ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋದ ಬಿಜೆಪಿ ಸಚಿವರು!
ಬೆಂಗಳೂರು, ಮೇ 13; ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋಗಿರುವ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ.
ಶನಿವಾರ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಕರ್ನಾಟಕದ ಆಡಳಿತ ಪಕ್ಷ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಮತ್ತೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದ್ದ ಪಕ್ಷಕ್ಕೆ ಈ ಸೋಲು ಆಘಾತ ತಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯ ಶಿಗ್ಗಾವಿಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಅವರ ಸಂಪುಟದ ಸಚಿವರು ಸಾಲು ಸಾಲು ಸೋಲು ಕಂಡಿದ್ದಾರೆ. ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಬಿ. ಶ್ರೀರಾಮುಲು ಸೋತ ಪ್ರಮುಖ ಸಚಿವರು.
ಸೋತ ಸಚಿವರ ಪಟ್ಟಿ ಹೀಗಿದೆ; ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ವಿರುದ್ಧ ಸೋಲು ಕಂಡಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ. ನಾಗೇಂದ್ರ ವಿರುದ್ಧ ಸಾರಿಗೆ ಸಚಿವ ಬಿ. ಶ್ರೀರಾಮುಲು ಸೋತಿದ್ದಾರೆ.
ಕನಕಪುರ ಕ್ಷೇತ್ರದಲ್ಲಿ ಡಿ. ಕೆ. ಶಿವಕುಮಾರ್ ವಿರುದ್ಧ ಕಣಕ್ಕಿಳಿದಿದ್ದ ಕಂದಾಯ ಸಚಿವ ಆರ್. ಅಶೋಕ ಸೋಲು ಕಂಡಿದ್ದಾರೆ. ಆದರೆ ಬೆಂಗಳೂರಿನ ಪದ್ಮನಾಭನಗರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ.
ವಸತಿ ಸಚಿವ ವಿ. ಸೋಮಣ್ಣ ಚಾಮರಾಜನಗರದಲ್ಲಿ ಕಾಂಗ್ರೆಸ್‌ನ ಪುಟ್ಟರಂಗ ಶೆಟ್ಟಿ ವಿರುದ್ಧ ಮತ್ತು ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಲು ಕಂಡಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಬಿಜೆಪಿಯ ಜೆ. ಸಿ. ಮಾಧುಸ್ವಾಮಿ ಜೆಡಿಎಸ್‌ನ ಸುರೇಶ್ ಬಾಬು ವಿರುದ್ಧ ಸೋಲು ಕಂಡರು.
ಮುಧೋಳ ಕ್ಷೇತ್ರದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನ ಆರ್. ಬಿ. ತಿಮ್ಮಾಪುರ ಗೆಲುವು ಸಾಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದಲ್ಲಿ ಕೈಗಾರಿಕಾ ಸಚಿವ ಮರುಗೇಶ್ ನಿರಾಣಿ ಸೋಲು ಕಂಡರು. ಕಾಂಗ್ರೆಸ್ ಜಗದೀಶ್ ಪಾಟೀಲ್ ಗೆಲುವು ಕಂಡರು.
ಮಂಡ್ಯದ ಕೆಆರ್ ಪೇಟೆ ಕ್ಷೇತ್ರದಲ್ಲಿ ಕ್ರೀಡಾ ಸಚಿವ ಡಾ. ನಾರಾಯಣಗೌಡ ಸೋಲು ಕಂಡಿದ್ದಾರೆ.
ಹೊಸಕೋಟೆ ಕ್ಷೇತ್ರದಲ್ಲಿ ಸಚಿವ ಎಂಟಿಬಿ ನಾಗರಾಜ್ ಕಾಂಗ್ರೆಸ್‌ನ ಶರತ್ ಬಚ್ಚೇಗೌಡ ವಿರುದ್ಧ ಸೋಲು ಕಂಡರು.












Click it and Unblock the Notifications