ ಚುನಾವಣೆ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಹೆಚ್ಚಿನ ಪರಿಷತ್ ಸದಸ್ಯರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಶಾಸಕರಾಗಲು ಭರ್ಜರಿಯಾಗಿ ಪ್ರಚಾರ ನಡೆಸುತ್ತಿದ್ದಾರೆ.

ಚುನಾವಣೆ ಟಿಕೆಟ್ ಬಯಸಿರುವ ಬಿಬಿಎಂಪಿ ಸದಸ್ಯರುಚುನಾವಣೆ ಟಿಕೆಟ್ ಬಯಸಿರುವ ಬಿಬಿಎಂಪಿ ಸದಸ್ಯರು

ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರು ವಿಧಾನಪರಿಷತ್ ಪ್ರತಿಪಕ್ಷ ನಾಯಕರು. ಬಿಜೆಪಿಯ ಮೂವರು ಪರಿಷತ್ ಸದಸ್ಯರು ವಿಧಾನಸಭೆ ಚುನಾವಣೆ ಕಣದಲ್ಲಿದ್ದಾರೆ.

ಕೊರಟಗೆರೆಯಲ್ಲಿ ಬಾಜಿ ಗೆಲ್ಲುತ್ತಾರಾ ಡಾ. ಪರಮೇಶ್ವರ್ ಜಿ?ಕೊರಟಗೆರೆಯಲ್ಲಿ ಬಾಜಿ ಗೆಲ್ಲುತ್ತಾರಾ ಡಾ. ಪರಮೇಶ್ವರ್ ಜಿ?

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಪರಮೇಶ್ವರ ಅವರು ಸಹ ವಿಧಾನಪರಿಷತ್ ಸದಸ್ಯರು. ಕಣದಲ್ಲಿರುವ ವಿಧಾನ ಪರಿಷತ್ ಸದಸ್ಯರು ಯಾರು? ಎಂಬ ಮಾಹಿತಿ ಇಲ್ಲಿದೆ ನೋಡಿ...

ಡಾ.ಜಿ.ಪರಮೇಶ್ವರ

ಡಾ.ಜಿ.ಪರಮೇಶ್ವರ

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಪರಮೇಶ್ವರ ಅವರು ವಿಧಾನಪರಿಷತ್ ಸದಸ್ಯರು. 2013ರ ಚುನಾವಣೆಯಲ್ಲಿ ಅವರು 54,074 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಳಿಕ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈಶ್ವರಪ್ಪ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಂತಿಮವಾಗಿ ಟಿಕೆಟ್ ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ. 2013ರ ಚುನಾವಣೆಯಲ್ಲಿಯೂ ಅವರು ಶಿವಮೊಗ್ಗ ನಗರದಿಂದ ಸ್ಪರ್ಧಿಸಿದ್ದರು. 33,462 ಮತಗಳನ್ನು ಪಡೆದು ಸೋಲು ಕಂಡಿದ್ದರು.

ವಿ.ಸೋಮಣ್ಣ

ವಿ.ಸೋಮಣ್ಣ

ವಿಧಾನಪರಿಷತ್ ಸದಸ್ಯ, ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ವಿ.ಸೋಮಣ್ಣ ಅವರು ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಆದರೆ, ಸ್ಥಳೀಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಬೆಂಗಳೂರು ನಗರದಲ್ಲಿ ಅವರು ಟಿಕೆಟ್ ಪಡೆದಿದ್ದಾರೆ.

ಸಿ.ಆರ್.ಮನೋಹರ್

ಸಿ.ಆರ್.ಮನೋಹರ್

ವಿಧಾನಪರಿಷತ್ ಸದಸ್ಯ, ಚಿತ್ರ ನಿರ್ಮಾಪಕ ಸಿ.ಆರ್.ಮನೋಹರ್ ಅವರು ಬಾಗೇಪಲ್ಲಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ ನಾಯಕರಾಗಿರುವ ಸಿ.ಆರ್.ಮಹೋಹರ್ ಅವರು ಸೋಮವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್

ಬಸನಗೌಡ ಪಾಟೀಲ್ ಯತ್ನಾಳ್

ವಿಧಾನಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಮೊದಲು ಬಿಜೆಪಿಯಲ್ಲಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಜವಳಿ ಖಾತೆ ಸಚಿವರಾಗಿದ್ದರು. ನಂತರದ ಬೆಳವಣಿಗೆಗಳಿಂದ ಪಕ್ಷ ತೊರೆದು ಜೆಡಿಎಸ್ ಸೇರಿದ್ದರು.


2013ರ ಚುನಾವಣೆ ನಂತರ ಯತ್ನಾಳ್ ಬಿಜೆಪಿಗೆ ಮರಳಿದ್ದರು. ಆದರೆ, 2015ರಲ್ಲಿ ನಡೆದ ವಿಜಯಪುರ-ಬಾಗಲಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಎಚ್.ಎಂ.ರೇವಣ್ಣ

ಎಚ್.ಎಂ.ರೇವಣ್ಣ

ಸಾರಿಗೆ ಸಚಿವ, ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರು ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್‌ನಿಂದ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ ಅವರು ಎಚ್.ಎಂ.ರೇವಣ್ಣ ಅವರ ಎದುರಾಳಿಗಳು.

ಶ್ರೀನಿವಾಸ ಮಾನೆ

ಶ್ರೀನಿವಾಸ ಮಾನೆ

ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಶ್ರೀನಿವಾಸ ಮಾನೆ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಿಂದ ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಎಂ.ಡಿ.ಲಕ್ಷ್ಮೀ ನಾರಾಯಣ ಸ್ಪರ್ಧೆ

ಎಂ.ಡಿ.ಲಕ್ಷ್ಮೀ ನಾರಾಯಣ ಸ್ಪರ್ಧೆ

ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯ, ಕೆಪಿಸಿಸಿ ಹಿಂದುಳಿದ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು.

ಮೋಟಮ್ಮ ಸ್ಪರ್ಧೆ

ಮೋಟಮ್ಮ ಸ್ಪರ್ಧೆ

ಮಾಜಿ ಸಚಿವೆ, ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ.

English summary
All party announced candidates list for Karnataka assembly elections 2018. Few Legislative council members form all the party contesting for elections. Here are the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X