ಮೇ 1ರಿಂದ ಮೋದಿ ರಾಜ್ಯ ಪ್ರವಾಸ, ಎಲ್ಲೆಲ್ಲಿ ಪ್ರಚಾರ?

ಬೆಂಗಳೂರು, ಏಪ್ರಿಲ್ 30 : ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರ ಮಂಗಳವಾರದಿಂದ ಕಾವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 1 ರಿಂದ 8 ರ ತನಕ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ಅವರು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಉಡುಪಿ, ಬೆಳಗಾವಿ, ಚಾಮರಾಜನಗರ ಜಿಲ್ಲೆಗಳಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

In Pics:ವಿಜಯಪುರದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

ಮೇ 1ರಿಂದ 8 ರ ತನಕ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೇ 3, ಮೇ 5, ಮೇ 7, ಮೇ 8ರಂದು ಮೋದಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ನಾಯಕರು ಮೂರು ತಂಡಗಳಲ್ಲಿ ಮೇ 1ರಿಂದ ರಾಜ್ಯ ಪ್ರವಾಸ ಮಾಡಲಿದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರಚಾರವನ್ನು ಮಾಡಲಿದ್ದಾರೆ.

 ಚಾಮರಾಜನಗರಕ್ಕೆ ಆಗಮನ

ಚಾಮರಾಜನಗರಕ್ಕೆ ಆಗಮನ

ಮೇ 1ರಂದು ನರೇಂದ್ರ ಮೋದಿ ಅವರು ಬೆಳಗ್ಗೆ 11ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ಉಡುಪಿ, ಭಟ್ಕಳ, ಕುಮಟಾ, ಕಾರವಾರ ಕ್ಷೇತ್ರಗಳ ವ್ಯಾಪ್ತಿಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಚಿಕ್ಕೋಡಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

ಕಲಬುರಗಿ, ಕೊಪ್ಪಳ

ಕಲಬುರಗಿ, ಕೊಪ್ಪಳ

ಮೇ 3ರಂದು ಬೆಳಗ್ಗೆ 11 ಗಂಟೆಗೆ ಮೋದಿ ಕಲಬುರಗಿಗೆ ಆಗಮಿಸಲಿದ್ದಾರೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಬಳ್ಳಾರಿಯಲ್ಲಿ ಬಳ್ಳಾರಿ, ಕೊಪ್ಪಳ ವ್ಯಾಪ್ತಿಯ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಆರು ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು

ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು

ಮೇ 5ರಂದು ಬೆಳಗ್ಗೆ 11 ಗಂಟೆಗೆ ತುಮಕೂರಿಗೆ ಮೋದಿ ಆಗಮಿಸಲಿದ್ದಾರೆ. ತುಮಕೂರು, ನೆಲಮಂಗಲ, ಹಾಸನ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿ.

ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ, ಚಿಕ್ಕಮಗಳೂರು, ಶಿರಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿ. ಸಂಜೆ 4 ಗಂಟೆಗೆ ಗದಗದಲ್ಲಿ ಗದಗ, ಧಾರವಾಡ, ಹಾವೇರಿ ಜಿಲ್ಲಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿ.

ರಾಯಚೂರು, ಚಿತ್ರದುರ್ಗ

ರಾಯಚೂರು, ಚಿತ್ರದುರ್ಗ

ಮೇ 7ರಂದು ಬೆಳಗ್ಗೆ 11 ಗಂಟೆಗೆ ಮೋದಿ ರಾಯಚೂರಿಗೆ ಆಗಮಿಸಲಿದ್ದಾರೆ. ರಾಯಚೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿ.

ಸಂಜೆ 6 ಗಂಟೆಗೆ ಕೋಲಾರದಲ್ಲಿ ನಡೆಯುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ವ್ಯಾಪ್ತಿಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯಪುರ, ಬಾಗಲಕೋಟೆ

ವಿಜಯಪುರ, ಬಾಗಲಕೋಟೆ

ಮೇ 8ರಂದು ಬೆಳಗ್ಗೆ 11 ಗಂಟೆಗೆ ವಿಜಯಪುರಕ್ಕೆ ಮೋದಿ ಆಗಮಿಸಲಿದ್ದಾರೆ. ವಿಜಯಪುರ, ಬಾಗಲಕೋಟೆ ಜಿಲ್ಲೆಯ ಸಮಾವೇಶದಲ್ಲಿ ಭಾಗಿ.

ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಮಂಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿ. ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+