Karnataka Elections: 'ಮೋದಿ ಉಪನಾಮ' ವಿವಾದ ಹುಟ್ಟುಹಾಕಿದ ಕೋಲಾರಕ್ಕೆ ರಾಹುಲ್‌- ಕುತೂಹಲ ಕೆರಳಿಸಿದ ಕಾಂಗ್ರೆಸ್‌ ನಡೆ

ನವದೆಹಲಿ, ಏಪ್ರಿಲ್ 7: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮುನ್ನ, ಕಾಂಗ್ರೆಸ್ ( Congress ) ನಾಯಕ ರಾಹುಲ್ ಗಾಂಧಿ ( Rahul Gandhi ) ಅವರು ಏಪ್ರಿಲ್ 10 ರಂದು ಕರ್ನಾಟಕದ ಕೋಲಾರದಲ್ಲಿ ರ‌್ಯಾಲಿ ನಡೆಸಲಿದ್ದಾರೆ.

ಕೋಲಾರದ ರ‌್ಯಾಲಿ ಮುಗಿದ ಒಂದು ದಿನದ ನಂತರ ಅವರು ( ಏಪ್ರಿಲ್ 11 ರಂದು ) ಕೇರಳದ ವಯನಾಡ್‌ಗೆ ಭೇಟಿ ನೀಡಲಿದ್ದಾರೆ. ವಯನಾಡು ರಾಹುಲ್‌ ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ಲೋಕಸಭಾ ಕ್ಷೇತ್ರವಾಗಿದೆ.

Karnataka Elections: Rahul Gandhi to address poll rally in Karnatakas Kolar on April 10

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಮೊನ್ನೆ ಸೋಮವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಹಲವು ಹಿರಿಯ ನಾಯಕರೊಂದಿಗೆ ಗುಜರಾತ್ ನ್ಯಾಯಾಲಯಕ್ಕೆ ಭೇಟಿ ನೀಡಿದ್ದರು. ಮಾರ್ಚ್ 23 ರಂದು ಅವರು 'ಮೋದಿ ಉಪನಾಮ' ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಇದರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದಕ್ಕೆ ಶಿಕ್ಷೆಯನ್ನೂ ನೀಡಲಾಗಿತ್ತು. ಈ ತೀರ್ಪಿನ ವಿರುದ್ಧ ರಾಹುಲ್‌ ಗಾಂಧಿ ಮೇಲ್ಮನವಿ ಸಲ್ಲಿಸಲು ಗುಜರಾತ್‌ಗೆ ತೆರಳಿದ್ದರು. ಅವರೀಗ ಜಾಮೀನನ ಮೇಲೆ ಹೊರಗಿದ್ದಾರೆ.

ಅವರ ಜೊತೆಯಲ್ಲಿ ಅವರ ಸಹೋದರಿ ಹಾಗೂ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಇದ್ದರು. ಅವರ ಜೊತೆಗೆ ರಾಜಸ್ಥಾನ, ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳೂ ನ್ಯಾಯಾಲಯಕ್ಕೆ ಬಂದಿದ್ದರು.

Karnataka Elections: Rahul Gandhi to address poll rally in Karnatakas Kolar on April 10

ಗುಜರಾತಿನ ಸೂರತ್‌ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸಲ್ಲಿಸಿದ ಮೇಲ್ಮನವಿ ಇತ್ಯರ್ಥವಾಗುವವರೆಗೆ ಜಾಮೀನು ನೀಡಿದೆ.

ವಯನಾಡ್‌ನ ಮಾಜಿ ಸಂಸದರು ಆಗಿರುವ ರಾಹುಲ್‌ ಗಾಂಧಿ ಅವರು ಕರ್ನಾಟಕ ಕೋಲಾರದಲ್ಲಿ 2019 ರಲ್ಲಿ ಮಾರ್ಚ್‌ 23 ರಂದು ಭಾಷಣ ಮಾಡಿದ್ದರು. ವಂಚಕರಾದ ಲಲಿತ್‌ ಮೋದಿ ಹಾಗೂ ನೀರವ್‌ ಮೋದಿ ವಿರುದ್ಧ ಹರಿಹಾಯ್ದಿದ್ದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದರು. ಎಲ್ಲಾ ಕಳ್ಳರು 'ಮೋದಿ ಉಪನಾಮ'ವನ್ನು ಹೇಗೆ ಹೊಂದಿರುತ್ತಾರೆ ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆದಿತ್ತು. ಮಾರ್ಚ್ 23 ರಂದು ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಹೆಚ್ ಹೆಚ್ ವರ್ಮಾ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ಪರಿಗಣಿಸಿತ್ತು. ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

Karnataka Elections: Rahul Gandhi to address poll rally in Karnatakas Kolar on April 10

ಮಾರ್ಚ್ 24 ರಂದು ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು. ಈ ತೀರ್ಪಿನ ಪ್ರಕಾರ, ಯಾವುದೇ ಸಂಸದರು ಅಥವಾ ಶಾಸಕರು ತಪ್ಪಿತಸ್ಥರೆಂದು ಸಾಬೀತಾದರೆ ಮತ್ತು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಕಾಲ ಶಿಕ್ಷೆಯಾದರೆ ಅನರ್ಹರಾಗುತ್ತಾರೆ.

42 ಅಭ್ಯರ್ಥಿಗಳ ಎರಡನೇ ಪಟ್ಟಿ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್‌ನಿಂದ ಪಕ್ಷಾಂತರಗೊಂಡ ಕೆಲವು ಅಭ್ಯರ್ಥಿಗಳಿಗೆ ಪಕ್ಷವು ಅವಕಾಶ ಕಲ್ಪಿಸಿದೆ.

ಪಟ್ಟಿಯ ಪ್ರಕಾರ, ಮೇ 10 ರಂದು ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಕೆಲವು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಪಕ್ಷವು ಅವಕಾಶ ನೀಡಿದೆ. ಯಾದಗಿರಿ ಜಿಲ್ಲೆಯ ಗುರುಮಿಟ್‌ಕಲ್‌ ಕ್ಷೇತ್ರದಿಂದ ಬಾಬುರಾವ್ ಚಿಂಚನಸೂರ್ ನಾಮನಿರ್ದೇಶನಗೊಂಡಿದ್ದಾರೆ. ಇತ್ತೀಚೆಗಷ್ಟೇ ಪಕ್ಷ ತೊರೆದಿರುವ ಬಿಜೆಪಿಯ ಮಾಜಿ ಎಂಎಲ್‌ಸಿ ಐದು ಬಾರಿ ವಿಧಾನಸಭೆ ಸದಸ್ಯರಾಗಿದ್ದರು. ಈ ಹಿಂದೆ ಎರಡು ಬಾರಿ ಬಿಜೆಪಿ ಎಂಎಲ್‌ಸಿಯಾಗಿ ಜಿಲ್ಲೆಯನ್ನು ಪ್ರತಿನಿಧಿಸಿದ್ದರೂ, ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ 2018 ರಲ್ಲಿ ಅದೇ ಜಿಲ್ಲೆಯಲ್ಲಿ ಸೋತರು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಎಸ್‌ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿರುವ ಮತ್ತೊಬ್ಬ ಬಿಜೆಪಿ ಮಾಜಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಲವೇ ದಿನಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಕೆ.ಸಿ.ವೀರೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಎರಡನೇ ಪಟ್ಟಿಯಲ್ಲಿ ಯಾದಗಿರಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ಅವರ ನಿಕಟವರ್ತಿ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಟಿಕೆಟ್ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+